AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂಗಳ್ಳರಿಂದ ಮಳವಳ್ಳಿ ಶಾಸಕರಿಗೆ ಜೀವ ಬೆದರಿಕೆ: ಕೆಡಿಪಿ ಸಭೆಯಲ್ಲೇ ನರೇಂದ್ರಸ್ವಾಮಿ ಆತಂಕ

ಕರ್ನಾಟಕದಲ್ಲಿ ಕಾನೂನು ವ್ಯವಸ್ಥೆ ಕುರಿತು ನಾನಾ ರೀತಿಯ ಆಯಾಮಗಳಲ್ಲಿ ಚರ್ಚೆಯಾಗುತ್ತಿದೆ. ರಾಜ್ಯದಲ್ಲ ಕಾನೂನು ಉವ್ಯವಸ್ಥೆ ಕುಸಿದೆ ಎಂದು ವಿಪಕ್ಷ ಬಿಜೆಪಿ ಟೀಕಿಸುತ್ತಲೇ ಇದೆ. ಇದಕ್ಕೆ ಪೂರಕವೆಂಬಂತೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎನ್ನುವ ಆರೋಪ ಸತ್ಯ ಎನ್ನಿಸಿಸುತ್ತಿದೆ. ಯಾಕಂದ್ರೆ, ಹಾಲಿ ಕಾಂಗ್ರೆಸ್ ಶಾಸಕರಿಬ್ಬರಿಗೆ ಭೂಗಳ್ಳರು ಅವಾಜ್ ಹಾಕಿದ್ದಾರೆ. ಈ ಬಗ್ಗೆ ಸ್ವತಃ ಶಾಸಕರೇ ಕೆಡಿಪಿ ಸಭೆಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಭೂಗಳ್ಳರಿಂದ ಮಳವಳ್ಳಿ ಶಾಸಕರಿಗೆ ಜೀವ ಬೆದರಿಕೆ: ಕೆಡಿಪಿ ಸಭೆಯಲ್ಲೇ ನರೇಂದ್ರಸ್ವಾಮಿ ಆತಂಕ
Narendra Swamy
ದಿಲೀಪ್​, ಚೌಡಹಳ್ಳಿ
| Updated By: ರಮೇಶ್ ಬಿ. ಜವಳಗೇರಾ|

Updated on: Aug 03, 2025 | 4:50 PM

Share

ಮಂಡ್ಯ, (ಆಗಸ್ಟ್ 03): ಸಕ್ಕರೆನಾಡು ಮಂಡ್ಯ ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳ ಸಂಬಂಧ ಕೆಡಿಪಿ ಸಭೆ (Mandya KDP Meeting) ನಡೆಯಿತು. ಈ ಸಭೆಯಲ್ಲಿ ಪಾಲ್ಗೊಂಡಿದ್ದ ಮಳವಳ್ಳಿ ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರಸ್ವಾಮಿ (PM Narendraswamy) ಗಂಭೀರ ವಿಚಾರವೊಂದನ್ನ ಪ್ರಸ್ತಾಪಿಸಿದ್ದಾರೆ. ಇತ್ತೀಚೆಗೆ ಶಾಸಕ ನರೇಂದ್ರಸ್ವಾಮಿ ತಮ್ಮ ಸ್ವಕ್ಷೇತ್ರ ಮಳವಳ್ಳಿ ತಾಲೂಕಿನಲ್ಲಿ ನಡೆದಿರುವ ಭೂಗಳ್ಳತನದ ವಿರುದ್ಧ ಧ್ವನಿ ಎತ್ತಿದ್ರು. ಮಳವಳ್ಳಿ ತಾಲೂಕು ಒಂದರಲ್ಲೇ 2,500 ಎಕರೆಗೂ ಹೆಚ್ಚಿನ ಸರ್ಕಾರಿ ಆಸ್ತಿಯನ್ನ ಭೂಗಳ್ಳರು ಕಬಳಿಸಿದ್ದಾರೆ ಎಂದು ಆರೋಪಿಸಿದ್ದರು. ಇದೇ ವಿಚಾರವಾಗಿ ಮಂಡ್ಯದ ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಶಾಸಕರು, ತಮಗೆ ಭೂಗಳ್ಳರಿಂದ ಜೀವ ಬೆದರಿಕೆ ಬಗ್ಗೆ ಪ್ರಸ್ತಾಪಿಸಿ ಆತಂಕ ಹೊರಹಾಕಿದ್ದಾರೆ.

ಇತ್ತೀಚೆಗೆ ಶಾಸಕ ನರೇಂದ್ರಸ್ವಾಮಿ ತಮ್ಮ ಸ್ವಕ್ಷೇತ್ರ ಮಳವಳ್ಳಿ ತಾಲೂಕಿನಲ್ಲಿ ನಡೆದಿರುವ ಭೂಗಳ್ಳತನದ ವಿರುದ್ಧ ಧ್ವನಿ ಎತ್ತಿದ್ರು. ಮಳವಳ್ಳಿ ತಾಲೂಕು ಒಂದರಲ್ಲೇ 2,500 ಎಕರೆಗೂ ಹೆಚ್ಚಿನ ಸರ್ಕಾರಿ ಆಸ್ತಿಯನ್ನ ಭೂಗಳ್ಳರು ಕಬಳಿಸಿದ್ದಾರೆ ಅಂತಾ ಆರೋಪಿಸಿದ್ರು. ಈ ಬಗ್ಗೆ ಸದನದಲ್ಲೂ ಚರ್ಚಿಸಿದ ಪರಿಣಾಮ ಸರ್ಕಾರ ತನಿಖಾ ತಂಡ ಕೂಡ ರಚಿಸಿತ್ತು. ತನಿಖಾ ತಂಡದ ವರದಿ ಆಧರಿಸಿ, ಭೂಗಳ್ಳರ ಪಾಲಾಗಿದ್ದ ಸುಮಾರು 800 ಎಕರೆ ಸರ್ಕಾರಿ ಭೂಮಿ ಮತ್ತೆ ಸರ್ಕಾರದ ವಶಕ್ಕೆ ಸೇರಿದೆ. ಇದು ಭೂಗಳ್ಳರ ಆಕ್ರೋಶಕ್ಕೆ ಕಾರಣವಾಗಿದ್ದು, ಶಾಸಕ ನರೇಂದ್ರಸ್ವಾಮಿ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರಂತೆ. ಈ ವಿಚಾರವನ್ನ ಸಚಿವ, ಶಾಸಕರು, ಅಧಿಕಾರಿಗಳ ಸಮ್ಮುಖದಲ್ಲೇ ಪ್ರಸ್ತಾಪಿಸಿದ್ದಾರೆ.

ಇನ್ನ ಶಾಸಕ ಪಿ.ಎಂ.ನರೇಂದ್ರಸ್ವಾಮಿಗೆ ಬೆದರಿಕೆ ಇರುವ ಬಗ್ಗೆ ಸ್ವತಃ ಶಾಸಕರು ಸಭೆಯಲ್ಲಿ ಇಂಚಿಂಚೂ ಮಾಹಿತಿ ಬಿಚ್ಚಿಟ್ಟಿದ್ದಾರೆ. ಈಗಾಗಲೇ ಮಂಡ್ಯದಲ್ಲಿ ಭೂಗಳ್ಳರ ಬಗ್ಗೆ ಸಾಕಷ್ಟು ಆರೋಪಗಳಿವೆ. ಈ ನಡುವೆ ಶಾಸಕರಿಗೆ ಜೀವ ಬೆದರಿಕೆ ಹಾಕುವಷ್ಟು ಹಂತಕ್ಕೆ ತಲುಪಿದೆಯಾ ಎಂಬ ಚರ್ಚೆ ಶುರುವಾಗಿದೆ. ಸಮಯ ಬಂದಾಗ ದಾಖಲೆ ಬಿಡುಗಡೆ ಮಾಡುವುದಾಗಿ ನರೇಂದ್ರಸ್ವಾಮಿ ಹೇಳಿಕೆ ನೀಡಿದ್ದು, ಇದು ಮುಂದೆ ಯಾವ ಹಂತ ತಲುಪಲಿದೆ ಕಾದು ನೋಡಬೇಕಿದೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ