ಪಹಲ್ಗಾಮ್ ದಾಳಿ ಬಗ್ಗೆ ವಿವಾದಾತ್ಮಕ ಹೇಳಿಕೆ: ಕೊನೆಗೂ ಕ್ಷಮೆಯಾಚಿಸಿದ ಕರ್ನಾಟಕ ಕೈ ಶಾಸಕ

ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್​ 370 ತೆಗೆದಿದ್ದೇ ಪಹಲ್ಗಾಮ್ ನರಮೇಧಕ್ಕೆ ಕಾರಣ ಎಂದು ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿವದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆ ಭಾರೀ ವಿವಾದದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ರಮೇಶ್ ಬಂಡಿಸಿದ್ದೇಗೌಡ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗಿದ್ದು, ತಮ್ಮ ಹೇಳಿಕೆಯನ್ನು ವಾಪಸ್ ಪಡೆದುಕೊಂಡಿದ್ದಾರೆ.

ಪಹಲ್ಗಾಮ್ ದಾಳಿ ಬಗ್ಗೆ ವಿವಾದಾತ್ಮಕ ಹೇಳಿಕೆ: ಕೊನೆಗೂ ಕ್ಷಮೆಯಾಚಿಸಿದ ಕರ್ನಾಟಕ ಕೈ ಶಾಸಕ
Ramesh Bandisiddegowda
Updated By: ರಮೇಶ್ ಬಿ. ಜವಳಗೇರಾ

Updated on: Apr 25, 2025 | 2:37 PM

ಮಂಡ್ಯ, (ಏಪ್ರಿಲ್ 25): ಜಮ್ಮು ಮತ್ತು ಕಾಶ್ಮೀರದ (Jammu And Kashmir) ಪಹಲ್ಗಾಮ್​ನಲ್ಲಿ ಉಗ್ರರ ದಾಳಿ (Pahalgam terror attack) 27 ಜನರು ಬಲಿಯಾಗಿದ್ದಾರೆ. ಟಿಆರ್​ಎಫ್​ ಉಗ್ರರು (TRF Terror)  ಈ ದಾಳಿಯ ಹೊಣೆ ಹೊತ್ತುಕೊಂಡಿದ್ದು, ಇವರಿಗೆ ತಕ್ಕ ಪಾಠ ಕಲಿಸಲು ಕೇಂದ್ರ ಸರ್ಕಾರ ಸಜ್ಜಾಗಿದೆ. ಇದರ ಮಧ್ಯ ಅಲ್ಲಿಗೆ ಉಗ್ರರು ಹೇಗೆ ನುಗ್ಗಿ ಬಂದರು? ಎನ್ನುವ ಚರ್ಚೆಗಳು ಶುರುವಾಗಿದೆ. ಇದರ ಮಧ್ಯ ಕಾಶ್ಮೀರದಲ್ಲಿ ಆರ್ಟಿಕಲ್ 370 ತೆಗೆದಿರುವುದೇ ಪಹಲ್ಗಾಮ್ ದಾಳಿಗೆ ಕಾರಣ ಎಂದು ಶ್ರೀರಂಗಪಟ್ಟಣ ಕ್ಷೇತ್ರದ ಕಾಂಗ್ರೆಸ್ ಶಾಸ ರಮೇಶ್ ಬಂಡಿಸಿದ್ದೇಗೌಡ (Ramesh Bandisiddegowda) ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದೀಗ ಇದು ವಿವಾದಕ್ಕೀಡಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡು ಕ್ಷಮೆಯಾವಿಸಿದ್ದಾರೆ.

ಆರ್ಟಿಕಲ್ 370 ತೆಗೆದಿದ್ದೇ ಪಹಲ್ಗಾಮ್ ಘಟನೆಗೆ ಕಾರಣ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ ಹೇಳಿಕೆ ನೀಡಿದ್ದರು. ಇದಕ್ಕೆ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗಿದ್ದು, ತಮ್ಮ ಹೇಳಿಕೆಯನ್ನು ವಾಸಪ್ ಪಡೆದುಕೊಂಡಿದ್ದಾರೆ. ಅಲ್ಲದೇ ನಾನು ಹಾಗೆ ಹೇಳಬಾರದಿತ್ತು ಎಂದು ಕ್ಷಮೆ ಕೇಳಿದ್ದಾರೆ.

ಇದನ್ನೂ ಓದಿ: ಮಂಗಳೂರು: ಪಹಲ್ಗಾಮ್​ ಉಗ್ರರ ದಾಳಿ ಸಮರ್ಥಿಸಿಕೊಂಡು ಫೇಸ್ ​ಬುಕ್​ನಲ್ಲಿ ಪೋಸ್ಟ್​

ಈ ಬಗ್ಗೆ ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಬಂಡಿಸಿದ್ದೇಗೌಡ, ನಾನು ಹಾಗೆ ಹೇಳಬಾರದಿತ್ತು. ನನ್ನ ಮಾತಿನಿಂದ ಎಲ್ಲರಿಗೂ ನೋವಾಗಿದೆ. ನಾನು ಎಲ್ಲರಲ್ಲೂ ಕ್ಷಮೆಯಾಚನೆ ಮಾಡುತ್ತೇನೆ. ಸರ್ಕಾರಗಳು ಭದ್ರತೆಯನ್ನು ಹೆಚ್ಚಿಸಬೇಕು. ನರಮೇದ ಮಾಡಿದವರ ವಿರುದ್ಧ ಪ್ರತೀಕಾರ ತೆಗೆದುಕೊಳ್ಳಬೇಕು. ಸಾವನ್ನಪ್ಪಿರುವವರ ಆತ್ಮಕ್ಕೆ ಶಾಂತಿ ದೊರಕಲಿ. ಅವರ ಕುಟುಂಬಕ್ಕೆ ದುಃಖ ಬರಿಸುವ ಶಕ್ತಿ ನೀಡಲಿ ಎಂದಿದ್ದಾರೆ.

ಇದನ್ನೂ ಓದಿ
ರಾಜ್ಯದಲ್ಲಿ ಅನಧಿಕೃತವಾಗಿ ನೆಲೆಸಿರುವ ಪಾಕಿಗಳ ವಿರುದ್ಧ ಕ್ರಮ: ಪರಮೇಶ್ವರ್
ಪೀರ್ ಪಂಜಾಲ್ ಪರ್ವತದಲ್ಲಿ ಅಡಗಿ ಕುಳಿತಿದ್ದಾರಂತೆ ಪಹಲ್ಗಾಮ್ ದಾಳಿಕೋರರು
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಎನ್​ಕೌಂಟರ್
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ

ರಮೇಶ್ ಬಂಡಿಸಿದ್ದೇಗೌಡ ಮೊದಲು ಹೇಳಿದ್ದೇನು?

ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಈ ಸಂಬಂಧ ಹೇಳಿಕೆ ನೀಡಿದ್ದ ರಮೇಶ್ ಬಂಡಿಸಿದ್ದೇಗೌಡ, ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ತೆಗೆದಿರುವುದೇ ಪಹಲ್ಗಾಮ್ ಘಟನೆ ಕಾರಣ. ಆರ್ಟಿಕಲ್ 370 ತೆಗೆಯೋದಕ್ಕೂ ಮೊದಲು ಯೋಚನೆ ಮಾಡಬೇಕಿತ್ತು. ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಅವರ ಅತಿಯಾದ ಆತ್ಮವಿಶ್ವಾಸದಿಂದ ಘಟನೆ ನಡೆದಿದೆ ಎನ್ನುವ ಮೂಲಕ ಘಟನೆಗೆ ಪರೋಕ್ಷವಾಗಿ ಬಿಜೆಪಿ ಕಾರಣ ಎಂದಿದ್ದರು.

ಆರ್ಟಿಕಲ್ 370 ತೆಗೆಯುವ ಮುನ್ನ ಕಾಶ್ಮೀರದಲ್ಲಿ (Kashmir) ಮುನ್ನೆಚ್ಚರಿಕೆ ಕ್ರಮ ವಹಿಸಬೇಕಿತ್ತು. ಅವರ ದುಡುಕಿನ ನಿರ್ಧಾರದಿಂದ ಈ ಘಟನೆ ನಡೆದಿದೆ. ಜನರ ಭಾವನೆ ಅರ್ಥ ಮಾಡಿಕೊಂಡು ಆರ್ಟಿಕಲ್ 370 ತೆಗೆಯಬೇಕಿತ್ತು ಎಂದು ಹೇಳಿದ್ದರು.

ಈ ಘಟನೆಗೆ ಪರೋಕ್ಷವಾಗಿ ಬಿಜೆಪಿಯೇ ಕಾರಣ ಎಂಬ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಅಲ್ಲದೇ ಕಾಂಈ ವಿವಾದಾತ್ಮಕ ಹೇಳಿಕೆಯಿಂದ ಕೆರಳಿದ್ದ ಬಿಜೆಪಿ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ತಮ್ಮ ಹೇಳಿಕೆ ವಾಪಸ್ ಪಡೆದುಕೊಂಡು ಡ್ಯಾಮೇಜ್ ಕಂಟ್ರೋಲ್​ಗೆ ಮುಂದಾಗಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ