ಮಂಡ್ಯ ಜಿಲ್ಲೆಯಲ್ಲಿ ಕಾಮಗಾರಿಗಳಿಂದ ವಿಮುಖವಾದರಾ ಗುತ್ತಿಗೆದಾರರು? ಏನಿದು ಕ್ರೆಡಿಟ್ ಪಾಲಿಟಿಕ್ಸ್​​?

ಚುನಾವಣೆ ನಂತರ ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಜಟಾಪಟಿ ನಡೆಯುತ್ತಿದೆ. ಇದೀಗ ಅಭಿವೃದ್ದಿ ಕಾಮಗಾರಿ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಆರೋಪ ಪ್ರತ್ಯಾರೋಪ ನಡೆಯುತ್ತಿದೆ.

ಮಂಡ್ಯ ಜಿಲ್ಲೆಯಲ್ಲಿ ಕಾಮಗಾರಿಗಳಿಂದ ವಿಮುಖವಾದರಾ ಗುತ್ತಿಗೆದಾರರು? ಏನಿದು ಕ್ರೆಡಿಟ್ ಪಾಲಿಟಿಕ್ಸ್​​?
ಮಂಡ್ಯ ಜಿಲ್ಲೆಯಲ್ಲಿ ಕಾಮಗಾರಿಗಳಿಂದ ವಿಮುಖವಾದರಾ ಗುತ್ತಿಗೆದಾರರು?
Follow us
| Updated By: ಸಾಧು ಶ್ರೀನಾಥ್​

Updated on:Jan 04, 2024 | 3:41 PM

ಅಪ್ಪ-ಅಮ್ಮನ ಜಗಳದಲ್ಲಿ ಕೂಸು ಬಡವಾಯ್ತು ಎಂಬಂತೆ ಸಕ್ಕರೆ ನಗರಿ ಮಂಡ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಿನ ಜಟಾಪಟಿಯಲ್ಲಿ ಜಿಲ್ಲೆಯ ಅಭಿವೃದ್ದಿಗೆ ಪೆಟ್ಟು ಬೀಳುತ್ತಿದೆ. ಹಲವು ಕಾಮಗಾರಿಗಳಲ್ಲಿ ಕಾಂಗ್ರೆಸ್ (Congress) ಹಾಗೂ ಜೆಡಿಎಸ್ (JDS) ನಡುವೆ ಕ್ರೆಡಿಟ್ ಪಾಲಿಟಿಕ್ಸ್ ನಡೆಯುತ್ತಿದ್ದು, ಅಭಿವೃದ್ದಿ ಕಾಮಗಾರಿಗಳು ಅರ್ಧಕ್ಕೇ ನಿಂತಿವೆ.

ಮಂಡ್ಯ ಪಾಲಿಟಿಕ್ಸ್ ದೆಹಲಿಯಲ್ಲಿ ಕೂಡ ಸದ್ದು ಮಾಡುತ್ತದೆ. ಇನ್ನು ಈ ಹಿಂದೆ ಮಂಡ್ಯ ಜಿಲ್ಲೆ ಜೆಡಿಎಸ್ ನ ಭದ್ರಕೋಟೆ. ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆ ಬಾರಿ ಪೆಟ್ಟು ಬಿದ್ದಿತ್ತು. ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಒಂದು ಕ್ಷೇತ್ರವನ್ನ ಮಾತ್ರ ಜೆಡಿಎಸ್ ಉಳಿಸಿಕೊಂಡಿದ್ರೆ ಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿತ್ತು.

ಆದರೆ ಚುನಾವಣೆ ನಂತರ ಜಿಲ್ಲೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಜಟಾಪಟಿ ನಡೆಯುತ್ತಿದೆ. ಇನ್ನು ಇದೀಗ ಅಭಿವೃದ್ದಿ ಕಾಮಗಾರಿ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಆರೋಪ ಪ್ರತ್ಯಾರೋಪ ನಡೆಯುತ್ತಿದ್ದು, ಈ ಹಿಂದಿನ ಸರ್ಕಾರದಲ್ಲಿ ಹಲವು ಕಾಮಗಾರಿಗಳು ಮಂಜೂರು ಆಗಿ ಟೆಂಡರ್ ಆಗಿದ್ದವು. ಇದೀಗ ಕೆಲವು ಜೆಡಿಎಸ್ ಪರ ಗುತ್ತಿಗೆದಾರರು ಕಾಮಗಾರಿ ಮಾಡುತ್ತಿಲ್ಲ ಎಂದು ಮಂಡ್ಯ ಕಾಂಗ್ರೆಸ್ ಶಾಸಕ ಗಣಿಗ ರವಿ (Congress MLA Ravi Ganiga) ಗಂಭೀರ ಆರೋಪ ಮಾಡುತ್ತಿದ್ದಾರೆ. ನನ್ನ ಕ್ಷೇತ್ರದ ಹಲವು ರಸ್ತೆಗಳಿಗೆ ಟೆಂಡರ್ ಆಗಿದ್ದರೂ ಗುತ್ತಿಗೆದಾರರು ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಟೆಕ್ನಾಲಜಿ ಎಲ್ಲಿಂದ-ಎಲ್ಲಿಗೆ ಹಬ್ಬಿದೆ ನೋಡಿ! ನರೇಗಾ ಕಾಮಗಾರಿಗೂ ಡ್ರೋನ್.. 

ಅಂದಹಾಗೆ ಮಂಡ್ಯ ಜಿಲ್ಲೆಯಲ್ಲಿ ಹಲವು ರಸ್ತೆಗಳು ಸಂಪೂರ್ಣವಾಗಿ ಹಾಳಾಗಿ ಮಾರುದ್ದ ಗುಂಡಿಗಳು ಬಿದ್ದಿವೆ. ಅದರಲ್ಲೂ ಮಂಡ್ಯ ನಗರ ಪ್ರದೇಶದಲ್ಲಿಯೇ ಹಲವು ರಸ್ತೆಗಳ ಕಥೆ ಹೇಳತೀರಾದಾಗಿದೆ. ಇದರಿಂದ ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ಜನರು ಕೂಡ ಜನಪ್ರತಿನಿಧಿಗಳಿಗೆ ಪ್ರಶ್ನೆ ಮಾಡುತ್ತಿದ್ದಾರೆ.

ಆದರೆ ಶಾಸಕರು ಮಾತ್ರ ಕಾಮಗಾರಿಗಳಿಗೆ ಟೆಂಡರ್ ಆಗಿದ್ದರೂ ಉದ್ದೇಶ ಪೂರ್ವಕವಾಗಿ ಕಾಮಗಾರಿ ಮಾಡುತ್ತಿಲ್ಲ ಎಂದು ಆರೋಪ ಮಾಡುತ್ತಿದ್ದಾರೆ. ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರೋ ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ್ ಅವರು ಆ ರೀತಿ ಅಭಿವೃದ್ದಿ ವಿಚಾರದಲ್ಲಿ ಜೆಡಿಎಸ್ ರಾಜಕಾರಣ ಮಾಡಲ್ಲ. ಯಾವ ಕಾಮಗಾರಿ ಎಂದು ಶಾಸಕರು ತಿಳಿಸಬೇಕು ಎಂದು ಸವಾಲು ಹಾಕುತ್ತಿದ್ದಾರೆ. ಒಟ್ಟಾರೆ ಕಾಂಗ್ರೆಸ್ ಹಾಗೂ ಜೆಡಿಎಸ್ ಜಟಾಪಟಿಯಿಂದಾಗಿ ಕ್ಷೇತ್ರದ ಜನರು ಪರದಾಟ ನಡೆಸುವಂತೆ ಆಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:40 pm, Thu, 4 January 24

ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು