ಶ್ರೀರಾಮಚಂದ್ರನ ಕುರಿತು ವಿವಾದಾತ್ಮಕ ಹೇಳಿಕೆ: ಹಿಂದೂ ಪರ ಕಾರ್ಯಕರ್ತರಿಂದ ಸಾಹಿತಿ ಪ್ರೊ. ಭಗವಾನ್ ವಿರುದ್ಧ ದೂರು

ಹಿರಿಯ ಸಾಹಿತಿ ಪ್ರೊ.ಭಗವಾನ್ ವಿರುದ್ಧ ಜಿಲ್ಲೆಯ ಶ್ರಿರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಶ್ರೀರಾಮಚಂದ್ರನ ಕುರಿತು ವಿವಾದಾತ್ಮಕ ಹೇಳಿಕೆ: ಹಿಂದೂ ಪರ ಕಾರ್ಯಕರ್ತರಿಂದ ಸಾಹಿತಿ ಪ್ರೊ. ಭಗವಾನ್ ವಿರುದ್ಧ ದೂರು
ಹಿರಿಯ ಸಾಹಿತಿ ಪ್ರೊ.ಭಗವಾನ್ ವಿರುದ್ಧ ದೂರು ದಾಖಲು
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jan 22, 2023 | 4:02 PM

ಮಂಡ್ಯ: ಹಿರಿಯ ಸಾಹಿತಿ ಪ್ರೊ.ಭಗವಾನ್ (prof. Bhagavan) ವಿರುದ್ಧ ಜಿಲ್ಲೆಯ ಶ್ರಿರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಇತ್ತೀಚೆಗೆ ಕೆ.ಆರ್.ಪೇಟೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಾಲಗೆ ಹರಿಬಿಟ್ಟಿದ್ದ ಭಗವಾನ್, ಶ್ರೀರಾಮಚಂದ್ರರ (Sri Ramachandra) ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಶ್ರೀರಾಮಚಂದ್ರ ಮದ್ಯಸೇವನೆ ಮಾಡ್ತಿದ್ದ, ಸೀತೆಯನ್ನ ಕಾಡಿಗೆ ಅಟ್ಟಿದ್ದ. ಶ್ರೀರಾಮನನ್ನ ಶಂಭೂಕನನ್ನ ಕೊಲೆಗೈದ ಹಂತಕ ಎಂದು ಬಿಂಬಿಸಿದ್ದಾರೆನ್ನಲಾಗಿದ್ದು, ಇದರಿಂದ ರೊಚ್ಚಿಗೆದ್ದ ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರು ತಕ್ಷಣವೇ ಎಫ್​ಐಆರ್ ದಾಖಲಿಸಿಕೊಂಡು ಭಾಗವಾನ್​ರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ನನಗೆ ಹಿಂದೂ ದೇವರುಗಳ ಮೇಲೆ ನಂಬಿಕೆ ಇಲ್ಲ, ಸಮಾಜ ಕಲ್ಯಾಣ ಸಚಿವ ವಿವಾದಾತ್ಮಕ ಹೇಳಿಕೆ

ಭಗವಾನ್​ ವಿರುದ್ಧ ಜಾಮೀನು ರಹಿತ ವಾರಂಟ್

ಇತ್ತೀಚೆಗೆ ಧಾರ್ಮಿಕ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಕೃತಿ ರಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಎಂಎಫ್​ಸಿ ನ್ಯಾಯಾಲಯ ಭಗವಾನ್​ ವಿರುದ್ಧ ಜಾಮೀನು ರಹಿತ ವಾರಂಟ್​ ಹೊರಡಿಸಲಾಗಿತ್ತು. ಭಗವಾನ್​ ಅವರು ರಾಮ ಮಂದಿರ ಏಕೆ ಬೇಡ ಎಂಬ ತಮ್ಮ ಕೃತಿಯಲ್ಲಿ ಹಿಂದೂ ಧರ್ಮಕ್ಕೆ ಧಕ್ಕೆ ತರುವ ವಿಚಾರಗಳನ್ನು ಬರೆದಿದ್ದಾರೆ ಎಂದು ಆರೋ ಪಿಸಲಾಗಿತ್ತು. ಮಹಾಬಲೇಶ್ದವರ ಎಂಬುವವರು ಇವರ ವಿರುದ್ಧ ಖಾಸಗಿ ದೂರು ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:22 pm, Sun, 22 January 23

ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್