ಶಿವಮೊಗ್ಗ, ಮಂಡ್ಯದಲ್ಲಿ ಕೊರೊನಾ ಹೆಚ್ಚಳ; ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿ ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಿದ ರೇಣುಕಾಚಾರ್ಯ
ಶಿವಮೊಗ್ಗದಲ್ಲಿ 60ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ತಮಿಳುನಾಡಿನ ಓಂ ಶಕ್ತಿಗೆ ಹೋಗಿ ವಾಪಸಾದ ನಗರದ 60ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.
ಮಂಡ್ಯ: ಓಂ ಶಕ್ತಿ ಯಾತ್ರೆ ಮುಗಿಸಿ ಬಂದಿದ್ದ ತಾಲೂಕಿನ ಭಕ್ತರನ್ನು ಕೊವಿಡ್19 (Covid19) ಪರೀಕ್ಷೆ ಮಾಡಿಸಿ ಕೊವಿಡ್ ಸೆಂಟರ್ನಲ್ಲಿ ಇರಿಸಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿರುವ ಕೊವಿಡ್ ಸೆಂಟರ್ನಲ್ಲಿ 500ಕ್ಕು ಹೆಚ್ಚು ಭಕ್ತರನ್ನು ಟೆಸ್ಟ್ ಮಾಡಲಾಗಿದೆ. ಈ ಮಧ್ಯೆ, ಕೊವಿಡ್ ಸೆಂಟರ್ನಲ್ಲಿ ಇರುವ ಸೋಂಕಿತರು (Coronavirus) ಭಜನೆ ಮಾಡಿದ್ದಾರೆ.
ಮಂಡ್ಯ ಪೊಲೀಸರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇಂದು ಮತ್ತೆ ಒಬ್ಬರು ಸಬ್ ಇನ್ಸ್ಪೆಕ್ಟರ್ ಹಾಗೂ 5 ಮಂದಿ ಪೋಲೀಸರಿಗೆ ಕೊರೊನಾ ಸೋಂಕು ದೃಢವಾಗಿದೆ. ಮದ್ದೂರು ತಾಲ್ಲೂಕಿನ ಕೆಸ್ತೂರು ಪೋಲೀಸ್ ಠಾಣೆಯ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢವಾಗಿದೆ. ನಿನ್ನೆ ಮಂಡ್ಯ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹಿರಿಯ ಪೊಲೀಸ್ ಅಧಿಕಾರಿಗಳು ಹೋಂ ಐಸೋಲೇಷನ್ ನಲ್ಲಿ ಇದ್ದಾರೆ.
ಎಸ್ಪಿ ಎನ್. ಯತೀಶ್, ಎಎಸ್ಪಿ ಧನಂಜಯ್, ಮಂಡ್ಯ ಡಿವೈಎಸ್ಪಿ ಮಂಜುನಾಥ್, ನಾಗಮಂಗಲ, ಮಳವಳ್ಳಿ ಡಿವೈಎಸ್ಪಿ, ನಾಗಮಂಗಲ ಗ್ರಾಮಾಂತರ ಸಿಪಿಐ, ಬೆಳ್ಳೂರು ಪಿಎಸ್ಐ ಸೇರಿದಂತೆ ಹಲವರು ಹೋಂ ಐಸೋಲೇಷನ್ನಲ್ಲಿ ಇದ್ದಾರೆ. ಹಿರಿಯ ಅಧಿಕಾರಿಗಳಿಗೆ ಕೊರೋನಾ ಸೋಂಕು ಧೃಡಪಟ್ಟ ಹಿನ್ನೆಲೆ ಕೆಸ್ತೂರು ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲು ಗ್ರಾಮಸ್ಥರು ಆಗ್ರಹ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದಲ್ಲಿ 60ಕ್ಕೂ ಹೆಚ್ಚು ಜನರಿಗೆ ಕೊರೊನಾ ದೃಢ ಶಿವಮೊಗ್ಗದಲ್ಲಿ 60ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ತಮಿಳುನಾಡಿನ ಓಂ ಶಕ್ತಿಗೆ ಹೋಗಿ ವಾಪಸಾದ ನಗರದ 60ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಜನವರಿ 5ರಂದು 5,000ಕ್ಕೂ ಹೆಚ್ಚು ಜನರು ಯಾತ್ರೆಯಿಂದ ಬಂದಿದ್ದರು.
ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿದ ಎಂ.ಪಿ.ರೇಣುಕಾಚಾರ್ಯ ವೀಕೆಂಡ್ ಕರ್ಫ್ಯೂ ಜಾರಿ ಇದ್ರೂ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಿದ್ದಾರೆ. ಹೊನ್ನಾಳಿ ತಾಲೂಕಿನ ಘಂಟ್ಯಾಪುರದಲ್ಲಿ ಕ್ರಿಕೆಟ್ ಟೂರ್ನಿಗೆ ಚಾಲನೆ ಕೊಟ್ಟಿದ್ದಾರೆ. ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕರೂ ಆಗಿರುವ ರೇಣುಕಾಚಾರ್ಯ ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿದ್ದಾರೆ.
ಇದನ್ನೂ ಓದಿ: ಕರ್ನಾಟಕದಲ್ಲಿ ಹೆಚ್ಚಾಗುತ್ತಿದೆ ಕೊರೊನಾ! ಬೆಂಗಳೂರಿನಲ್ಲಿ ಪಾಸಿಟಿವಿಟಿ ರೇಟ್ ಶೇ.10.21ಕ್ಕೆ ಏರಿಕೆ
ಇದನ್ನೂ ಓದಿ: ಹಾಸನ: ಕೊರೊನಾ ಸೋಂಕು ಉಲ್ಬಣ; 23 ಪೊಲೀಸರಿಗೆ ಕೊರೊನಾ ಸೋಂಕು ದೃಢ
Published On - 3:52 pm, Sun, 9 January 22