ಶವಸಂಸ್ಕಾರದಲ್ಲಿ ಭಾಗಿಯಾಗಿದ್ದ 40 ಜನರಿಗೆ ಕೊರೊನಾ! ಮಂಡ್ಯದಲ್ಲಿ ಹೆಚ್ಚಾಯ್ತು ಕೊರೊನಾ ಮೂರನೇ ಅಲೆ ಆತಂಕ

| Updated By: sandhya thejappa

Updated on: Aug 15, 2021 | 3:46 PM

ಕಳೆದ ವಾರ ತಿಮ್ಮನಕೊಪ್ಪಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಕೊವಿಡ್ ನಿಯಮ ಉಲ್ಲಂಘಿಸಿ ನೂರಾರು ಜನರು ಶವಸಂಸ್ಕಾರದಲ್ಲಿ ಭಾಗಿಯಾಗಿದ್ದರು. ಕೆಲ ದಿನಗಳ ಬಳಿಕ ಗ್ರಾಮದ ಕೆಲವರಲ್ಲಿ ಕೊವಿಡ್ ಲಕ್ಷಣ ಕಾಣಿಸಿತು.

ಶವಸಂಸ್ಕಾರದಲ್ಲಿ ಭಾಗಿಯಾಗಿದ್ದ 40 ಜನರಿಗೆ ಕೊರೊನಾ! ಮಂಡ್ಯದಲ್ಲಿ ಹೆಚ್ಚಾಯ್ತು ಕೊರೊನಾ ಮೂರನೇ ಅಲೆ ಆತಂಕ
ಕೊರೊನಾ ಪರೀಕ್ಷೆ ಮಾಡುತ್ತಿರುವ ಆರೋಗ್ಯ ಸಿಬ್ಬಂದಿ
Follow us on

ಮಂಡ್ಯ: ರಾಜ್ಯದಲ್ಲಿ ಈಗಾಗಲೇ ಕೊರೊನಾ ಮೂರನೇ ಅಲೆ ಆತಂಕ ಶುರುವಾಗಿದೆ. ಕೆಲ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಕಠಿಣ ನಿಯಮ ಜಾರಿಯಾಗದಿದ್ದರೂ ಸದ್ಯ ಕೆಲ ನಿಯಮಗಳನ್ನು ಪಾಲಿಸುವುದು ಅನಿವಾರ್ಯವಾಗಿದೆ. ಕೊರೊನಾ ಸಂಖ್ಯೆ ಹೆಚ್ಚಾದರೆ ಲಾಕ್ಡೌನ್ ಜಾರಿಯಾಗುವ ಸಾಧ್ಯತೆಯೂ ಹೆಚ್ಚಿದೆ. ಆದರೆ ಜನರು ಮಾತ್ರ ಕೊರೊನಾ ಬಗ್ಗೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ತಿಮ್ಮನಕೊಪ್ಪಲು ಗ್ರಾಮದಲ್ಲಿ ಕೊವಿಡ್ ನಿಯಮ ಉಲ್ಲಂಘಿಸಿ ಶವಸಂಸ್ಕಾರದ ವೇಳೆ ಭಾಗಿಯಾಗಿದ್ದ 40 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಕಳೆದ ವಾರ ತಿಮ್ಮನಕೊಪ್ಪಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಕೊವಿಡ್ ನಿಯಮ ಉಲ್ಲಂಘಿಸಿ ನೂರಾರು ಜನರು ಶವಸಂಸ್ಕಾರದಲ್ಲಿ ಭಾಗಿಯಾಗಿದ್ದರು. ಕೆಲ ದಿನಗಳ ಬಳಿಕ ಗ್ರಾಮದ ಕೆಲವರಲ್ಲಿ ಕೊವಿಡ್ ಲಕ್ಷಣ ಕಾಣಿಸಿತು. ಕೊವಿಡ್ ಪರೀಕ್ಷೆ ಬಳಿಕ ಸುಮಾರು 40ಕ್ಕೂ ಹೆಚ್ಚು ಜನರಿಗೆ ಸೋಂಕು ಇರುವುದು ದೃಢವಾಗಿದೆ. ಗ್ರಾಮದಲ್ಲಿ ಸೋಂಕು ಹೆಚ್ಚಳವಾದ ಹಿನ್ನೆಲೆ ಗ್ರಾಮದ ಎಲ್ಲರಿಗೂ ಶಾಲೆಯ ಆವರಣದಲ್ಲಿ ಕೊವಿಡ್ ಟೆಸ್ಟ್ ಮಾಡಲಾಗುತ್ತಿದೆ.

600 ಜನಸಂಖ್ಯೆಯಿರುವ ಗ್ರಾಮದಲ್ಲಿ 40ಕ್ಕೂ ಹೆಚ್ಚು ಗ್ರಾಮಸ್ಥರಿಗೆ ಕೊರೊನಾ ದೃಢವಾಗಿರುವ ಹಿನ್ನೆಲೆ ತಾಲೂಕು ಆಡಳಿತ ತಿಮ್ಮನಕೊಪ್ಪಲು ಗ್ರಾಮವನ್ನು ಸೀಲ್ಡೌನ್ ಮಾಡಿ ಓಡಾಟಕ್ಕೆ ನಿರ್ಬಂಧ ಹೇರಿದೆ. ಸದ್ಯ ಗ್ರಾಮಸ್ಥರೆಲ್ಲರಿಗೂ ಆರ್ಟಿಪಿಸಿಆರ್ (RTPCR) ಟೆಸ್ಟ್ ಮಾಡಲಾಗುತ್ತಿದೆ. ಕೊರೊನಾ ನೆಗೆಟಿವ್ ಇರುವವರಿಗೆ ಸ್ಥಳದಲ್ಲೇ ಆರೋಗ್ಯ ಇಲಾಖೆ ಸಿಬ್ಬಂದಿ ಕೊವಿಡ್ ಲಸಿಕೆಯನ್ನು ನೀಡುತ್ತಿದೆ.

ಇದನ್ನೂ ಓದಿ

ಇಂದು 100 ಲಕ್ಷ ಕೋಟಿ ರೂ.ವೆಚ್ಚದ ಗತಿ ಶಕ್ತಿ ಯೋಜನೆ ಘೋಷಿಸಿದ ಪ್ರಧಾನಿ; ಏನಿದು ಮಾಸ್ಟರ್​ ಪ್ಲ್ಯಾನ್​? ಇಲ್ಲಿದೆ ವಿವರ

ಕೊರೊನಾ ನಿಯಂತ್ರಣಕ್ಕೆ ಬರದಿದ್ದರೆ ಶಾಲೆ ಓಪನ್​ ಬೇಡ: ಸಿದ್ದರಾಮಯ್ಯ ಅಭಿಪ್ರಾಯ

(Coronavirus infection is confirmed for 40 people involved in the funeral at Mandya)