ಕಳೆದ 5 ತಿಂಗಳಿಂದ ಬಿಡುಗಡೆ ಆಗದ ಹಾಲಿನ ಪ್ರೋತ್ಸಾಹ ಧನ; ಸರ್ಕಾರದ ವಿರುದ್ಧ ರೈತರ ಆಕ್ರೋಶ

ಮಂಡ್ಯದ ರೈತರಿಗೆ ಕಳೆದ 5 ತಿಂಗಳಿಂದ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಆಗಿಲ್ಲ. ಹೀಗಾಗಿ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಪ್ರೋತ್ಸಾಹ ಧನ ನಂಬಿಕೊಂಡ ರೈತರಿಗೆ ಸರ್ಕಾರ ಬರೆ ಎಳೆದಿದೆ ಎಂದು ಸರ್ಕಾರದ ವಿರುದ್ಧ ರೈತರು, ಕನ್ನಡ ಸಂಘಟನೆಗಳು ಆಕ್ರೋಶ ಹೊರ ಹಾಕಿವೆ.

ಕಳೆದ 5 ತಿಂಗಳಿಂದ ಬಿಡುಗಡೆ ಆಗದ ಹಾಲಿನ ಪ್ರೋತ್ಸಾಹ ಧನ; ಸರ್ಕಾರದ ವಿರುದ್ಧ ರೈತರ ಆಕ್ರೋಶ
ಕಳೆದ 5 ತಿಂಗಳಿಂದ ಬಿಡುಗಡೆ ಆಗದ ಹಾಲಿನ ಪ್ರೋತ್ಸಾಹ ಧನ
Follow us
| Updated By: ಆಯೇಷಾ ಬಾನು

Updated on: Jun 13, 2024 | 10:03 AM

ಮಂಡ್ಯ, ಜೂನ್.13: ವಿಧಾನಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ (Congress) ಉಪಯೋಗಿಸಿದ್ದ ಪಂಚ ಗ್ಯಾರಂಟಿ ಯೋಜನೆ ಎಫೆಕ್ಟ್​ನಿಂದಾಗಿ ಮಂಡ್ಯ (Mandya Farmers) ಜಿಲ್ಲೆಯ ಅನ್ನದಾತರು ಸಂಕಷ್ಟ ಎದುರಿಸುವಂತಾಗಿದೆ. ಹೈನುಗಾರಿಕೆ ನಂಬಿಕೊಂಡ ರೈತರಿಗೆ ಕಳೆದ ಐದು ತಿಂಗಳಿಂದ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಆಗದ ಸಮಸ್ಯೆಯಾಗಿದೆ. ಹೈನುಗಾರಿಕೆ ಉತ್ತೇಜಿಸುವ ಸಲುವಾಗಿ ರಾಜ್ಯ ಸರ್ಕಾರ ಕ್ಷೀರಸಿರಿ ಯೋಜನೆ ಅಡಿ ಪ್ರತಿ ಲೀಟರ್​ಗೆ ಐದು ರೂ ಪ್ರೋತ್ಸಾಹ ಧನ ನೀಡುತ್ತಿತ್ತು. ಆದರೆ ಇದುವರೆಗೆ ಐದು ತಿಂಗಳ ಪ್ರೋತ್ಸಾಹ ಧನ ರೈತರ ಕೈಗೆ ಸಿಕ್ಕಿಲ್ಲ. ಹೀಗಾಗಿ ರೈತರು ಅಸಮಾಧಾನ ಹೊರ ಹಾಕಿದ್ದಾರೆ.

ಮಂಡ್ಯ ಜಿಲ್ಲೆಯ ಮನ್ ಮುನ್(ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ) ವ್ಯಾಪ್ತಿಯಲ್ಲಿ 67 ಕೋಟಿ 91 ಲಕ್ಷ ರೂ ಬಾಕಿ ಇದೆ. ಅಕ್ಟೋಬರ್, ನವೆಂಬರ್, ಡಿಸೆಂಬರ್, ಜನವರಿ ಹಾಗೂ ಫೆಬ್ರವರಿ ತಿಂಗಳ ಪ್ರೋತ್ಸಾಹ ಧನ ಬಾಕಿ ಇದೆ. ವಾರದ ಹಿಂದೆ ಮಾರ್ಚ್ ಹಾಗೂ ಏಪ್ರಿಲ್ ತಿಂಗಳ ಪ್ರೋತ್ಸಾಹ ಧನವನ್ನು ಸರ್ಕಾರ ಬಿಡುಗಡೆ ಮಾಡಿತ್ತು. ಸದ್ಯ ಈಗ ಇನ್ನೂ 5 ತಿಂಗಳ ಪ್ರೋತ್ಸಾಹ ಧನ ಬಾಕಿ ಇದೆ. ಜಿಲ್ಲೆಯಲ್ಲಿ 98 ಸಾವಿರ ರೈತ ಫಲಾನುಭವಿಗಳು ಇದ್ದಾರೆ. ಮೇ ತಿಂಗಳ ಪ್ರೋತ್ಸಾಹ ಧನ ಸೇರಿದರೆ 80 ಕೋಟಿ ಹಣ ಬಾಕಿ ಇದೆ. ಪ್ರತಿ ತಿಂಗಳು ಕ್ಷೀರ ಸಿರಿ ಪೋರ್ಟಲ್ ಮೂಲಕ ಮನ್ ಮುಲ್ ಮಾಹಿತಿ ನೀಡುತ್ತಿದೆ. ಪ್ರೋತ್ಸಾಹ ಧನ ನಂಬಿಕೊಂಡ ರೈತರಿಗೆ ಸರ್ಕಾರ ಬರೆ ಎಳೆದಿದೆ ಎಂದು ಸರ್ಕಾರದ ವಿರುದ್ಧ ರೈತರು, ಕನ್ನಡ ಸಂಘಟನೆಗಳು ಆಕ್ರೋಶ ಹೊರ ಹಾಕಿವೆ.

ಇದನ್ನೂ ಓದಿ: ಬೆಂಗಳೂರು ಉಪನಗರ ರೈಲ್ವೆ ಯೋಜನೆ: 699 ಮರ ಕಡಿಯುವುದಕ್ಕೆ ಕರ್ನಾಟಕ ಹೈಕೋರ್ಟ್ ತಡೆ

ಸರ್ಕಾರ ತಾನು ಘೋಷಣೆ ಮಾಡಿದ ಗ್ಯಾರಂಟಿಗಳಿಗೆ ಹಣ ಹೊಂದಿಸುತ್ತಿದೆ. ರೈತರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಹಾಲಿನ ಪ್ರೋತ್ಸಾಹ ಹಣದಿಂದ ದನಗಳಿಗೆ ಮೇವು ಪೂರೈಕೆಗೆ ಅನುಕೂಲ ಆಗುತ್ತಿತ್ತು ಎಂದು ರೈತರು ಆಕ್ರೋಶ ಹೊರ ಹಾಕಿದ್ದಾರೆ. ಮಂಡ್ಯ ಒಂದೇ ಅಲ್ಲ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಕೆಲ ತಿಂಗಳಿಂದ ಹಾಲಿನ ಪ್ರೋತ್ಸಾಹ ಧನವನ್ನು ರೈತರಿಗೆ ನೀಡಲಾಗುತ್ತಿಲ್ಲ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್