ಅಪರಿಚಿತ ಮಹಿಳೆಯರಿಬ್ಬರ ಮೃತದೇಹ ಪತ್ತೆ ಪ್ರಕರಣ: ಸುಳಿವು ಕೊಟ್ಟವರಿಗೆ ಮಂಡ್ಯ ಪೊಲೀಸರಿಂದ 1 ಲಕ್ಷ ಬಹುಮಾನ

ನೇಣುಬಿಗಿದ ಸ್ಥಿತಿಯಲ್ಲಿ ಎರಡು ಮೃತದೇಹಗಳು ಪತ್ತೆಯಾಗಿರುವಂತಹ ಘಟನೆ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ತಲಕಾಡು ಹೊರವಲಯದಲ್ಲಿ ನಡೆದಿದೆ.

ಅಪರಿಚಿತ ಮಹಿಳೆಯರಿಬ್ಬರ ಮೃತದೇಹ ಪತ್ತೆ ಪ್ರಕರಣ: ಸುಳಿವು ಕೊಟ್ಟವರಿಗೆ ಮಂಡ್ಯ ಪೊಲೀಸರಿಂದ 1 ಲಕ್ಷ ಬಹುಮಾನ
ಅಪರಿಚಿತ ಮಹಿಳೆಯ ಮೃತದೇಹ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jun 22, 2022 | 11:40 AM

ಮಂಡ್ಯ: ಜಿಲ್ಲೆಯಲ್ಲಿ ಅಪರಿಚಿತ ಮಹಿಳೆಯರಿಬ್ಬರ ಮೃತದೇಹ (Dead Body) ಪತ್ತೆ ಪ್ರಕರಣ ಹಿನ್ನೆಲೆ ಶವಗುರುತು ಪತ್ತೆ ಹಚ್ಚಿ ಸುಳಿವು ಕೊಟ್ಟವರಿಗೆ 1 ಲಕ್ಷ ಬಹುಮಾನ ನೀಡುವುದಾಗಿ ಮಂಡ್ಯ ಪೊಲೀಸರಿಂದ ಜನರಿಗೆ ಬಂಪರ್ ಆಫರ್ ನೀಡಲಾಗಿದೆ. ಪ್ರತ್ಯೇಕ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯರಿಬ್ಬರ ಶವ ಪತ್ತೆಯಾಗಿತ್ತು. ಪಾಂಡವಪುರ ವ್ಯಾಪ್ತಿಯ ಬೇಬಿ ಗ್ರಾಮದ ನಾಲೆಯಲ್ಲಿ ಒಂದು ಶವ ಪತ್ತೆಯಾದರೆ, ಶ್ರೀರಂಗಪಟ್ಟಣದ ಅರಕೆರೆಯಲ್ಲಿ ಇನ್ನೊಂದು ಶವ ಪತ್ತೆಯಾಗಿತ್ತು. ಎರಡು ಮೃತದೇಹಗಳು ಒಂದೇ ಮಾದರಿಯಲ್ಲಿ ಪತ್ತೆಯಾಗಿದ್ದು, ಒಂದೇ ರೀತಿ ಹತ್ಯೆಗೈದು ಮೃತದೇಹ ಪ್ರತ್ಯೇಕವಾಗಿ ಎಸೆಯಲಾಗಿತ್ತು. ಎಷ್ಟೇ ಹುಡುಕಾಡಿದರು ಶವಗಳ ಗುರುತು ಪತ್ತೆಯಾಗದ ಹಿನ್ನೆಲೆ ಜಿಲ್ಲೆಯ ಜನತೆಗೆ ಮಂಡ್ಯ ಪೊಲೀಸರಿಂದ 1 ಲಕ್ಷ ಬಂಪರ್ ಆಫರ್ ಘೋಷಣೆ ಮಾಡಲಾಗಿದೆ.

ನೇಣುಬಿಗಿದ ಸ್ಥಿತಿಯಲ್ಲಿ ಎರಡು ಮೃತದೇಹಗಳು ಪತ್ತೆ

ಮೈಸೂರು: ನೇಣುಬಿಗಿದ ಸ್ಥಿತಿಯಲ್ಲಿ ಎರಡು ಮೃತದೇಹಗಳು ಪತ್ತೆಯಾಗಿರುವಂತಹ ಘಟನೆ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ತಲಕಾಡು ಹೊರವಲಯದಲ್ಲಿ ನಡೆದಿದೆ. ಸಿದ್ದರಾಜು ಹಾಗೂ ಸುಮಿತ್ರಾ ಎಂಬುವರ ಶವ ಪತ್ತೆಯಾಗಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಸಿದ್ದರಾಜು ಮೃತದೇಹ ಪತ್ತೆಯಾದರೆ, ಮರಳಿನಲ್ಲಿ ಸುಮಿತ್ರಾ ಎಂಬುವವರ ಮೃತದೇಹ ಪತ್ತೆಯಾಗಿದೆ.  ಮೃತರು ಮೈಸೂರು ತಾಲ್ಲೂಕು ಕೆಬ್ಬೆಹುಂಡಿ ಗ್ರಾಮದವರು. ಪರಸ್ಪರ ಪರಿಚಯದವರಾಗಿದ್ದರು. ಸುಮಿತ್ರಾಗೆ ಬೇರೆಯವರ ಜೊತೆ ಮದುವೆಯಾಗಿತ್ತು. ಸಿದ್ದರಾಜು ಸಹಾ ವಿವಾಹಿತನಾಗಿದ್ದ. ಇಬ್ಬರು ತಲಕಾಡು ದೇವಸ್ಥಾನಕ್ಕೆ ಬಂದಿದ್ದ ವೇಳೆ ಘಟನೆ ನಡೆದಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಟಿ ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಚರಂಡಿಯಲ್ಲಿ ಯುವಕನ ಶವ ಪತ್ತೆ

ಧಾರವಾಡ: ಚರಂಡಿಯಲ್ಲಿ ಯುವಕನ ಶವ ಪತ್ತೆಯಾಗಿರುವಂತಹ ಘಟನೆ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ಘಟನೆ ನಡೆದಿದೆ. ಮಲ್ಲಿಕಾರ್ಜುನ ಗೂಳದಕೊಪ್ಪ(25) ಮೃತ ಯುವಕ. ಗ್ರಾಮದ ದ್ಯಾಮವ್ವ ದೇವಸ್ಥಾನದ ಬಳಿಯ ಚರಂಡಿಯಲ್ಲಿ ಕೊಲೆ ಮಾಡಿ ಎಸದಿರೋ ಶಂಕೆ ವ್ಯಕ್ತವಾಗಿದೆ. ಧಾರವಾಡ ಗ್ರಾಮೀಣ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಮನೆಗಳ್ಳತನ ಮಾಡುತ್ತಿದ್ದ ಕಳ್ಳ ಅಂದರ್

ಬಾಗಲಕೋಟೆ: ಮನೆಗಳ್ಳತನ ಮಾಡುತ್ತಿದ್ದ ಆರೋಪಿ ಅಸ್ಲಮ್ ಮೆಹಬೂಬ್​ನನ್ನು ಜಮಖಂಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಗವಿಸಿದ್ದನಮಡ್ಡಿ ಗ್ರಾಮದ ನಿವಾಸಿಯಾಗಿದ್ದು, ಬಂಧಿತನಿಂದ 90 ಗ್ರಾಂ ಚಿನ್ನಾಭರಣ, 85 ಗ್ರಾಂ ಬೆಳ್ಳಿ ಆಭರಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ