ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ಕೇಸ್: RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌‌ಗೆ ಜಾಮೀನು

| Updated By: ರಮೇಶ್ ಬಿ. ಜವಳಗೇರಾ

Updated on: Jan 17, 2024 | 3:57 PM

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣದಲ್ಲಿ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್​ಗೆ ನ್ಯಾಯಾಲಯ ​ಜಾಮೀನು ನೀಡಿದೆ.

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ಕೇಸ್: RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌‌ಗೆ ಜಾಮೀನು
ಕಲ್ಲಡ್ಕ ಪ್ರಭಾಕರ ಭಟ್
Follow us on

ಮಂಡ್ಯ, (ಜನವರಿ 17):  ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣದಲ್ಲಿ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್​ಗೆ (kalladka prabhakar bhat) ಜಾಮೀನು ಸಿಕ್ಕಿದೆ. ಪ್ರಕರಣ ಸಂಬಂಧ ಪ್ರಭಾಕರ್ ಭಟ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತ ಸತ್ರ ನ್ಯಾಯಾಲಯ, ಇಂದು ಜಾಮೀನು ನೀಡಿ ಆದೇಶ ಹೊರಡಿಸಿದೆ. ಸ್ಥಳೀಯ ಇಬ್ಬರು ಶ್ಯೂರಿಟಿ ಸೇರಿ 2 ಲಕ್ಷ ರೂ ಮೌಲ್ಯದ ಬಾಂಡ್ ನೀಡುವಂತೆ ಹೇಳಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.‌

ಪ್ರಕರಣದ ಹಿನ್ನಲೆ

ಡಿಸೆಂಬರ್ 24ರಂದು ಶ್ರೀರಂಗಪಟ್ಟಣದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಮಾತನಾಡಿದ್ದ ಪ್ರಭಾಕರ್ ಭಟ್, ‘ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಬ್ಬ ಗಂಡಂದಿರು. ಅವರಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ಅವರಿಗೆ ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದೇ ಮೋದಿ ಸರ್ಕಾರ’ ಎಂದು ಭಟ್ ಹೇಳಿದ್ದರು. ಇನ್ನು ಇದಕ್ಕೆ ಮುಸ್ಲಿಂ ಸಮುದಾಯ ಆಕ್ರೋಶ ವ್ಯಕ್ತಪಡಿಸಿತ್ತು. ಅಲ್ಲದೇ ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದುರಂದಿ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಗಳು ವ್ಯಕ್ತವಾಗಿದ್ದವು.

ಇದನ್ನೂ ಓದಿ: ಮುಸ್ಲಿಂ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಕೇಸ್, ಪ್ರಭಾಕರ್ ಭಟ್​ಗೆ ತಾತ್ಕಾಲಿಕ ರಿಲೀಫ್ ನೀಡಿದ ಕೋರ್ಟ್

ಇನ್ನು ಈ ಬಗ್ಗೆ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಝೀರ್ ಚಿಕ್ಕನೇರಳೆ ದೂರು ನೀಡಿದ್ದರು. ದೂರಿನ ಮೇರೆಗೆ ಶ್ರೀರಂಗಪಟ್ಟಣ ಪೊಲೀಸ್‌ ಠಾಣೆಯಲ್ಲಿ ಭಾಕರ್ ಭಟ್ ವಿರುದ್ಧ IPC ಸೆಕ್ಷನ್ 354, 294, 509, 506, 153A, 295 295A, 298ರ ಅಡಿ ಎಫ್‌ಐಆರ್ ದಾಖಲಾಗಿತ್ತು. ಬಳಿಕ ಈ ಎಫ್​ಐಆರ್ ರದ್ದು ಕೋರಿ ಪ್ರಭಾಕರ್ ಭಟ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತ ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:43 pm, Wed, 17 January 24