AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

ಧರ್ಮಸ್ಥಳದಲ್ಲಿ ನೂರಾರು ಶವ ಹೂತಿರುವುದಾಗಿ ಗಂಭೀರ ಆರೋಪ ಮಾಡಿರುವ ಅನಾಮಿಕನ (ಮಾಸ್ಕ್​ ಮ್ಯಾನ್) ಒಂದೊಂದೇ ಗುಟ್ಟು ಹೊರಗೆ ಬರುತ್ತಿವೆ. ಈಗಾಗಲೇ ಅನಾಮಿಕ ಹೇಳಿದಂತೆ ಎಸ್​ಐಟಿ ಅಧಿಕಾರಿಗಳು ಧರ್ಮಸ್ಥಳ ಸುತ್ತಮುತ್ತಲಿನ ಪ್ರದೇಶದಲ್ಲಿ ಶವ ಶೋಧ ನಡೆಸಿದ್ದು, ಹತ್ತಾರು ಸ್ಥಳಗಳಲ್ಲಿ ಅಗೆದರೂ ಸಹ ಕೇವಲ ಎರಡೇ ಜಾಗದಲ್ಲಿ ಮೂಳೆಗಳು ಪತ್ತೆಯಾಗಿವೆ. ಇದೀಗ ಮಾಸ್ಕ್​ ಮ್ಯಾನ್(ಭೀಮ) ಯಾರು? ಏನು? ಎನ್ನುವುದು ಬೆಳಕಿಗೆ ಬಂದಿದೆ.

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ
Mask Man
ದಿಲೀಪ್​, ಚೌಡಹಳ್ಳಿ
| Updated By: ರಮೇಶ್ ಬಿ. ಜವಳಗೇರಾ|

Updated on:Aug 21, 2025 | 3:22 PM

Share

ಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ ಮಾಸ್ಕ್​ ಮ್ಯಾನ್ (Mask Man) (ಭೀಮ) ಯಾರು ಏನು ಎನ್ನುವುದೇ ಗೊತ್ತಿಲ್ಲ. ಫುಲ್ ದೇಹ ಕವರ್ ಮಾಡಿಕೊಂಡು ಮುಖಕ್ಕೆ ಮಾಸ್ಕ್​ ಹಾಕಿಕೊಂಡು ಕಾಣಿಸಿಕೊಂಡಿದ್ದಾನೆ. ಹೀಗಾಗಿ ಮಾಸ್ಕ್​ ಮ್ಯಾನ್ ಯಾರು ಎನ್ನುವುದೇ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಆದ್ರೆ, ಇದೀಗ ಆ ಮಾಸ್ಕ್​ ಮ್ಯಾನ್ ಯಾರು ಏನು? ಎಲ್ಲಿಯವನು ಎನ್ನುವ ಒಂದೊಂದೇ ಅಂಶಗಳು ಆಚೆ ಬರುತ್ತಿವೆ. ನಿನ್ನೆ ಅಷ್ಟೇ ಮಾಸ್ಕ್​ ಮ್ಯಾನ್ ಸ್ನೇಹಿತ ರಾಜು ಎನ್ನುವಾತ ಕೆಲ ವಿಚಾರಗಳನ್ನು ಹಂಚಿಕೊಂಡಿದ್ದ. ಇದರ ಬೆನ್ನಲ್ಲೇ ಇದೀಗ ಸ್ವತಃ ಅನಾಮಿಕನ ಆವ ಭಾವ , ಆತನ ದೇಹದ ಆಕಾರ ನೋಡಿ ಮಾಜಿ ಪತ್ನಿ ಪ್ರತ್ಯಕ್ಷಳಾಗಿದ್ದು, ಮಾಸ್ಕ್​ ಮ್ಯಾನ್​​ನ ಹಿನ್ನಲೆಯನ್ನು ಬಿಚ್ಚಿಟ್ಟಿದ್ದಾಳೆ.

ಮಂಡ್ಯದಲ್ಲಿ ಮಾತನಾಡಿರುವ ಅನಾಮಿಕನ ಮೊದಲ ಪತ್ನಿ,1999ರಲ್ಲಿ ಮದುವೆಯಾಗಿದ್ದು, 7 ವರ್ಷ ಸಂಸಾರ ಮಾಡಿದ್ದೆವು‌. ನಮಗೆ ಒಂದು ಹೆಣ್ಣು, ಒಂದು ಗಂಡು ಮಕ್ಕಳಿದ್ದಾರೆ. ಅವನ ಬಳಿ ಒಳ್ಳೆತನ ಇರಲಿಲ್ಲ. ಬರೀ ಸುಳ್ಳು ಹೇಳುತ್ತಿದ್ದ.ಮದುವೆ ಬಳಿಕ ಧರ್ಮಸ್ಥಳದ ನೇತ್ರಾವತಿಯಲ್ಲಿ 7 ವರ್ಷ ಇದ್ದೆವು. ಧರ್ಮಸ್ಥಳದಲ್ಲಿ ಕಸಗುಡಿಸುವುದು, ಬಾತ್‌ರೂಂ ತೊಳೆಯುವುದು ಮಾಡುತ್ತಿದ್ದರು. ಆದರೆ, ಈಗ ಆತ ನೂರಾರು ಶವ ಹೂತಿದ್ದೇನೆ ಎಂದು ಹೇಳುತ್ತಿರುವುದು ಸುಳ್ಳು. ದುಡ್ಡಿನ ಆಮಿಷಕ್ಕೆ ಹೀಗೆ ಮಾಡುತ್ತಿರುಬಹುದು ಎಂದು ಸ್ಫೋಟಕ ವಿಚಾರಗಳನ್ಜು ಬಿಚ್ಚಿಟ್ಟಿದ್ದಾಳೆ.

ಇದನ್ನೂ ಓದಿ: ಮಂಡ್ಯ: ಮಾಸ್ಕ್‌ಮ್ಯಾನ್ ಹುಟ್ಟಿ ಬೆಳೆದಿದ್ದು ನಮ್ಮ ಗ್ರಾಮದಲ್ಲೇ, ಹುಟ್ಟು ಸೋಮಾರಿ ಎಂದ ಗ್ರಾಮಸ್ಥರು

ನನಗೆ ಹೊಡೆಯುವುದು, ಬಡಿಯುವುದು ಮಾಡುತ್ತಿದ್ದ. ವಿಚ್ಚೇದನ ವೇಳೆ ಜೀವನಾಂಶ ಕೊಡಲು ಸುಳ್ಳು ಹೇಳಿದ್ದ. ಜೀವನಾಂಶ‌ ಕೊಡಲು ಕೆಲಸ ಮಾಡುತ್ತಿಲ್ಲ ಎಂದು ಕೋರ್ಟ್‌ಗೆ ಸುಳ್ಳು ಹೇಳಿದ್ದ. ಅಲ್ಲು ನನಗೆ ನ್ಯಾಯ ಸಿಗಲಿಲ್ಲ. ನನ್ನ ತಾಯಿಯೇ ನನ್ನ ಮಕ್ಕಳನ್ನ ಸಾಕಿದ್ರು. ಧರ್ಮಸ್ಥಳ ಎಂದರೆ ನಮ್ಮ ಮನೆಯವರಿಗೆಲ್ಲಾ ಪ್ರೀತಿ. ಗುಂಡಿ ತೋಡಿದ್ರು ಏನು ಸಿಕ್ಕಿಲ್ಲ ಅಂದ್ರೆ ಏನೋ‌ ಕಿತಾಪತಿ ಮಾಡುತ್ತಿದ್ದಾನೆ ಎನಿಸುತ್ತದೆ. ಅತ್ಯಾಚಾರ, ಕೊಲೆಯಾದ ಶವಗಳನ್ನು ಹೂತ ಬಗ್ಗೆ ಯಾವತ್ತು ಹೇಳಿಲ್ಲ. ಯಾವಾಗಲೂ ಅಹಂಕಾರದಲ್ಲೇ ಮೆರೆಯುತ್ತಿದ್ದ. ಅಣ್ಣ ತಮ್ಮಂದಿರಿಗೂ ಬಾಯಿಗೆ ಬಂದಹಾಗೇ ಬೈಯ್ಯುತ್ತಿದ್ದ ಎಂದರು.

ಅವನು ಮೋಸಗಾರ, ಸುಳ್ಳುಗಾರ. ಅವನನ್ನು ಬಿಟ್ಟು ಬಂದದ್ದು ಒಳ್ಳೆಯದಾಯಿತು. ಇಟ್ಕೊಂಡಳವಳನ್ನ ಮದುವೆ ಮಾಡಿಕೊಳ್ಳಲು ನನಗೆ ಚಿತ್ರಹಿಂಸೆ ಕೊಟ್ಟು ಓಡಿಸಿದ. ಕೆಲಸ‌ಕೊಟ್ಟ, ಅನ್ನ ಕೊಟ್ಟ ಜಾಗಕ್ಕೆ ಅನ್ಯಾಯ ಮಾಡಬಾರದು. ಅವಳ ಒತ್ತಡಕ್ಕೆ, ಆಮಿಷಕ್ಕೆ ಒಳಗಾಗಿ ಹೀಗೆ ಮಾಡ್ತಿದ್ದಾನೆ. ದೇವಸ್ಥಾನದ ಹೆಸರು ಕೆಡಿಸುತ್ತಿರುವ ಅವನು ಹಾಳಾಗಬೇಕು. ಅವನು ಸತ್ತು, ಹೆಣ ಆದರೂ ನಾವು ಹೋಗಿ ನೋಡುವುದಿಲ್ಲ. ಮಾಸ್ಕ್ ಮ್ಯಾನ್ ಅಣ್ಣ ಹಾಗೂ ಮನೆಯವರೆಲ್ಲ ಒಳ್ಳೆಯವರು. ಆತನ ನನಗೆ ಹೊಡೆದಾಗ ನನ್ನ ಪರವಾಗಿ ಇದ್ದರು. ಈತ ಸರಿ ಇಲ್ಲ. ಅವನನ್ನ ಟಿವಿಯಲ್ಲಿ ನೋಡಿದ ಮೊದಲ ದಿನವೇ ಗೊತ್ತಾಯಿತು. ಅವನ ದೇಹದ ಆಕಾರ ನೋಡಿ ಗೊತ್ತಾಯಿತು ಎಂದು ತಿಳಿಸಿದಳು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:19 pm, Thu, 21 August 25