AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಲೆಕ್ಸ್​, ಸೋಷಿಯಲ್ ಮೀಡಿಯಾನಲ್ಲಿ ಮಂಡ್ಯ ಎಸ್ಪಿ ಶೋಭಾರಾಣಿ ಹವಾ: ಎಲ್ಲಾ ಗೊಂದಗಳಿಗೆ ತೆರೆ

ಯುಗಾದಿ, ರಂಜಾನ್ ಹಬ್ಬಗಳ ಹಿನ್ನೆಲೆ ಡಾ. ಶೋಭಾರಾಣಿ ಅವರ ಭಾವಚಿತ್ರವಿರುವ ಫ್ಲೆಕ್ಸ್ ಮತ್ತು ಬ್ಯಾನರ್‌ಗಳು ರಾರಾಜಿಸುತ್ತಿವೆ. ಅಷ್ಟೇ ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲೂ ಸಹ ಲೇಡಿ ಸಿಂಗ ಹವಾ ಫುಲ್ ಇದೆ. ಅಭಿಮಾನಿಗಳು ಶೋಭಾರಾಣಿ ಅವರ ಕಟೌಟ್ ಹಾಕುತ್ತಿದ್ದು, ಇದು ಭಾರೀ ಸಂಚಲನಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಎಚ್ಚೆತ್ತ ಐಪಿಎಸ್ ಶೋಭಾರಾಣಿ, ಅಭಿಮಾನಿಗಳಿಗೊಂದು ವಿಶೇಷ ಮನವಿ ಮಾಡಿದ್ದಾರೆ.

ಫ್ಲೆಕ್ಸ್​, ಸೋಷಿಯಲ್ ಮೀಡಿಯಾನಲ್ಲಿ ಮಂಡ್ಯ ಎಸ್ಪಿ ಶೋಭಾರಾಣಿ ಹವಾ: ಎಲ್ಲಾ ಗೊಂದಗಳಿಗೆ ತೆರೆ
Mandya Sp Dr Shobharani
ಪ್ರಶಾಂತ್​ ಬಿ.
| Edited By: |

Updated on: Mar 22, 2026 | 4:30 PM

Share

ಮಂಡ್ಯ, (ಮಾರ್ಚ್ 22): ಯುಗಾದಿ ಹಬ್ಬದ ಶುಭಾಶಯ ಕೋರಿ ಮಂಡ್ಯ ನಗರದಾದ್ಯಂತ ಎಸ್ಪಿ ಶೋಭಾರಾಣಿ  (mandya sp dr shobharani) ಅವರ ಫ್ಲೆಕ್ಸ್‌ಗಳನ್ನು‌ (Ugadi Flex) ಹಾಕಲಾಗಿದ್ದು . ಇದು ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.  ಇದರ ಬೆನ್ನಲ್ಲೇ ಎಚ್ಚೆತ್ತ ಐಪಿಎಸ್​ ಶೋಭಾರಾಣಿ, ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಪ್ರತಿಕ್ರಿಯಿಸಿದ್ದು,  ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ಫ್ಲೆಕ್ಸ್ ಹಾಕುವುದು ಸರಿಯಲ್ಲ ಎಂದಿದ್ದಾರೆ. ಈ ರೀತಿ ಮಾಡಬೇಡಿ ಎಂದು ತಮ್ಮ ಅಭಿಮಾನಿಗಳಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ.

ಇತ್ತೀಚೆಗೆ ಹಬ್ಬಗಳ ಹಿನ್ನೆಲೆಯಲ್ಲಿ ಎಸ್‌ಪಿ ಶೋಭಾರಾಣಿ ಅವರ ಫೋಟೋ ಬಳಸಿ ಶುಭಾಶಯ ಕೋರುವ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿತ್ತು. ಈ ಕುರಿತು ನಿನ್ನೆಯಷ್ಟೇ ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗಿ ಸಾರ್ವಜನಿಕರ ಚರ್ಚೆಗೆ ಕಾರಣವಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಅವರು ತಕ್ಷಣವೇ ಪ್ರತಿಕ್ರಿಯಿಸಿದ್ದು, ನನ್ನ ಭಾವಚಿತ್ರವನ್ನ ಬಳಸಿಕೊಂಡು ಯಾವುದೇ ಫ್ಲೆಕ್ಸ್‌ ಬ್ಯಾನರ್ ಹಾಗೂ ಪ್ರಚಾರ ಕಾರ್ಯಗಳನ್ನು ಬಳಸಬೇಡಿ. ಕಾನೂನು ಮತ್ತು ವೈಯಕ್ತಿಕ ಗೌರವ ಕಾಪಡೋದು ನನ್ನ ಕರ್ತವ್ಯವಾಗಿದೆ. ದಯವಿಟ್ಟು ನನ್ನ ಮನವಿಯನ್ನ ಗಂಭೀರವಾಗಿ ಪರಿಗಣಿಸಿ ಎಂದು ಸಾಮಾಜಿಕ ಜಾಲತಾಣಗಳ ಮೂಲಕ ಮನವಿ ಮಾಡಿದ್ದಾರೆ.

ಮಂಡ್ಯ ರಸ್ತೆ ತುಂಬೆಲ್ಲಾ ಶೋಭರಾಣಿ ಬ್ಯಾನರ್

ಸಕ್ಕರೆ ನಾಡು ಮಂಡ್ಯದಲ್ಲಿ ರಾಜಕಾರಣಿಗಳ ನಡುವಿನ ಫ್ಲೆಕ್ಸ್ ವಾರ್ ಹೊಸದೇನಲ್ಲ. ಆದರೆ, ಈಗ ಮಂಡ್ಯದ ಬೀದಿಗಳಲ್ಲಿ ಜನಪ್ರತಿನಿಧಿಗಳಿಗಿಂತಲೂ ಹೆಚ್ಚಾಗಿ ಐಪಿಎಸ್ ಅಧಿಕಾರಿಯೊಬ್ಬರ ಭಾವಚಿತ್ರವಿರುವ ಫ್ಲೆಕ್ಸ್ ಫೋಟೋಗಳು ರಾರಾಜಿಸುತ್ತಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಡಾ. ವಿ.ಜೆ. ಶೋಭರಾಣಿ ಅವರ ಈ ‘ಫ್ಲೆಕ್ಸ್ ಪ್ರೀತಿ’ ಜಿಲ್ಲೆಯಾದ್ಯಂತ ಸಂಚಲನ ಮೂಡಿಸಿತ್ತು.

ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಮಂಡ್ಯ ನಗರದ ಪ್ರಮುಖ ವೃತ್ತಗಳು, ಹೆದ್ದಾರಿ ಬದಿ ಮತ್ತು ಜನನಿಬಿಡ ಪ್ರದೇಶಗಳಲ್ಲಿ ಎಸ್ಪಿಯವರಿಗೆ ಹಬ್ಬದ ಶುಭಾಶಯ ಕೋರಿ ಬೃಹತ್ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿದೆ. ವಿಶೇಷವೆಂದರೆ, ಈ ಫ್ಲೆಕ್ಸ್‌ಗಳಲ್ಲಿ ಕೇವಲ ಎಸ್ಪಿಯವರ ಫೋಟೋ ಮಾತ್ರವಲ್ಲದೆ, ಮಂಜುನಾಥ್ ಗೌಡ, ಶಿವಾನಂದ್ ಮತ್ತು ಪಾಪಣ್ಣ ಎಂಬುವವರ ಭಾವಚಿತ್ರಗಳೂ ಕಾಣಿಸಿಕೊಂಡಿವೆ. ಈ ಹಿಂದೆ ಶೋಭರಾಣಿ ಅವರು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ಬಂದಾಗಲೂ ಸಹ ಇದೇ ರೀತಿ ನಗರದಾದ್ಯಂತ ಫ್ಲೆಕ್ಸ್ ಹಾಕಿ ಸ್ವಾಗತ ಕೋರಲಾಗಿತ್ತು.

ನಾನಾ ರೀತಿಯ ಚರ್ಚೆ

ಶೋಭರಾಣಿಯವರ ಪ್ಲೆಕ್ಸ್, ಬ್ಯಾನರ್​ ಬಗ್ಗೆ ಜಿಲ್ಲೆಯಲ್ಲಿ ಪರ ವಿರೋಧದ ಚರ್ಚೆಗಳು ಆಗುತ್ತಿದ್ದು, ಮಂಡ್ಯದ ಜನರು ಇಂತಹದ್ದನ್ನು ಈ ಹಿಂದೆ ನೋಡಿಲ್ಲ. ಅಧಿಕಾರಿಗಳು ಜನಸ್ನೇಹಿಯಾಗಿರುವುದು ಸ್ವಾಗತಾರ್ಹ, ಆದರೆ ಫ್ಲೆಕ್ಸ್ ಮೂಲಕ ಅತಿರಂಜಿತವಾಗಿ ಬಿಂಬಿಸಿಕೊಳ್ಳುವುದು ಬೇಕಿತ್ತೇ ಎಂಬುದು ಕೆಲವರ ವಾದ. ಸಾಮಾಜಿಕ ಜಾಲತಾಣಗಳಲ್ಲೂ ಈ ಫೋಟೋಗಳು ವೈರಲ್ ಆಗುತ್ತಿದ್ದು, ಅಧಿಕಾರಿಯೊಬ್ಬರು ಈ ಮಟ್ಟಿಗೆ ಫ್ಲೆಕ್ಸ್‌ಗಳಲ್ಲಿ ಕಾಣಿಸಿಕೊಳ್ಳುವುದು ರಾಜಕೀಯ ಪ್ರಭಾವದ ಮುನ್ಸೂಚನೆಯೇ ಎನ್ನುವ ಮಾತುಗಳು ಸಹ ಕೇಳಿಬಂದಿದ್ದವು. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಅವರು ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ
ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ
ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಣಿಸಿಕೊಂಡ ಕಾಡಾನೆಗಳ ಹಿಂಡು
ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಣಿಸಿಕೊಂಡ ಕಾಡಾನೆಗಳ ಹಿಂಡು
ಬಾಗಲಕೋಟೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32.50 ಲಕ್ಷ ರೂ. ಹಣ ಜಪ್ತಿ!
ಬಾಗಲಕೋಟೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32.50 ಲಕ್ಷ ರೂ. ಹಣ ಜಪ್ತಿ!