ಮಂಡ್ಯ: ಕ್ರಿಮಿನಾಶಕ ಮಿಶ್ರಿತ ನೀರು ಕುಡಿದು ಮಕ್ಕಳು ಸೇರಿ 15 ಜನರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಮದ್ದೂರು (Maddur) ತಾಲೂಕಿನ ಹೊಸಕೊಪ್ಪಲು ಗ್ರಾಮದಲ್ಲಿ ನಡೆದಿದೆ. ವಾಂತಿ ಭೇದಿಯಿಂದ ಬಳಲುತ್ತಿರುವ 15 ಜನರನ್ನು ಮಿಮ್ಸ್ (VIMS) ಆಸ್ಪತ್ರಗೆ ದಾಖಲಿಸಲಾಗಿದೆ. ಇನ್ನು ಅಸ್ವಸ್ಥಗೊಂಡ 15 ಜನರು ಬಳ್ಳಾರಿ ಮೂಲದವರು ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಕಲಬುರಗಿಯಲ್ಲಿ ಕಲುಷಿತ ನೀರು ಕುಡಿದು 15ಕ್ಕೂ ಹೆಚ್ಚು ಜನರು ಅಸ್ವಸ್ಥ
ಹೊಸಕೊಪ್ಪಲು ಗ್ರಾಮಕ್ಕೆ ಕಬ್ಬು ಕಟಾವಿಗೆಂದು ಬಳ್ಳಾರಿಯಿಂದ 30 ಜನರು ಬಂದಿದ್ದರು. ಇಂದು ಮಧ್ಯಾಹ್ನ (ನ. 28) ಊಟದ ನಂತರ, ಕಬ್ಬು ಕಟಾವು ಮಾಡುತ್ತಿದ್ದ ಸಮೀಪದ ಜಮೀನಿನಲ್ಲಿ ಕ್ರಿಮಿನಾಶಕ ಸಿಂಪಡಿಸಿದ ಡ್ರಮ್ನಲ್ಲಿದ್ದ ನೀರು ಕುಡಿದಿದ್ದಾರೆ. ಇದರಿಂದ ಮಕ್ಕಳು ಸೇರಿ 15ಮಂದಿ ವಾಂತಿ ಭೇದಿಯಿಂದ ಬಳಲಿದ್ದಾರೆ. ಕೂಡಲೇ ಅವರನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ