ಮಕ್ಕಳಿಗೆ ಮೊಟ್ಟೆ ತಿನ್ನಲು ಒತ್ತಡ ಹೇರಿಲ್ಲ; ಯಾವುದೇ ಕಾರಣಕ್ಕೂ ಶಾಲೆಗಳನ್ನು ಮುಚ್ಚಲ್ಲ: ಬಿ.ಸಿ ನಾಗೇಶ್ ಸ್ಪಷ್ಟನೆ

ನಾವು ಮಕ್ಕಳ ಮೇಲೆ ಒತ್ತಡ ಹೇರಿಲ್ಲ. ಮಕ್ಕಳಿಗೆ ಬಾಳೆ ಹಣ್ಣು ಕೂಡ ಕೊಡ್ತಿದ್ದೇವೆ‌. ಪ್ರೊಟೀನ್ ಯುಕ್ತ ಪದಾರ್ಥ ಆಯ್ಕೆ ಮಾಡ್ತಿದ್ದೇವೆ. ತಜ್ಞರು ಒಪ್ಪಿಕೊಂಡರೆ ಮುಂದಿನ ದಿನಗಳಲ್ಲಿ ಜಾರಿ ಮಾಡ್ತೇವೆ ಎಂದು ಮಂಡ್ಯದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟನೆ ನೀಡಿದ್ದಾರೆ.

ಮಕ್ಕಳಿಗೆ ಮೊಟ್ಟೆ ತಿನ್ನಲು ಒತ್ತಡ ಹೇರಿಲ್ಲ; ಯಾವುದೇ ಕಾರಣಕ್ಕೂ ಶಾಲೆಗಳನ್ನು ಮುಚ್ಚಲ್ಲ: ಬಿ.ಸಿ ನಾಗೇಶ್ ಸ್ಪಷ್ಟನೆ
ಶಿಕ್ಷಣ ಸಚಿವ ಬಿ ಸಿ ನಾಗೇಶ್ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on:Dec 11, 2021 | 6:31 PM

ಮಂಡ್ಯ: ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ತಿನ್ನಲು ಒತ್ತಡ ಹೇರಿಲ್ಲ. ಮಕ್ಕಳು ಅಪೌಷ್ಟಿಕತೆಯಿಂದ ತುಂಬಾ ಒದ್ದಾಡುತ್ತಿದ್ದಾರೆ. ಮಕ್ಕಳ ಮೇಲೆ, ಅವರ ಆರೋಗ್ಯದ ಮೇಲೆ ಪರಿಣಾಮ ಬೀರಿದೆ ಎಂದು ಸರ್ಕಾರ ಈ ಯೋಜನೆ ಜಾರಿ ಮಾಡಿದೆ. ಪ್ರೊಟೀನ್​ಗಾಗಿ ಮೊಟ್ಟೆ ನೀಡಲಾಗುತ್ತಿದೆ. ತಜ್ಞರು ಸಹ ಹೀಗೆ ಸಲಹೆ ನೀಡಿದ್ದಾರೆ. ನಾವು ಮಕ್ಕಳ ಮೇಲೆ ಒತ್ತಡ ಹೇರಿಲ್ಲ. ಮಕ್ಕಳಿಗೆ ಬಾಳೆ ಹಣ್ಣು ಕೂಡ ಕೊಡ್ತಿದ್ದೇವೆ‌. ಪ್ರೊಟೀನ್ ಯುಕ್ತ ಪದಾರ್ಥ ಆಯ್ಕೆ ಮಾಡ್ತಿದ್ದೇವೆ. ತಜ್ಞರು ಒಪ್ಪಿಕೊಂಡರೆ ಮುಂದಿನ ದಿನಗಳಲ್ಲಿ ಜಾರಿ ಮಾಡ್ತೇವೆ ಎಂದು ಮಂಡ್ಯದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟನೆ ನೀಡಿದ್ದಾರೆ.

ಕೆಲವೇ ದಿನಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಕ್ಕೆ ಆದೇಶ ಹೊರಡಿಸಲಾಗುತ್ತದೆ. ಅನೇಕ ವರ್ಷಗಳಿಂದ ರಾಜ್ಯದಲ್ಲಿ ಶಿಕ್ಷಕರ ಕೊರತೆ ಇದೆ‌. 15 ಸಾವಿರ ಪೋಸ್ಟ್ ಪೂರ್ಣ ಮಾಡಲಾಗುತ್ತದೆ. ಕೆಲವೆ ದಿನಗಳ ನೋಟಿಫಿಕೇಷನ್ ಮಾಡಲಾಗುತ್ತದೆ. ಶಾಲಾ ಕೊಠಡಿಗಳ ಕೊರತೆ ಇದೆ, ಸರಿಪಡಿಸುತ್ತೇವೆ. ಮುಂದಿನ ವರ್ಷ ಅಕಾಡೆಮಿ ಕೇರ್ ಒಳಗಡೆ NET ಅನುಷ್ಟಾನಕ್ಕೆ ತರುವ ಕೆಲಸ ಮಾಡ್ತೇವೆ. ಯಾವುದೇ ಕಾರಣಕ್ಕೂ ಶಾಲೆಗಳನ್ನ ಮುಚ್ಚಲ್ಲ. ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬಿ.ಸಿ. ನಾಗೇಶ್ ಹೇಳಿಕೆ ನೀಡಿದ್ದಾರೆ.

ಕೊರೊನಾ ಕುರಿತು ಗಂಭೀರ ಸ್ಥಿತಿ ಬಂದಿಲ್ಲ. 1 ಕೋಟಿ 20 ಲಕ್ಷ ಮಕ್ಕಳಲ್ಲಿ 102 ಮಕ್ಕಳಿಗೆ ಮಾತ್ರ ಸೋಂಕಿದೆ. ಯಾವುದೇ ರೀತಿಯ ಉದಾಸೀನ ಮಾಡದೆ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪಾಸಿಟಿವ್ ಬಂದಿರುವುದು ರೆಸಿಡೆನ್ಸಿ ಶಾಲೆಗಳಲ್ಲಿ. ಒಪನ್ ಶಾಲೆಗಳಲ್ಲಿ ಯಾವುದೇ ಮಕ್ಕಳಿಗೆ ಪಾಸಿಟಿವ್ ಬಂದಿಲ್ಲ. ಡಬಲ್ ಡಿಜಿಟ್ ಯಾವುದೇ ಜಿಲ್ಲೆಯಲ್ಲಿ ವರದಿಯಾಗಿಲ್ಲ. ಪಾಸಿಟಿವ್ ಬಂದ ಮಕ್ಕಳು ಆರೋಗ್ಯಕರವಾಗಿದ್ದಾರೆ. ಯಾವುದೇ ಕಾರಣಕ್ಕೂ ಶಾಲಾ-ಕಾಲೇಜು ಮುಚ್ಚಲ್ಲ. ಪಿಯುಸಿ ಮಿಡ್ ಟರ್ಮ್ ಎಕ್ಸಾಂ ತುಂಬಾ ಚೆನ್ನಾಗಿ ನಡೆಯುತ್ತಿದೆ. ವಿದ್ಯಾರ್ಥಿಗಳು ಆಸಕ್ತರಿದ್ದಾರೆ, ಎಲ್ಲಾ ರೀತಿಯ ಮುನ್ನೆಚ್ಚರಿಕೆ ತೆಗೆದುಕೊಂಡು ಶಾಲೆ ನಡೆಸುತ್ತೇವೆ ಎಂದು ನಾಗೇಶ್ ತಿಳಿಸಿದ್ದಾರೆ.

ಇದನ್ನೂ ಓದಿ: ಮೊಟ್ಟೆ ಬದಲು ತಾಯಿ ಕೈಗೆ ದುಡ್ಡು ಕೊಟ್ಟರೆ ಇನ್ನೂ ಚೆನ್ನಾಗಿ ಆಹಾರ ಹಾಕಬಹುದು: ಶೋಭಾ ಕರಂದ್ಲಾಜೆ

ಇದನ್ನೂ ಓದಿ: Health Tips: ಮೊಟ್ಟೆಗಿಂತಲೂ ಹೆಚ್ಚು ಪ್ರೋಟೀನ್ ಇರುವ 5 ಸಸ್ಯಾಹಾರಿ ಆಹಾರಗಳಿವು

Published On - 5:37 pm, Sat, 11 December 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್