AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲುವರಾಯಸ್ವಾಮಿ ವಿರುದ್ಧ ನಕಲಿ ಲಂಚ ಪತ್ರ ಸೃಷ್ಟಿ: ಇಬ್ಬರನ್ನು ಪೊಲೀಸ್ ವಶಕ್ಕೆ ನೀಡಿದ ಕೋರ್ಟ್

ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದ ಕೃಷಿ ಸಚಿವರ ವಿರುದ್ಧ ಲಂಚ ಪತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದು, ಇದೀಗ ನ್ಯಾಯಾಲಯ ಇಬ್ಬರನ್ನು ಪೊಲೀಸ್​ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.

TV9 Web
| Edited By: |

Updated on: Aug 21, 2023 | 11:57 AM

Share

ಮಂಡ್ಯ, (ಆಗಸ್ಟ್ 21): ಕೃಷಿ ಸಚಿವ ಚಲುವರಾಯಸ್ವಾಮಿ (Chaluvaraya Swamy) ಲಂಚ ಬೇಡಿಕೆ ಇಟ್ಟಿದ್ದಾರೆಂದು ಆರೋಪಿ ರಾಜ್ಯಪಾಲ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರಿಗೆ ಪತ್ರ ಬರೆದ (bribe letter) ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ. ಕೃಷಿ ಇಲಾಖೆ ಸಚಿವರ ವಿರುದ್ಧ ನಕಲಿ ಪತ್ರ ಸೃಷ್ಟಿಸಿದ ಆರೋಪ ಮೇರೆಗೆ ಕೆ.ಆರ್.ಪೇಟೆ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಗುರುಪ್ರಸಾದ್ ಹಾಗೂ ಕೃಷಿ ಅಧಿಕಾರಿ ಸುದರ್ಶನ್​ ಎನ್ನುವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಇದೀಗ ಕೋರ್ಟ್, ಆರೋಪಿಗಳನ್ನು 3 ದಿನ ಪೊಲೀಸರ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.

ಕೃಷಿ ಅಧಿಕಾರಿಗಳ ಬಂಧನ ವಿಚಾರಕ್ಕೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಹಾಗೆ ಆರೋಪ ಮಾಡುವುದರಲ್ಲಿ ಅರ್ಥ ಇಲ್ಲ. ಕೇವಲ ಪತ್ರ ನಕಲಿ ಎಂಬುದು ಗೊತ್ತಾಗಿದೆ. ಅದು ಹೇಗೆ ಭ್ರಷ್ಟಾಚಾರ ಎಂಬುದು ಸಾಬೀತಾಗುತ್ತದೆ? ಇನ್ನಷ್ಡು ತನಿಖೆ ಮಾಡುತ್ತೇವೆ. ಪತ್ರ ಯಾಕೆ ಬರೆದರು? ಯಾರು ಬರೆಸಿದರು? ಅವರೇ ಖುದ್ದಾಗಿ ಬರೆದರಾ ಅಥವಾ ಹಿಂದೆ ಯಾರಾದರೂ ಇದ್ದಾರಾ ಎನ್ನುವುದು ಗೊತ್ತಾಗಲಿದೆ ಎಂದರು.

ಇದನ್ನೂ ಓದಿ: ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚ ಪತ್ರ ಬರೆದವರನ್ನು ಪತ್ತೆ ಮಾಡಿದ ಸಿಐಡಿ, ಇಬ್ಬರು ವಶಕ್ಕೆ

ಮಂಡ್ಯ ಜಿಲ್ಲೆಯ ಕೆಎಸ್ಆರ್​ಟಿಸಿ (KSRTC) ಬಸ್ ನಿರ್ವಾಹಕ ವರ್ಗಾವಣೆ ಸಂಬಂಧ ಆತ್ಮಹತ್ಯೆ ಯತ್ನ ಪ್ರಕರಣ ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಈ ಪ್ರಕರಣದಲ್ಲಿ ಕೃಷಿ ಸಚಿವ ಎನ್​​.ಚಲುವರಾಯಸ್ವಾಮಿ(n chaluvaraya swamy )ಹೆಸರು ಕೇಳಿಬಂದಿದ್ದು, ವಿಪಕ್ಷಗಳು ಅವರ ರಾಜೀನಾಮೆಗೆ ಪಟ್ಟು ಹಿಡಿದಿದ್ದವು. ಇದರ ಬೆನ್ನಲ್ಲೇ ಇದೀಗ ಚಲುವರಾಯಸ್ವಾಮಿ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದ್ದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು.

ಪತ್ರದಲ್ಲೇನಿತ್ತು?

ಮಂಡ್ಯ, ಮಳವಳ್ಳಿ, ಕೃಷ್ಣರಾಜಪೇಟೆ, ಪಾಂಡವಪುರ, ನಾಗಮಂಗಲ, ಶ್ರೀರಂಗಪಟ್ಟಣ, ಮದ್ದೂರಿನ ಸಹಾಯಕ ಕೃಷಿ ಅಧಿಕಾರಿಗಳು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರದ ಮೂಲಕ ದೂರು ನೀಡಿದ್ದರು. 6 ರಿಂದ 8 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದ್ದು, ಇದಕ್ಕೆ ಕಡಿವಾಣ ಹಾಕುವಂತೆ ಕೃಷಿ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದರು. ಅಲ್ಲದೇ ಲಂಚಕ್ಕೆ ಕಡಿವಾಣ ಹಾಕದಿದ್ದರೆ ವಿಷ ಕುಡಿಯುವುದಾಗಿ ದೂರಿನ ಪತ್ರದಲ್ಲಿಉಲ್ಲೇಖಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಕಚೇರಿಯಿಂದ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎನ್ನುವ ಪತ್ರವೂ ಸಹ ವೈರಲ್ ಆಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಪ್ರಕರಣದ ತನಿಖೆಗೆಯನ್ನು ಸಿಐಡಿಗೆ ವಹಿಸಿತ್ತು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ