ಪ್ರೀತಿಸಲು ನಿರಾಕರಿಸಿದ್ದಕ್ಕೆ ವಿದ್ಯಾರ್ಥಿನಿ ಮೇಲೆ ಮಾರಣಾಂತಿಕ ಹಲ್ಲೆ: ಸಿಸಿಟಿವಿಲಿ ಸೆರೆ ಆಯ್ತು ಭಗ್ನ ಪ್ರೇಮಿಯ ಡೆಡ್ಲಿ ಅಟ್ಯಾಕ್

ನಿನ್ನೆ ಬೆಳಗ್ಗೆಯಿಂದ ಕಾಲೇಜು ಬಳಿಯೇ ಹೊಂಚು ಹಾಕಿದ್ದ ಸಂಪತ್, ನಂಬರ್ ಪ್ಲೇಟ್ ಇಲ್ಲದ ಸ್ಕೂಟರ್​​ನಲ್ಲಿ ಬಂದಿದ್ದ. ಸಂಜೆ ಕಾಲೇಜಿನಿಂದ ನವ್ಯ ಹೊರಗೆ ಬರುತ್ತಿದ್ದಂತೆ ಏಕಾಏಕಿ ಹಲ್ಲೆ ಮಾಡಿದ್ದಾನೆ.

ಪ್ರೀತಿಸಲು ನಿರಾಕರಿಸಿದ್ದಕ್ಕೆ ವಿದ್ಯಾರ್ಥಿನಿ ಮೇಲೆ ಮಾರಣಾಂತಿಕ ಹಲ್ಲೆ: ಸಿಸಿಟಿವಿಲಿ ಸೆರೆ ಆಯ್ತು ಭಗ್ನ ಪ್ರೇಮಿಯ ಡೆಡ್ಲಿ ಅಟ್ಯಾಕ್
ಪಾಗಲ್ ಪ್ರೇಮಿಗೆ ಸಾರ್ವಜನಿಕರಿಂದ ಧರ್ಮದೇಟು
Follow us
TV9 Web
| Updated By: Rakesh Nayak Manchi

Updated on: Jun 10, 2022 | 9:42 AM

ಮಂಡ್ಯ: ಪ್ರೀತಿ ನಿರಾಕರಿಸಿದ್ದಕ್ಕೆ ಪ್ರೀತಿಸಿದ ಹುಡುಗಿಯ ಮೇಲೆ ಪಾಗಲ್ ಪ್ರೇಮಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದಿದೆ. ಗುರುವಾರ ಬೆಳಗ್ಗೆ ಕಾಲೇಜು ಬಿಡುವರೆಗೂ ಹೊಂಚು ಹಾಕಿ ಕುತ್ತಿದ್ದು, ಹೊರಬರುತ್ತಿದ್ದಂತೆ ಹಲ್ಲೆ ಮಾಡಿದ್ದಾನೆ. ವೈ.ಯರಹಳ್ಳಿ ಗ್ರಾಮದ ನವ್ಯಾ(20) ಹಲ್ಲೆಗೊಳಗಾದ ವಿದ್ಯಾರ್ಥಿನಿ. ಹಲ್ಲೆ ನಡೆಸಿದ ಪಾಗಲ್ ಪ್ರೇಮಿಗೆ ಸಾರ್ವಜನಿಕರಿಂದ ಧರ್ಮದೇಟು ನೀಡಿದ್ದಾರೆ. ಪ್ಯಾರಾ ಮೆಡಿಕಲ್ ಓದುತ್ತಿದ್ದ ನವ್ಯ ಮೇಲೆ ಸಂಪತ್ ಕುಮಾರ್​ ಹಲ್ಲೆ ನಡೆಸಿದ್ದಾನೆ. ಒಂದೇ ಗ್ರಾಮದ ನವ್ಯಾ, ಸಂಪತ್ ಕುಮಾರ್ 2 ವರ್ಷದಿಂದ ಪ್ರೀತಿಸುತ್ತಿದ್ದರು. ಇಬ್ಬರ ಪ್ರೀತಿಯ ವಿಚಾರ ತಿಳಿದಾಗ   ಪ್ರೀತಿ ಪ್ರೇಮ ಬಿಟ್ಟು ಓದಿನ ಕಡೆ ಗಮನ ನೀಡುವಂತೆ ನವ್ಯ ತಂದೆ ಪರಮೇಶ್ ಬೈದು ಬುದ್ಧಿ ಮಾತು ಹೇಳಿದ್ದರು. ಬಳಿಕ ಸಂಪತ್ ಕುಮಾರ್ ಜತೆ ನವ್ಯ ಅಂತರ ಕಾಯ್ದುಕೊಂಡಿದ್ದಳು. ಪದೇ ಪದೇ ಪ್ರೀತಿಸುವಂತೆ ಸಂಪತ್​ ಪೀಡಿಸುತ್ತಿದ್ದ. ಮೊನ್ನೆ ಸ್ನೇಹಿತರ ಜೊತೆ ಬರ್ತಡೇ ಆಚರಿಸಿಕೊಂಡಿದ್ದ ವಿದ್ಯಾರ್ಥಿನಿ ನವ್ಯ, ತನ್ನ ಜತೆ ಬಾರದೆ ಸ್ನೇಹಿತರ ಜತೆ ಬರ್ತಡೇ ಮಾಡಿಕೊಂಡಿದ್ದಕ್ಕೆ ನವ್ಯಾ ಮನೆಗೆ ಹೋಗಿ ಗಲಾಟೆ ಮಾಡಿದ್ದಾನೆ.

ಇದನ್ನೂ ಓದಿ: NBK Birthday: ನಂದಮೂರಿ ಬಾಲಕೃಷ್ಣ ಜನ್ಮದಿನಕ್ಕೆ ಟೀಸರ್​ ಮೂಲಕ ವಿಶ್​ ಮಾಡಿದ ‘ಎನ್​ಬಿಕೆ 107’ ಬಳಗ

ಇಬ್ಬರು ಜತೆಯಲ್ಲಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡುವ ಬೆದರಿಕೆ ಹಾಕಿದ್ದು, ಆಗಲೂ  ನವ್ಯ ತಂದೆ ಬೈದು ಬುದ್ಧಿ ಮಾತು ಹೇಳಿ ಕಳುಹಿಸಿದ್ದರು. ಕಾಲೇಜು ಬಳಿಯೇ ಹೊಂಚು ಹಾಕಿದ್ದ ಸಂಪತ್, ಹಲ್ಲೆ ನಡೆಸುವುದಕ್ಕಾಗಿಯೇ ನಂಬರ್ ಪ್ಲೇಟ್ ಇಲ್ಲದ ಸ್ಕೂಟರ್​ನಲ್ಲಿ ರಿಪೀಸ್ ಬಟ್ಟಿ ತಂದಿದ್ದ. ಸಂಜೆ ಕಾಲೇಜಿನಿಂದ ಹೊರಗೆ ಬರುತ್ತಿದ್ದಂತೆ ಏಕಾಏಕಿ ನವ್ಯ ಮೇಲೆ ಹಲ್ಲೆ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ನವ್ಯಾಳನ್ನ ಸ್ನೇಹಿತೆ ಆಸ್ಪತ್ರೆಗೆ ಕರೆದೋಯ್ದಿರು. ಇತ್ತ ಹಲ್ಲೆ ನಡೆಸಿದ ಸಂಪತ್ ಸಾರ್ವಜನಿಕರಿಂದ ಹಿಗ್ಗಾಮುಗ್ಗ ಥಳಿಸಲಾಗಿದೆ. ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಲಾಗಿದೆ. ಮಂಡ್ಯದ ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಸಮುದ್ರದಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನಾಪತ್ತೆ

ಕಾರವಾರ: ಸುಮುದ್ರಕ್ಕೆ ಇಳಿದ ಇಬ್ಬರು ಯವಕರು ನಾಪತ್ತೆಯಾಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ನಡೆದಿದೆ. ಅಬ್ರಾರ್ ಶೇಕ್ (21), ಸುಶಾಂತ ಎಂ ಎಸ್ (23) ನಾಪತ್ತೆಯಾಗಿರುವ ಯುವಕರು. ಕೋಲಾರದಿಂದ ಮುರುಡೇಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದು, ಸಮುದ್ರದಲ್ಲಿ ಈಜುವಾಗ ದೊಡ್ಡ ಅಲೆಗೆ ಸಿಲುಕಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದ ಯುವಕರಿಗಾಗಿ ಶೋಧಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್