ಅಪ್ಪನ ಕೈಯಿಂದಲೇ ಅಧಿಕಾರಿ ಸ್ವೀಕರಿಸಿದ ಮಗಳು; ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಭಾವನಾತ್ಮಕ ಕ್ಷಣ

ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಎಸ್‌ಐ ಆಗಿದ್ದ ಬಿ‌.ಎಸ್.ವೆಂಕಟೇಶ್ ಅವರು ಎಸ್ಪಿ ಕಚೇರಿಗೆ ವರ್ಗಾವಣೆಯಾಗಿದ್ದು ತಮ್ಮ ಮಗಳೂ ಆದ ನೂತನ ಎಸ್‌ಐ ಬಿ.ವಿ.ವರ್ಷಾ ಅವರಿಗೆ ಜೂನ್ 20ರ ಮಂಗಳವಾರ ಅಧಿಕಾರ ಹಸ್ತಾಂತರ ಮಾಡಿದ್ರು.

Follow us
ಆಯೇಷಾ ಬಾನು
|

Updated on:Jun 22, 2023 | 8:48 AM

ಮಂಡ್ಯ: ಹೆಣ್ಣು ಮಕ್ಕಳಿಗೆ ಅಪ್ಪನೇ ಮೊದಲ ಹೀರೋ. ಜೀವನಕ್ಕೆ ಸ್ಫೂರ್ತಿ. ಅಪ್ಪನಂತೆ ಆಗಬೇಕು. ಅವರಿಗೆ ಕೀರ್ತಿ ತರಬೇಕು ಎಂಬ ಆಸೆ ಪ್ರತಿಯೊಬ್ಬ ಹೆಣ್ಣು ಮಕ್ಕಳಲ್ಲೂ ಇರುತ್ತದೆ. ಅದೇ ರೀತಿ ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆ(Mandya Central Police Station) ಅಪರೂಪದ ಕ್ಷಣಗಳಿಗೆ ಸಾಕ್ಷಿಯಾಗಿದೆ. ಅಪ್ಪನ ಕೈಯಿಂದಲೇ ಮಗಳು ಅಧಿಕಾರ ಸ್ವೀಕರಿಸಿದ ಭಾವನಾತ್ಮಕ ಘಟನೆಗೆ ಸಾಕ್ಷಿಯಾಗಿದೆ. ಒಂದು ಕಡೆ ತಂದೆಯ ವರ್ಗಾವಣೆಯಾಗುತ್ತಿದ್ರೆ ಮತ್ತೊಂದು ಕಡೆ ಅದೇ ಸ್ಥಳಕ್ಕೆ ಮಗಳ ನಿಯೋಜನೆಯಾಗಿದೆ. ತಂದೆ ಕೈಯಿಂದಲೇ ಮಗಳು ಅಧಿಕಾರ ವಹಿಸಿಕೊಂಡ ಅಪರೂಪದ ಘಟನೆ ಇದಾಗಿದೆ.

ಹೌದು ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಎಸ್‌ಐ ಆಗಿದ್ದ ಬಿ‌.ಎಸ್.ವೆಂಕಟೇಶ್ ಅವರು ಎಸ್ಪಿ ಕಚೇರಿಗೆ ವರ್ಗಾವಣೆಯಾಗಿದ್ದು ತಮ್ಮ ಮಗಳೂ ಆದ ನೂತನ ಎಸ್‌ಐ ಬಿ.ವಿ.ವರ್ಷಾ ಅವರಿಗೆ ಜೂನ್ 20ರ ಮಂಗಳವಾರ ಅಧಿಕಾರ ಹಸ್ತಾಂತರ ಮಾಡಿದ್ರು. ಈ ಮೂಲಕ ಠಾಣೆಯ ಸಿಬ್ಬಂದಿ ಭಾವನಾತ್ಮಕ ಸನ್ನಿವೇಶಕ್ಕೆ ಸಾಕ್ಷಿಯಾದ್ರು. ಈ ವೇಳೆ ಸಿಬ್ಬಂದಿ ಮತ್ತು ಅಲ್ಲಿಗೆ ಆಗಮಿಸಿದ್ದ ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು.

ಅರ್ಥಶಾಸ್ತ್ರದಲ್ಲಿ ಎಂಎ ಪದವಿಯನ್ನೂ ಪಡೆದಿರುವ ವರ್ಷಾ ಅವರು 2022ರ ಬ್ಯಾಚ್‌ನ ಪಿಎಸ್‌ಐ ಆಗಿದ್ದಾರೆ. ಇವರು ಗುಲ್ಬರ್ಗಾದಲ್ಲಿ ತರಬೇತಿ ಮುಗಿಸಿ, ಮಂಡ್ಯದಲ್ಲೇ 1 ವರ್ಷ ಪ್ರೊಬೆಷನರಿ ಅಧಿಕಾರಿಯಾಗಿ ಕಾರ‍್ಯನಿರ್ವಹಿಸಿದ್ದರು. ಈಗ ಅವರ ಮೊದಲ ಪೋಸ್ಟಿಂಗ್ ಕೂಡ ಮಂಡ್ಯದಲ್ಲೇ ಆಗಿದ್ದು ತಂದೆಯಿಂದಲೇ ಚಾರ್ಚ್ ಪಡೆದು ಪೊಲೀಸ್ ವೃತ್ತಿಜೀವನ ಆರಂಭಿಸಿದ್ದಾರೆ.

ಇದನ್ನೂ ಓದಿ:ಐಎಎಸ್‌, ಐಪಿಎಸ್‌ ಮಹಿಳಾ ಅಧಿಕಾರಿಗಳಿಬ್ಬರ ವಾರ್‌ ಮಧ್ಯ ಡಿ.ಕೆ.ರವಿ ಪತ್ನಿ ಎಂಟ್ರಿ, ಕುತೂಹಲ ಮೂಡಿಸಿದ ಕುಸುಮಾ ಟ್ವೀಟ್​ 

ಕಾರ್ಗಿಲ್​​ ಯುದ್ಧದಲ್ಲಿ ಸೇವೆ ಸಲ್ಲಿಸಿದ್ದ ಬಿ‌.ಎಸ್.ವೆಂಕಟೇಶ್

ತುಮಕೂರು ಜಿಲ್ಲೆ ಹುಲಿಯೂರು ದುರ್ಗದವರಾದ ವೆಂಕಟೇಶ್ ಅವರು 16 ವರ್ಷಗಳ ಕಾಲ ಮಿಲಿಟರಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಪಾಕಿಸ್ತಾನ, ಚೀನಾ, ಬಾಂಗ್ಲಾದೇಶದ ಗಡಿಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಅಲ್ಲದೆ ಕಾರ್ಗಿಲ್ ಯುದ್ಧದಲ್ಲೂ ಭಾಗಿಯಾಗಿದ್ದ ಹೆಗ್ಗಳಿಕೆ ಇವರಿಗೆ ಸಲ್ಲುತ್ತದೆ. ಮಿಲಿಟರಿ ಸೇವೆಯಿಂದ ನಿವೃತ್ತರಾದ ಬಳಿಕ ಪಿಎಸ್‌ಐ ಪರೀಕ್ಷೆ ಬರೆದು ಮಿಲಿಟರಿ ಕೋಟಾದಡಿ 2010ರ ಬ್ಯಾಚ್‌ನ ಪೊಲೀಸ್ ಸಬ್ ಇನ್ಸ್​ಪೆಕ್ಟರ್ ಆಗಿ 2ನೇ ವೃತ್ತಿ ಜೀವನ ಆರಂಭಿಸಿದ್ದರು. ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಜಿಲ್ಲೆ ಸೇರಿದಂತೆ ಹಲವೆಡೆ ಕರ್ತವ್ಯ ನಿರ್ವಹಿಸಿದ್ದಾರೆ. ಸದ್ಯ ಮಂಡ್ಯದ ಸೆಂಟ್ರಲ್ ಠಾಣೆಯಲ್ಲಿ ಕಳೆದ ಒಂದೂವರೆ ವರ್ಷದಿಂದ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಅವರನ್ನು ಎಸ್ಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.

ಮಿಲ್ಟ್ರಿ ಮ್ಯಾನ್ ಅಪ್ಪನೇ ಎಲ್ಲಕ್ಕೂ ಸ್ಫೂರ್ತಿ

ತಂದೆ ಕೈಯಿಂದ ಅಧಿಕಾರ ಪಡೆದ ಪಿಎಸ್ಐ ವರ್ಷಾ ಅವರು ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ತಂದೆಯೇ ನನ್ನ ಜೀವನದ ಹೀರೋ. ಅವರು ಮಾಡುತ್ತಿದ್ದ ಕೆಲಸವೇ ನನಗೆ ಪ್ರೇರಣೆ. 16 ವರ್ಷಗಳ ಕಾಲ ನನ್ನ ತಂದೆ ವೆಂಕಟೇಶ್ ದೇಶ ಸೇವೆಯಲ್ಲಿ ತೊಡಗಿದ್ರು. 2010 ರಲ್ಲಿ ಪಿಎಸ್ಐ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಅವರ ಕರ್ತವ್ಯ ನಿಷ್ಠೆ ನನಗೆ ಸ್ಪೂರ್ತಿ. ನಾನು ಕೂಡ ಅವರಂತೆ ಉತ್ತಮ ಕೆಲಸ ನಿರ್ವಹಿಸಿ ಒಳ್ಳೆ ಹೆಸರು ಸಂಪಾದಿಸುವೆ. ನೊಂದ ಜನರಿಗೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತೇನೆ. ತಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಸೆಂಟ್ರಲ್ ಪೊಲೀಸ್ ಠಾಣೆಗೆ ನಾನು ಪಿಎಸ್ಐಯಾಗಿ ನೇಮಕಗೊಂಡಿದ್ದೇನೆ.. ಇಂದು ನನ್ನ ಮನಸ್ಸಿಗೆ ತುಂಬಾ ಖುಷಿಯಾಗಿದೆ ಎಂದು ಮಹಿಳಾ ಪಿಎಸ್ಐ ವರ್ಷಾ ಭಾವುಕರಾದ್ರು.

ಮಂಡ್ಯಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:51 pm, Wed, 21 June 23

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ