AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandya News: ಸುತ್ತಿಗೆಯಿಂದ ಹೊಡೆದು ಇಬ್ಬರು ಪುಟ್ಟ ಕಂದಮ್ಮಗಳನ್ನು ಕೊಂದ ತಂದೆ

ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲ ಗ್ರಾಮದಲ್ಲಿ ಶ್ರೀಕಾಂತ್ ಎಂಬ ವ್ಯಕ್ತಿ ತನ್ನ ಪತ್ನಿ ಲಕ್ಷ್ಮೀಗೆ ಗಂಭೀರವಾಗಿ ಹಲ್ಲೆ ಮಾಡಿದ್ದಾನೆ. ಅಷ್ಟೇ ಅಲ್ಲದೆ ಜಗತ್ತನ್ನೇ ಅರಿಯದ ಮೂರು ವರ್ಷದ ಆದಿತ್ಯ ಹಾಗೂ ನಾಲ್ಕು ವರ್ಷದ ಅಮೂಲ್ಯ ಎಂಬ ಇಬ್ಬರು ಮುದ್ದಾದ ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ.

Mandya News: ಸುತ್ತಿಗೆಯಿಂದ ಹೊಡೆದು ಇಬ್ಬರು ಪುಟ್ಟ ಕಂದಮ್ಮಗಳನ್ನು ಕೊಂದ ತಂದೆ
ತಂದೆಯಿಂದಲೇ ಹತ್ಯೆಯಾದ ಮಕ್ಕಳು, ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ
Follow us
ಆಯೇಷಾ ಬಾನು
|

Updated on:Jun 25, 2023 | 9:53 AM

ಮಂಡ್ಯ: ಮನುಷ್ಯರಲ್ಲಿ ಮಾನವೀಯತೆ ಮರೆಯಾಗುತ್ತಿದೆ. ನನ್ನವರು ಎಂಬ ಭಾವನೆ ನಶಿಸುತ್ತಿದೆ. ಪ್ರೀತಿ,ಪ್ರೇಮಗಳು ಬೆಲೆ ಕಳೆದುಕೊಳ್ಳುತ್ತಿವೆ. ಸಕ್ಕರೆ ನಾಡು ಮಂಡ್ಯದಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ತಂದೆಯೇ ತನ್ನ ಇಬ್ಬರು ಪುಟ್ಟ ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ(Father Killed Daughters). ಪತ್ನಿಯ ಮೇಲೂ ಹಲ್ಲೆ ಮಾಡಿದ್ದಾನೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲ ಗ್ರಾಮದಲ್ಲಿ ಶ್ರೀಕಾಂತ್ ಎಂಬ ವ್ಯಕ್ತಿ ತನ್ನ ಪತ್ನಿ ಲಕ್ಷ್ಮೀಗೆ ಗಂಭೀರವಾಗಿ ಹಲ್ಲೆ ಮಾಡಿದ್ದಾನೆ. ಅಷ್ಟೇ ಅಲ್ಲದೆ ಜಗತ್ತನ್ನೇ ಅರಿಯದ ಮೂರು ವರ್ಷದ ಆದಿತ್ಯ ಹಾಗೂ ನಾಲ್ಕು ವರ್ಷದ ಅಮೂಲ್ಯ ಎಂಬ ಇಬ್ಬರು ಮುದ್ದಾದ ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ.

ಕಲಬುರಗಿ ಜಿಲ್ಲೆ ಜೇವರ್ಗಿಯಿಂದ ಬಂದು ಮರಳಗಾಲದ ಆಲೆಮನೆಯಲ್ಲಿ ಈ ಕುಟುಂಬ ಕೆಲಸ ಮಾಡುತ್ತಿತ್ತು. ಇಂದು ಮುಂಜಾನೆ 4 ಗಂಟೆಯ ವೇಳೆ ಮಕ್ಕಳನ್ನು ಕೊಂದು ಪತ್ನಿ ಮೇಲೆ ಹಲ್ಲೆ ನಡೆಸಿ ಶ್ರೀಕಾಂತ್ ಪರಾರಿಯಾಗಿದ್ದಾನೆ. ಗಂಭೀರ ಗಾಯಗೊಂಡ ಲಕ್ಷ್ಮೀಯನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Ghaziabad Crime: ಆಭರಣ ಕದ್ದಿದ್ದಾಳೆ ಎಂದು ಆರೋಪಿಸಿ ಯುವತಿ ಮೇಲೆ ಬ್ಲೇಡ್​, ರಾಡ್​ನಿಂದ ಹಲ್ಲೆ ನಡೆಸಿ ಹತ್ಯೆಗೈದ ಸಂಬಂಧಿಕರು

ಮೈಸೂರಿನಲ್ಲಿ ಜೋಡಿ ಕೊಲೆ

ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದ  ಸರಸ್ವತಿಪುರಂ ಬಡಾವಣೆಯಲ್ಲಿ ದುಷ್ಕರ್ಮಿಗಳಿಂದ ಇಬ್ಬರು ಕಾವಲುಗಾರರ ಬರ್ಬರ ಹತ್ಯೆಯಾಗಿದೆ. ಕಾವಲುಗಾರರಾದ ವೆಂಕಟೇಶ್(75), ಷಣ್ಮುಗ(65) ಕೊಲೆಯಾದ ವ್ಯಕ್ತಿಗಳು. ಸ್ಥಳಕ್ಕೆ ಹುಣಸೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಾಕೊಲೇಟ್ ಕೊಡಿಸೋದಾಗಿ ಪುಸಲಾಯಿಸಿ ಬಾಲಕಿ ಮೇಲೆ ಅತ್ಯಾಚಾರ

ರಾಯಚೂರು ಜಿಲ್ಲೆಯ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಾಕೊಲೇಟ್ ಕೊಡಿಸೋದಾಗಿ ಪುಸಲಾಯಿಸಿ 4ನೇ ತರಗತಿ ವಿದ್ಯಾರ್ಥಿನಿಯನ್ನು ಸ್ಕೂಟರ್​ನಲ್ಲಿ ಕರೆದೊಯ್ದು ಜಮೀನಿನಲ್ಲಿ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಬಾಲಕಿಯ ಮನೆಯ ಪಕ್ಕದಲ್ಲೇ ವಾಸವಿದ್ದ 52 ವರ್ಷ ವಯಸ್ಸಿನ ಆರೋಪಿ ಸಮಯ ನೋಡಿಕೊಂಡು ಚಾಕಲೇಟ್ ಆಸೆ ತೋರಿಸಿ ಕೃತ್ಯ ಎಸಗಿದ್ದಾನೆ. ಸದ್ಯ ಆರೋಪಿ ವಿರುದ್ಧ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:48 am, Thu, 22 June 23