ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಕೈ ಮುಖಂಡನ ವಿರುದ್ಧ ಎಫ್​ಐಆರ್

ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮೋಹನ್ ಲಿಂಗೇಶ್ವರ್ ಅವರು ಕಾಂಗ್ರೆಸ್ ಮುಖಂಡರಾಗಿದ್ದರೂ ತಮ್ಮದೇ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದರು. ತನ್ನ ಕರೆಂಟ್ ಬಿಲ್ ನೋಡಿ ಕೋಪಗೊಂಡಿದ್ದ ಮೋಹನ್ ಸರ್ಕಾರದ ಗೃಹ ಜ್ಯೋತಿ ಯೋಜನೆ ವಿರುದ್ದ ಸಿಡಿದೆದ್ದು ಆಕ್ರೋಶ ವ್ಯಕ್ತಪಡಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಮೋಹನ್ ತರಾಟೆಯ ವಿಡಿಯೋ ವೈರಲ್ ಆಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆ ಮೇಲುಕೋಟೆ ಪೋಲೀಸರು ಮೋಹನ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಕೈ ಮುಖಂಡನ ವಿರುದ್ಧ ಎಫ್​ಐಆರ್
ಮೋಹನ್ ಲಿಂಗೇಶ್ವರ್
Follow us
ಪ್ರಶಾಂತ್​ ಬಿ.
| Updated By: ಆಯೇಷಾ ಬಾನು

Updated on:Nov 02, 2023 | 2:04 PM

ಮಂಡ್ಯ, ನ.02: ಸರ್ಕಾರದ ವಿರುದ್ದ ಟೀಕೆ ಮಾಡಿದ್ದ ಕೈ ಕಾರ್ಯಕರ್ತನ ವಿರುದ್ದ ಮೇಲುಕೋಟೆ ಪೋಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿದ್ದಾರೆ. ಪಾಂಡವಪುರ ತಾಲೂಕಿನ ಸುಂಕಾತೊಣ್ಣೂರು ಗ್ರಾಮದ ಮೋಹನ್ ಲಿಂಗೇಶ್ವರ್ ವಿರುದ್ದ FIR ದಾಖಲಾಗಿದೆ. ತಮ್ಮ ಪಕ್ಷದ ನಾಯಕರು ಸುಳ್ಳು ಭರವಸೆ ಕೊಟ್ಟು ಜನರಿಗೆ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಸರ್ಕಾರದ (Karnataka Government) ವಿರುದ್ಧ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಕೈ ಮುಖಂಡ ಮೋಹನ್ ಆಕ್ರೋಶ ಹೊರ ಹಾಕಿದ್ದರು. ಸೆಲ್ಫಿ ವಿಡಿಯೋ ಮಾಡಿ ಸಿಎಂ‌ ಸಿದ್ಧರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಹಿನ್ನಲೆ ಮೋಹನ್ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮೋಹನ್ ಲಿಂಗೇಶ್ವರ್ ಅವರು ಕಾಂಗ್ರೆಸ್ ಮುಖಂಡರಾಗಿದ್ದರೂ ತಮ್ಮದೇ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕಳೆದ ತಿಂಗಳು ಗೃಹಜ್ಯೋತಿ ಯೋಜನೆ ಅಡಿ 800 ರೂ ಬಿಲ್ ಬಂದಿದ್ದಕ್ಕೆ ಸೆಲ್ಪಿ ವಿಡಿಯೋ ಮಾಡಿ ಅವಶ್ಯ ಶಬ್ದಗಳಿಂದ ಸಿಎಂ ಹಾಗೂ ಡಿಸಿಎಂ ವಿರುದ್ದ ನಿಂದಿಸಿದ್ದರು. ತನ್ನ ಕರೆಂಟ್ ಬಿಲ್ ನೋಡಿ ಕೋಪಗೊಂಡಿದ್ದ ಮೋಹನ್ ಸರ್ಕಾರದ ಗೃಹ ಜ್ಯೋತಿ ಯೋಜನೆ ವಿರುದ್ದ ಸಿಡಿದೆದ್ದು ಆಕ್ರೋಶ ವ್ಯಕ್ತಪಡಿಸಿದ್ದರು.  ಪಕ್ಷದ ನಾಯಕರಾದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರ ಬಗ್ಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಮೋಹನ್ ತರಾಟೆಯ ವಿಡಿಯೋ ವೈರಲ್ ಆಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆ ಮೇಲುಕೋಟೆ ಪೋಲೀಸರು ಮೋಹನ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿದ್ದಾರೆ. ಮೋಹನ್ ವಿರುದ್ದ ಐಪಿಸಿ 504, 507ರ ಅಡಿ ದೂರು ದಾಖಲಾಗಿದೆ.

ಇದನ್ನೂ ಓದಿ: ಸಾಮಾಜಿಕ ಮೌಢ್ಯಕ್ಕೆ ಸೊಪ್ಪು ಹಾಕದ ಸಿಎಂ ಸಿದ್ದರಾಮಯ್ಯ ಈ ಬಾರಿಯಾದರೂ ಹಂಪಿ ವಿರೂಪಾಕ್ಷನಿಗೆ ಪೂಜೆ ಸಲ್ಲಿಸುತ್ತಾರಾ? ಸದ್ಯದ ಯಕ್ಷ ಪ್ರಶ್ನೆ!

ಕಾವೇರಿಗಾಗಿ ಮುಂದುವರೆದ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನ ವಿರೋಧಿಸಿ ಇಂದು ಸಹಾ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಕಳೆದ 59 ದಿನಗಳಿಂದ ನಿರಂತರವಾಗಿ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಯುತ್ತಿದೆ. ಇಂದಿನ ಪ್ರತಿಭಟನೆಗೆ ವಿದ್ಯಾರ್ಥಿಗಳು ಕೂಡ ಸಾಥ್ ನೀಡಿದ್ರು. ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ರು.

ಮಂಡ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:50 pm, Thu, 2 November 23

ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮರಳಿನಲ್ಲಿ ಸಿಲುಕಿಕೊಂಡ ಫೆರಾರಿ ಕಾರು; ರಸ್ತೆಗೆ ಎಳೆದು ತಂದ ಎತ್ತಿನ ಗಾಡಿ
ಮರಳಿನಲ್ಲಿ ಸಿಲುಕಿಕೊಂಡ ಫೆರಾರಿ ಕಾರು; ರಸ್ತೆಗೆ ಎಳೆದು ತಂದ ಎತ್ತಿನ ಗಾಡಿ