ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಕೈ ಮುಖಂಡನ ವಿರುದ್ಧ ಎಫ್​ಐಆರ್

ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮೋಹನ್ ಲಿಂಗೇಶ್ವರ್ ಅವರು ಕಾಂಗ್ರೆಸ್ ಮುಖಂಡರಾಗಿದ್ದರೂ ತಮ್ಮದೇ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದರು. ತನ್ನ ಕರೆಂಟ್ ಬಿಲ್ ನೋಡಿ ಕೋಪಗೊಂಡಿದ್ದ ಮೋಹನ್ ಸರ್ಕಾರದ ಗೃಹ ಜ್ಯೋತಿ ಯೋಜನೆ ವಿರುದ್ದ ಸಿಡಿದೆದ್ದು ಆಕ್ರೋಶ ವ್ಯಕ್ತಪಡಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಮೋಹನ್ ತರಾಟೆಯ ವಿಡಿಯೋ ವೈರಲ್ ಆಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆ ಮೇಲುಕೋಟೆ ಪೋಲೀಸರು ಮೋಹನ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಕೈ ಮುಖಂಡನ ವಿರುದ್ಧ ಎಫ್​ಐಆರ್
ಮೋಹನ್ ಲಿಂಗೇಶ್ವರ್
Edited By: ಆಯೇಷಾ ಬಾನು

Updated on: Nov 02, 2023 | 2:04 PM

ಮಂಡ್ಯ, ನ.02: ಸರ್ಕಾರದ ವಿರುದ್ದ ಟೀಕೆ ಮಾಡಿದ್ದ ಕೈ ಕಾರ್ಯಕರ್ತನ ವಿರುದ್ದ ಮೇಲುಕೋಟೆ ಪೋಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿದ್ದಾರೆ. ಪಾಂಡವಪುರ ತಾಲೂಕಿನ ಸುಂಕಾತೊಣ್ಣೂರು ಗ್ರಾಮದ ಮೋಹನ್ ಲಿಂಗೇಶ್ವರ್ ವಿರುದ್ದ FIR ದಾಖಲಾಗಿದೆ. ತಮ್ಮ ಪಕ್ಷದ ನಾಯಕರು ಸುಳ್ಳು ಭರವಸೆ ಕೊಟ್ಟು ಜನರಿಗೆ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಸರ್ಕಾರದ (Karnataka Government) ವಿರುದ್ಧ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಕೈ ಮುಖಂಡ ಮೋಹನ್ ಆಕ್ರೋಶ ಹೊರ ಹಾಕಿದ್ದರು. ಸೆಲ್ಫಿ ವಿಡಿಯೋ ಮಾಡಿ ಸಿಎಂ‌ ಸಿದ್ಧರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಹಿನ್ನಲೆ ಮೋಹನ್ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮೋಹನ್ ಲಿಂಗೇಶ್ವರ್ ಅವರು ಕಾಂಗ್ರೆಸ್ ಮುಖಂಡರಾಗಿದ್ದರೂ ತಮ್ಮದೇ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕಳೆದ ತಿಂಗಳು ಗೃಹಜ್ಯೋತಿ ಯೋಜನೆ ಅಡಿ 800 ರೂ ಬಿಲ್ ಬಂದಿದ್ದಕ್ಕೆ ಸೆಲ್ಪಿ ವಿಡಿಯೋ ಮಾಡಿ ಅವಶ್ಯ ಶಬ್ದಗಳಿಂದ
ಸಿಎಂ ಹಾಗೂ ಡಿಸಿಎಂ ವಿರುದ್ದ ನಿಂದಿಸಿದ್ದರು. ತನ್ನ ಕರೆಂಟ್ ಬಿಲ್ ನೋಡಿ ಕೋಪಗೊಂಡಿದ್ದ ಮೋಹನ್ ಸರ್ಕಾರದ ಗೃಹ ಜ್ಯೋತಿ ಯೋಜನೆ ವಿರುದ್ದ ಸಿಡಿದೆದ್ದು ಆಕ್ರೋಶ ವ್ಯಕ್ತಪಡಿಸಿದ್ದರು.  ಪಕ್ಷದ ನಾಯಕರಾದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರ ಬಗ್ಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಮೋಹನ್ ತರಾಟೆಯ ವಿಡಿಯೋ ವೈರಲ್ ಆಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆ ಮೇಲುಕೋಟೆ ಪೋಲೀಸರು ಮೋಹನ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿದ್ದಾರೆ. ಮೋಹನ್ ವಿರುದ್ದ ಐಪಿಸಿ 504, 507ರ ಅಡಿ ದೂರು ದಾಖಲಾಗಿದೆ.

ಇದನ್ನೂ ಓದಿ: ಸಾಮಾಜಿಕ ಮೌಢ್ಯಕ್ಕೆ ಸೊಪ್ಪು ಹಾಕದ ಸಿಎಂ ಸಿದ್ದರಾಮಯ್ಯ ಈ ಬಾರಿಯಾದರೂ ಹಂಪಿ ವಿರೂಪಾಕ್ಷನಿಗೆ ಪೂಜೆ ಸಲ್ಲಿಸುತ್ತಾರಾ? ಸದ್ಯದ ಯಕ್ಷ ಪ್ರಶ್ನೆ!

ಕಾವೇರಿಗಾಗಿ ಮುಂದುವರೆದ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನ ವಿರೋಧಿಸಿ ಇಂದು ಸಹಾ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಕಳೆದ 59 ದಿನಗಳಿಂದ ನಿರಂತರವಾಗಿ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಯುತ್ತಿದೆ. ಇಂದಿನ ಪ್ರತಿಭಟನೆಗೆ ವಿದ್ಯಾರ್ಥಿಗಳು ಕೂಡ ಸಾಥ್ ನೀಡಿದ್ರು. ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ರು.

ಮಂಡ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:50 pm, Thu, 2 November 23

Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
Follow Us