ಅರಣ್ಯಾಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಆರೋಪ: ಶಾಸಕ ಸುರೇಶಗೌಡ ಸೇರಿದಂತೆ 10 ಜನರ ವಿರುದ್ಧ FIR ದಾಖಲು

| Updated By: ಗಂಗಾಧರ​ ಬ. ಸಾಬೋಜಿ

Updated on: Aug 06, 2022 | 11:03 AM

ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಿನ್ನೆಲೆ ಶಾಸಕ ಸುರೇಶಗೌಡ ಸೇರಿದಂತೆ 10 ಜನರ ವಿರುದ್ಧ ಜಿಲ್ಲೆಯ ನಾಗಮಂಗಲ ಗ್ರಾಮಾಂತರ ಠಾಣೆಯಲ್ಲಿ ಎಫ್​ಐಆರ್​ ದಾಖಲು ಮಾಡಲಾಗಿದೆ.

ಅರಣ್ಯಾಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಆರೋಪ: ಶಾಸಕ ಸುರೇಶಗೌಡ ಸೇರಿದಂತೆ 10 ಜನರ ವಿರುದ್ಧ FIR ದಾಖಲು
ಪ್ರಾತಿನಿಧಿಕ ಚಿತ್ರ
Follow us on

ಮಂಡ್ಯ: ಅರಣ್ಯಾಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಿನ್ನೆಲೆ ನಾಗಮಂಗಲ ಶಾಸಕ ಸುರೇಶ್​​ಗೌಡ ವಿರುದ್ಧ ಎಫ್​ಐಆರ್​ ದಾಖಲು ಮಾಡಲಾಗಿದೆ. ಸುರೇಶ್​​ಗೌಡ (MLA Suresh Gowda) ವಿರುದ್ಧ ನಾಗಮಂಗಲ ಆರ್​​ಎಫ್​ಓ (RFO) ಸತೀಶ್ ದೂರು ನೀಡಿದ್ದು, ಶಾಸಕ ಸುರೇಶಗೌಡ ಸೇರಿದಂತೆ 10 ಜನರ ವಿರುದ್ಧ ಜಿಲ್ಲೆಯ ನಾಗಮಂಗಲ ಗ್ರಾಮಾಂತರ ಠಾಣೆಯಲ್ಲಿ ಎಫ್​ಐಆರ್​ ದಾಖಲು ಮಾಡಲಾಗಿದೆ. ಪಶು ನಿರೋಧಕ ಕಂದಕ ತೆಗೆಸಲು ಅರಣ್ಯಾಧಿಕಾರಿಗಳು ಮುಂದಾಗಿದ್ದು, ನಾಗಮಂಗಲದ ಹಾಲತಿ ಗ್ರಾಮದಲ್ಲಿ ಅರಣ್ಯ ಸಿಬ್ಬಂದಿ ಕೆಲಸ ಮಾಡುತ್ತಿದ್ದರು. ಈ ವೇಳೆ ಹಾಲತಿ ಗ್ರಾಮಸ್ಥರಿಂದ ಅರಣ್ಯ ಸಿಬ್ಬಂದಿ ಕೆಲಸಕ್ಕೆ ಅಡ್ಡಿ ಪಡಿಸಲಾಗಿದೆ. ಅರಣ್ಯ ಒತ್ತುವರಿದಾರರಿಗೆ ಶಾಸಕರು ಕುಮ್ಮಕ್ಕು ನೀಡಿದ್ದಾರೆಂದು ದೂರು ನೀಡಲಾಗಿದೆ. ಮೊನ್ನೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಬೆದರಿಕೆ ಹಾಕಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿತ್ತು.

ಅರಣ್ಯ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ:

ಅರಣ್ಯ ಸಿಬ್ಬಂದಿಗಳನ್ನು ಅವಾಚ್ಯ ಶಬ್ದಗಳಿಂದ ಶಾಸಕ ನಿಂದಿಸಿರುವಂತಹ ಘಟನೆ ನಾಗಮಂಗಲ ತಾಲೂಕಿನ ಹಾಲತಿ ಗ್ರಾಮದಲ್ಲಿ ನಿನ್ನೆ ನಡೆದಿದೆ. ನಾಗಮಂಗಲ ಶಾಸಕ ಸುರೇಶ್ ಗೌಡ  ಅಧಿಕಾರಿಗಳ ವಿರುದ್ಧ ಅಸಭ್ಯ ಪದ ಬಳಕೆ ಮಾಡಲಾಗಿದೆ ಎನ್ನಲಾಗುತ್ತಿದೆ. ಜಮೀನು ವಿಚಾರವಾಗಿ ಅರಣ್ಯ ಇಲಾಖೆ ಹಾಗೂ ರೈತರ ನಡುವೆ ಘರ್ಷಣೆ ಉಂಟಾಗಿದೆ. ಸರ್ವೆ ನಂ 135ರಲ್ಲಿ ಅರಣ್ಯ ಇಲಾಖೆ ನೆಡು ತೋಪು ಬೆಳೆಸಿದೆ. ಅದೇ ಜಮೀನಿಗಾಗಿ ರೈತರು ಬಗರ್ ಹುಕುಂ ಸಾಗುವಳಿ ಅರ್ಜಿ ಸಲ್ಲಿಸಿದ್ದರು.

ಜಮೀನು ವಶಪಡಿಸಿಕೊಳ್ಳಲು ಬಂದ ಅಧಿಕಾರಿಗಳ ವಿರುದ್ಧ ರೈತರ ಅಸಮಾಧಾನಗೊಂಡಿದ್ದು, ಗಾಳಿಯಲ್ಲಿ ಗುಂಡು ಹಾರಿಸಿ ರೈತರನ್ನು ಅಧಿಕಾರಿಗಳು ಬೆದರಿಸಿದ್ದಾರೆ. ಅಧಿಕಾರಿಗಳ ವರ್ತನೆಗೆ ಶಾಸಕ ಸುರೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿದ್ದು, ಅವಾಚ್ಯ ಶಬ್ದಗಳಿಂದ ಬೈದು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.