ಮಂಡ್ಯದ ಮನ್ ಮುಲ್​​ನಲ್ಲಿ ಅಗ್ನಿ ಅವಘಡ: ಅನುಮಾನಕ್ಕೆ ಕಾರಣವಾದ ಅಧಿಕಾರಿಗಳ ನಡೆ

ಇತ್ತೀಚೆಗೆ ಆರಂಭಗೊಂಡಿದ್ದ ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿರುವ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ (ಮನ್​ ಮುಲ್)ನಲ್ಲಿ ಬೆಂಕಿ ಅವಘಡ ಸಂಭವಿಸಿದೆ.

Follow us
| Updated By: ವಿವೇಕ ಬಿರಾದಾರ

Updated on:Oct 08, 2023 | 10:26 AM

ಮಂಡ್ಯ ಅ.08: ಬೆಂಗಳೂರು ಜಿಲ್ಲೆಯ ಆನೆಕಲ್​ ತಾಲೂಕಿನ ಅತ್ತಿಬೆಲೆಯಲ್ಲಿನ ಪಟಾಕಿ ಗೋಡೌನ್​​ (Firecracker Godown) ಅಗ್ನಿ ದುರಂತ ಮಾಸುವ ಮುನ್ನವೇ ಇತ್ತೀಚೆಗೆ ಆರಂಭಗೊಂಡಿದ್ದ ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿರುವ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ (ಮನ್​ ಮುಲ್) (ManMul)​​ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಮನ್​ಮುಲ್​​ನ (Madya) ಪ್ಯಾಕಿಂಗ್​ ಸೆಕ್ಷನ್​ನಲ್ಲಿ ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡು ಆತಂಕ ಸೃಷ್ಟಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಬೆಂಕಿ ಹತ್ತಿರುವ ಕಟ್ಟಡದಲ್ಲಿ ಮಾರ್ನಿಂಗ್ ಶಿಫ್ಟ್​​ನಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಹೊರಕ್ಕೆ ಓಡಿಬಂದಿದ್ದಾರೆ. ಅದೃಷ್ಟವಶಾತ್​ ಯಾವುದೆ ಪ್ರಣಾಪಾಯ ಸಂಭವಿಸಿಲ್ಲ. ಲಕ್ಷಾಂತರ ರೂ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ಗೋಡೌನ್​ ಅಗ್ನಿ ದುರಂತ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಅನುಮಾನಕ್ಕೆ ಕಾರಣವಾದ ಮನ್​ ಮುಲ್ ಅಧಿಕಾರಿಗಳ ನಡೆ

ಇನ್ನು ಬೆಂಕಿ ಅವಘಡ ಚಿತ್ರಕರಣಕ್ಕೆ ಟಿವಿ9 ವರದಿಗಾರರು ಹೋದಾಗ ಮನ್​ಮುಲ್ ಅಧಿಕಾರಿಗಳು ಸ್ಥಳದಿಂದ ಹೊರಹೋಗುವಂತೆ ಅವಾಜ್ ಹಾಕಿದ್ದಾರೆ. ಅಲ್ಲದೆ ಕ್ಯಾಮರಾ, ಟ್ರೈಪಾಡ್ ಕಿತ್ತುಕೊಳ್ಳಲು ಯತ್ನಿಸಿ, ಚಿತ್ರೀಕರಣ ಮಾಡದಂತೆ ಒತ್ತಡ ಹಾಕಿದ್ದಾರೆ. ಅಲ್ಲದೆ ಸೆಕ್ಯುರಿಟಿ ಗಾರ್ಡ್​​ಗಳಿಂದ ನಮ್ಮ ವರದಿಗಾರರನ್ನು ಹೊರಗೆ ಹೋಗುವಂತೆ ಬೆದರಿಕೆ ಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:26 am, Sun, 8 October 23