ಮಂಡ್ಯ ಅ.08: ಬೆಂಗಳೂರು ಜಿಲ್ಲೆಯ ಆನೆಕಲ್ ತಾಲೂಕಿನ ಅತ್ತಿಬೆಲೆಯಲ್ಲಿನ ಪಟಾಕಿ ಗೋಡೌನ್ (Firecracker Godown) ಅಗ್ನಿ ದುರಂತ ಮಾಸುವ ಮುನ್ನವೇ ಇತ್ತೀಚೆಗೆ ಆರಂಭಗೊಂಡಿದ್ದ ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿರುವ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ (ಮನ್ ಮುಲ್) (ManMul) ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಮನ್ಮುಲ್ನ (Madya) ಪ್ಯಾಕಿಂಗ್ ಸೆಕ್ಷನ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡು ಆತಂಕ ಸೃಷ್ಟಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಬೆಂಕಿ ಹತ್ತಿರುವ ಕಟ್ಟಡದಲ್ಲಿ ಮಾರ್ನಿಂಗ್ ಶಿಫ್ಟ್ನಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಹೊರಕ್ಕೆ ಓಡಿಬಂದಿದ್ದಾರೆ. ಅದೃಷ್ಟವಶಾತ್ ಯಾವುದೆ ಪ್ರಣಾಪಾಯ ಸಂಭವಿಸಿಲ್ಲ. ಲಕ್ಷಾಂತರ ರೂ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ಗೋಡೌನ್ ಅಗ್ನಿ ದುರಂತ: ಮೃತರ ಸಂಖ್ಯೆ 14ಕ್ಕೆ ಏರಿಕೆ
ಇನ್ನು ಬೆಂಕಿ ಅವಘಡ ಚಿತ್ರಕರಣಕ್ಕೆ ಟಿವಿ9 ವರದಿಗಾರರು ಹೋದಾಗ ಮನ್ಮುಲ್ ಅಧಿಕಾರಿಗಳು ಸ್ಥಳದಿಂದ ಹೊರಹೋಗುವಂತೆ ಅವಾಜ್ ಹಾಕಿದ್ದಾರೆ. ಅಲ್ಲದೆ ಕ್ಯಾಮರಾ, ಟ್ರೈಪಾಡ್ ಕಿತ್ತುಕೊಳ್ಳಲು ಯತ್ನಿಸಿ, ಚಿತ್ರೀಕರಣ ಮಾಡದಂತೆ ಒತ್ತಡ ಹಾಕಿದ್ದಾರೆ. ಅಲ್ಲದೆ ಸೆಕ್ಯುರಿಟಿ ಗಾರ್ಡ್ಗಳಿಂದ ನಮ್ಮ ವರದಿಗಾರರನ್ನು ಹೊರಗೆ ಹೋಗುವಂತೆ ಬೆದರಿಕೆ ಹಾಕಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:26 am, Sun, 8 October 23