ಮಂಡ್ಯ: ಟಿಪ್ಪರ್ ಡಿಕ್ಕಿಯಾಗಿ ಆಟೋದಲ್ಲಿದ್ದ ಐವರ ದುರ್ಮರಣ
ಟಿಪ್ಪರ್ ಡಿಕ್ಕಿಯಾಗಿ ಆಟೋದಲ್ಲಿದ್ದ ಐವರು ದುರ್ಮರಣವನ್ನಪ್ಪಿದ ದುರ್ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ನೆಲಮಾಕನಹಳ್ಳಿ ಗೇಟ್ ಬಳಿ ಸಂಭವಿಸಿದೆ.
ಮಂಡ್ಯ: ಟಿಪ್ಪರ್ ಡಿಕ್ಕಿಯಾಗಿ ಆಟೋದಲ್ಲಿದ್ದ ಐವರು ದುರ್ಮರಣವನ್ನಪ್ಪಿದ ದುರ್ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ನೆಲಮಾಕನಹಳ್ಳಿ ಗೇಟ್ ಬಳಿ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಐವರು ದುರ್ಮರಣವನ್ನಪ್ಪಿದ್ದಾರೆ. ಮದ್ದೂರು ಕಡೆಯಿಂದ ಹೋಗುತ್ತಿದ್ದ ಆಟೋ, ಮಳವಳ್ಳಿ ಕಡೆಯಿಂದ ಬರುತ್ತಿದ್ದ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮಳವಳ್ಳಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ನೆಲಮಾಕನಹಳ್ಳಿಯಲ್ಇ ದುರ್ಘಟನೆ ಸಂಭವಿಸಿದೆ. ಆಟೋದಲ್ಲಿದ್ದ ವೆಂಕಟೇಶ್ (25), ಮುತ್ತಮ್ಮ (45), 30 ವರ್ಷದ ಬಸಮ್ಮಣ್ಣಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡಿದ್ದ ಇಬ್ಬರು ಮಕ್ಕಳು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮಳವಳ್ಳಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ವಿವರ ಇನ್ನಷ್ಟೇ ತಿಳಿದುಬರಬೇಕಿದೆ.
ಇದನ್ನೂ ಓದಿ: ರಸ್ತೆ ಅಪಘಾತದಲ್ಲಿ ಸುಶಾಂತ್ ಕುಟುಂಬದ 6 ಮಂದಿ ನಿಧನ; ಇನ್ನೂ 4 ಜನರ ಸ್ಥಿತಿ ಗಂಭೀರ
ಇದನ್ನೂ ಓದಿ: ಆಂಧ್ರ ಪ್ರದೇಶದಲ್ಲಿ ಮಳೆ ಅನಾಹುತದಿಂದ ಮೂವರ ಸಾವು, ಕಡಪ ಜಿಲ್ಲೆಯಲ್ಲಿ 30 ಜನ ನಾಪತ್ತೆ
Published On - 7:21 pm, Fri, 19 November 21