ಮಂಡ್ಯ, ಮಾರ್ಚ್ 03: ಪ್ರಸಾದ ಸೇವಿಸಿದ್ದ ಒಂದೇ ಗ್ರಾಮದ 50ಕ್ಕೂ ಹೆಚ್ಚು ಜನರಿಗೆ ವಾಂತಿ ಮತ್ತು ಭೇದಿಯಿಂದ (food poisoning) ಬಳಲಿರುವಂತಹ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ನರಹಳ್ಳಿಯಲ್ಲಿ ನಡೆದಿದೆ. ನಿನ್ನೆ ಗ್ರಾಮದಲ್ಲಿ ಚನ್ನಬೀರೇಶ್ವರ ಹಬ್ಬ ಹಿನ್ನೆಲೆ ಪ್ರಸಾದ ವಿತರಿಸಲಾಗಿತ್ತು. ಇಂದು ಗ್ರಾಮದ 50ಕ್ಕೂ ಹೆಚ್ಚು ಜನರಿಗೆ ವಾಂತಿ, ಭೇದಿ ಉಂಟಾಗಿದೆ. ಅಸ್ವಸ್ಥಗೊಂಡವರನ್ನು ಪಾಂಡವಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಯಾವುದೇ ಪ್ರಾಣಾಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳು ಸೇರಿ ಒಟ್ಟು ಎರಡು ಲಕ್ಷ ಎಂಟು ಸಾವಿರ ಮಕ್ಕಳಿಗೆ ಪ್ರತಿನಿತ್ಯ ಮಧ್ಯಾಹ್ನದ ಬಿಸಿ ಊಟ ನೀಡಲಾಗುತ್ತದೆ. ಆದರೆ ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟವನ್ನು ಕಷ್ಟಪಟ್ಟು ತಿನ್ನುವಂತಾಗಿದೆ. ಇದಕ್ಕೆ ಕಾರಣ ಅನ್ನ, ಸಾರಿನಲ್ಲಿ ಹುಳು, ನುಸಿ ಪತ್ತೆಯಾಗಿದ್ದವು.
ಇದನ್ನೂ ಓದಿ: ಅಮರೇಶ್ವರ ಜಾತ್ರೆಯಲ್ಲಿ ಪಶು ಲೋಕ ಅನಾವಣರ: ದೇವಣಿ ಸೇರಿ ನಾನಾ ಜಾತಿಯ ಪಶುಗಳನ್ನ ನೋಡಲು ಮುಗಿಬಿದ್ದ ಜನ
ಜಿಲ್ಲೆಯ ಬಹುತೇಕ ಕಡೆ ಶಾಲೆಯಲ್ಲಿಯೇ ಆಹಾರವನ್ನು ತಯಾರು ಮಾಡಿ ನೀಡಲಾಗುತ್ತದೆ. ಆದರೂ ಜಿಲ್ಲೆಯ ಬಹುತೇಕ ಶಾಲೆಯಲ್ಲಿ ಅಡುಗೆಯಲ್ಲಿ ನುಸಿ, ಹುಳುಗಳು ಬರ್ತಿವೆ. ಇದಕ್ಕೆ ಕಾರಣ, ಶಾಲೆಗಳಿಗೆ ಪೂರೈಕೆಯಾಗುತ್ತಿರುವ ಕಳಪೆ ಆಹಾರ ಧಾನ್ಯಗಳು ಎನ್ನಲಾಗಿದೆ.
ಇದನ್ನೂ ಓದಿ: ಟಿವಿ9 ರಿಯಾಲಿಟಿ ಚೆಕ್: ಬೆಂಗಳೂರಿನ ಹಲವೆಡೆ ಇನ್ನೂ ನಿಂತಿಲ್ಲ ಇಡ್ಲಿ ತಯಾರಿಗೆ ಪ್ಲಾಸ್ಟಿಕ್ ಬಳಕೆ
ಆಹಾರ ಧಾನ್ಯಗಳನ್ನು ಪ್ರತಿ ತಿಂಗಳು ಆಯಾ ಶಾಲೆಗೆ ಬೇಕಾಗುವಷ್ಟು ಸರಬರಾಜು ಮಾಡಲಾಗುತ್ತಿದೆ. ಜಿಲ್ಲೆಯ ವಿವಿಧ ಗೂಡೌನ್ಗಳಿಂದ ಅಕ್ಕಿ ಪೂರೈಕೆಯಾದ್ರೆ, ತೊಗರಿಬೇಳೆ, ಎಣ್ಣೆ ಸೇರಿದಂತೆ ಬೇರೆ ಪದಾರ್ಥಗಳು ಟೆಂಡರ್ ಪಡೆಯುವ ಏಜನ್ಸಿಗಳು ಶಾಲೆಗೆ ಪೂರೈಗೆ ಮಾಡುತ್ತವೆ. ಹೀಗಾಗಿ ಕಳಪೆ ಆಹಾರ ತಿಂದು ಮಕ್ಕಳ ಆರೋಗ್ಯ ಹದಗೆಡುವ ಮೊದಲೇ ಇಲಾಖೆ ಎಚ್ಚೆತ್ತುಕೊಂಡು, ಗುಣಮಟ್ಟದ ಆಹಾರ ಧಾನ್ಯಗಳನ್ನು ಪೂರೈಕೆ ಮಾಡುವ ಕೆಲಸ ಮಾಡಬೇಕಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.