ಮಂಡ್ಯ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅತ್ತಿಗೆ ನಿಧನರಾಗಿದ್ದಾರೆ. ಇಂದು ಮುಂಜಾನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆಯಲ್ಲಿ ಅನಾರೋಗ್ಯದಿಂದ ಶಾರದಮ್ಮ (90) ಮೃತಪಟ್ಟಿದ್ದಾರೆ.
ಬೂಕನಕೆರೆಯಲ್ಲಿ ಇಂದು ಲಿಂಗಾಯಿತ ವಿಧಿ ವಿಧಾನಗಳ ರೀತಿಯಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಅಂತ್ಯಕ್ರಿಯೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾಗಿಯಾಗಲಿದ್ದಾರೆ.
ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ನಿನ್ನೆ ಕೋರ್ ಕಮಿಟಿ ಸಭೆ ನಡೆದಿದ್ದು, ಹಲವು ಹಿರಿಯ ನಾಯಕರು ಪಾಲ್ಗೊಂಡಿದ್ದಾರೆ. ಅಂತೆಯೇ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡ ಭಾಗಿಯಾಗಿದ್ದರು. ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪಚುನಾವಣೆ ಇದೇ 30ರಂದು ನಡೆಯಲಿದೆ. ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮತ್ತು ಕಾರ್ಯತಂತ್ರ ರೂಪಿಸುವ ವಿಚಾರದ ಚರ್ಚೆ ನಡೆಸಲು ಬಿಎಸ್‌ವೈ ಭಾಗಿಯಾಗಿದ್ದರು.
ಇಂದು ಹತ್ತಿರದ ಸಂಬಂಧಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಡ್ಯಕ್ಕೆ ಆಗಮಿಸಲಿದ್ದಾರೆ ಮತ್ತು ಅಂತಿ ವಿಧಿ ವಿಧಾನದಲ್ಲಿ ಭಾಗಿಯಾಗಲಿದ್ದಾರೆ.
ಇದನ್ನೂ ಓದಿ:
ಬಿಜೆಪಿ ಕೋರ್ ಕಮಿಟಿ ಸಭೆ ಆರಂಭ: ಅರುಣ್ ಸಿಂಗ್, ಯಡಿಯೂರಪ್ಪ ಸೇರಿ ಹಿರಿಯ ನಾಯಕರು ಭಾಗಿ