Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ನದಿ ನೀರು ವಿಚಾರದಲ್ಲಿ ಸರ್ಕಾರ ಆರಂಭದಲ್ಲೇ ಎಡವಿದೆ: ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಇಂದು ಮಂಡ್ಯ ಬಂದಗೆ ಕರೆ ನೀಡಲಾಗಿದ್ದು, ರೈತರು ರಸ್ತೆಗಿಳಿದು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್​ ಜಲಾಶಯಕ್ಕೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಬಳಿಕ ಮಾತನಾಡಿದ ಅವರು, ಕಾವೇರಿ ನದಿ ನೀರು ವಿಚಾರದಲ್ಲಿ ಸರ್ಕಾರ ಆರಂಭದಲ್ಲೇ ಎಡವಿದೆ ಎಂದು ಕಿಡಿಕಾರಿದ್ದಾರೆ.

ಕಾವೇರಿ ನದಿ ನೀರು ವಿಚಾರದಲ್ಲಿ ಸರ್ಕಾರ ಆರಂಭದಲ್ಲೇ ಎಡವಿದೆ: ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ
ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ
Follow us
ಪ್ರಶಾಂತ್​ ಬಿ.
| Updated By: ಗಂಗಾಧರ​ ಬ. ಸಾಬೋಜಿ

Updated on: Sep 23, 2023 | 3:01 PM

ಮಂಡ್ಯ, ಸೆಪ್ಟೆಂಬರ್​​ 23: ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿ. ಸುಪ್ರೀಂಕೋರ್ಟ್ ಆದೇಶ ಕೊಟ್ಟ ನಂತರ ನೀರು ಬಿಡಿ ಅಂತಾ ಹೇಳಿದ್ದೆ. ಕಾವೇರಿ ನದಿ ನೀರು ವಿಚಾರದಲ್ಲಿ ಸರ್ಕಾರ ಆರಂಭದಲ್ಲೇ ಎಡವಿದೆ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ. ಜಿಲ್ಲೆಯ ಶ್ರೀರಂಗಪಟ್ಟಣದ ಕೆಆರ್​ಎಸ್​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್​ CWMA ಸಭೆ ನಡೆಸಿ ನೀರು ಬಿಡಲು ಆದೇಶಿಸಿತ್ತು. ಆಗ ತಮಿಳುನಾಡು ಪ್ರತಿಭಟನೆ ಮಾಡಿ ಸಭೆಯಿಂದ ಹೊರ ಹೋದರು. ನಮ್ಮ ಸರ್ಕಾರ ರೈತರ ವಿಚಾರವನ್ನು ಲಘುವಾಗಿ ಪರಿಗಣಿಸಿದ್ದಾರೆ. ತಮಿಳುನಾಡು ಅರ್ಜಿ ಹಾಕಿದಾಗಲೇ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದೆ ಎಂದು ಹೇಳಿದ್ದಾರೆ.

ಆದೇಶ ಪಾಲಿಸಲು ಆಗದೆ ಇದ್ದಾಗ ಅದು ನ್ಯಾಯಾಂಗ ನಿಂದನೆ ಆಗಲ್ಲ

ಆದೇಶ ಪಾಲಿಸಲು ಆಗದೆ ಇದ್ದಾಗ ಅದು ನ್ಯಾಯಾಂಗ ನಿಂದನೆ ಆಗಲ್ಲ. ಹೀಗಂತ ಸೆ.16ರಂದು ಸುಪ್ರೀಂಕೋರ್ಟ್ ಆದೇಶದಲ್ಲಿ ಉಲ್ಲೇಖಿಸಿದೆ. ನಮ್ಮ ಸರ್ಕಾರ CWRC, CWMAಗೆ ಸೂಕ್ತ ಮಾಹಿತಿ ನೀಡಿಲ್ಲ. ಎಸಿ ವರ್ಚುವಲ್​​ನಲ್ಲಿ ಕುಳಿತು ಸಭೆಯಲ್ಲಿ ಭಾಗಿಯಾಗುತ್ತಾರೆ. ತಮಿಳುನಾಡು ಅಧಿಕಾರಿಗಳು ನೇರವಾಗಿ ಸಭೆಯಲ್ಲಿ ಭಾಗಿಯಾಗಿದ್ದಾರೆ. ಸರ್ಕಾರ ಸೂಕ್ತ ದಾಖಲೆ, ಮಾಹಿತಿ ನೀಡುವಲ್ಲಿ ವಿಫಲವಾಗಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ದೀರ್ಘಾವಧಿ ಮೈತ್ರಿ ಕಾಯ್ದುಕೊಳ್ಳುವ ನಿಟ್ಟಿನೆಡೆ ಬಿಜೆಪಿ ನಾಯಕರ ಜೊತೆ ನಡೆದ ಮಾತುಕತೆ ಕೇಂದ್ರೀಕೃತವಾಗಿತ್ತು: ಹೆಚ್ ಡಿ ಕುಮಾರಸ್ವಾಮಿ

ನೀರು ಬಿಟ್ಟರೇ ನೋಡಿ ನಮ್ಮ ನಡೆ ಏನಿರುತ್ತದೆ. ನೀರು ಇದ್ದಾಗ ಡಬಲ್ ಬಿಟ್ಟಿದ್ದೇವೆ. ತಮಿಳುನಾಡಿನವರು ಎರಡು ಬೆಳೆ ಬೆಳೆಯುತ್ತಾರೆ. ಕಾವೇರಿ ಪರಿಸ್ಥಿತಿ ಬಗ್ಗೆ ಅಮಿತ್ ಶಾ ಬಳಿ ಚರ್ಚೆ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಾವೇರಿ ವಿವಾದ: ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧಾರ – ಬೊಮ್ಮಾಯಿ

ಕಾವೇರಿ ಪ್ರಾಧಿಕಾರ ಕೋರ್ಟ್ ನಿಂದನೆ ಆಗುತ್ತದೆ ಎಂದು ಎಷ್ಟು ದಿನ ಸರ್ಕಾರ ನಡೆಸುತ್ತೀರಿ. ನಿಜಕ್ಕೂ ಕರವೇ, ರೈತ ಸಂಘಗಳು ಉತ್ತರ ಕರ್ನಾಟಕ ಭಾಗದಲ್ಲಿ ಹೋರಾಟ ಮಾಡುತ್ತಿದ್ದಾರೆ. ಮೂರು‌ ಜನ ನಿವೃತ್ತ ಸುಪ್ರಿಂ ಕೋರ್ಟ್​ನ ಮುಖ್ಯ ನ್ಯಾಯಧೀಶರು ಇದ್ದಾರೆ. ಆರು ಜನ ಆಡ್ವಕೇಟ್ ಜನರಲ್ ಇದ್ದಾರೆ. ಅವರ ಜೊತೆ ಮೀಟಿಂಗ್ ಮಾಡಿ ಚರ್ಚೆ ಮಾಡಿ. ಯಾವುದೇ ಕಾರಣಕ್ಕೂ ನೀರು ಬಿಡಬಾರದು. ನೀರು ಬಿಟ್ಟರೇ ಯಾವುದೇ ನ್ಯಾಯಂಗ ನಿಂದನೆಯಲ್ಲ ಎಂದು ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ವಸೂಲಿ ಮಾಡಲು ಹೊರಟಿದ್ದೀರಿ ಅದನ್ನ ಮುಂದಕ್ಕೆ ಹಾಕಿ. ಸ್ಕಾಯರ್ ಫೀಟ್​ಗೆ ವಸೂಲಿ ಮಾಡಲು ಹೊರಟಿದ್ದಾರೆ. ಸ್ಟಾಲೀನ್ ಅವರೇ ನಿಮ್ಮ ಮಂತ್ರಿಗಳನ್ನ ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಿ. ಸೋನಿಯಾ ಗಾಂಧಿ ಅವರನ್ನ ಮೆಚ್ಚಿಸಲು ಅಲ್ಲ ನೀವು ಇರುವುದು. ನೀವು ತೆಗೆದುಕೊಳ್ಳುವ ನಿರ್ಧಾರದಲ್ಲಿ ನಿಮ್ಮ ಜೊತೆ ಇರುತ್ತೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ