ಮಂಡ್ಯ, ಸೆಪ್ಟೆಂಬರ್ 23: ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿ. ಸುಪ್ರೀಂಕೋರ್ಟ್ ಆದೇಶ ಕೊಟ್ಟ ನಂತರ ನೀರು ಬಿಡಿ ಅಂತಾ ಹೇಳಿದ್ದೆ. ಕಾವೇರಿ ನದಿ ನೀರು ವಿಚಾರದಲ್ಲಿ ಸರ್ಕಾರ ಆರಂಭದಲ್ಲೇ ಎಡವಿದೆ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ. ಜಿಲ್ಲೆಯ ಶ್ರೀರಂಗಪಟ್ಟಣದ ಕೆಆರ್ಎಸ್ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್ CWMA ಸಭೆ ನಡೆಸಿ ನೀರು ಬಿಡಲು ಆದೇಶಿಸಿತ್ತು. ಆಗ ತಮಿಳುನಾಡು ಪ್ರತಿಭಟನೆ ಮಾಡಿ ಸಭೆಯಿಂದ ಹೊರ ಹೋದರು. ನಮ್ಮ ಸರ್ಕಾರ ರೈತರ ವಿಚಾರವನ್ನು ಲಘುವಾಗಿ ಪರಿಗಣಿಸಿದ್ದಾರೆ. ತಮಿಳುನಾಡು ಅರ್ಜಿ ಹಾಕಿದಾಗಲೇ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದೆ ಎಂದು ಹೇಳಿದ್ದಾರೆ.
ಆದೇಶ ಪಾಲಿಸಲು ಆಗದೆ ಇದ್ದಾಗ ಅದು ನ್ಯಾಯಾಂಗ ನಿಂದನೆ ಆಗಲ್ಲ. ಹೀಗಂತ ಸೆ.16ರಂದು ಸುಪ್ರೀಂಕೋರ್ಟ್ ಆದೇಶದಲ್ಲಿ ಉಲ್ಲೇಖಿಸಿದೆ. ನಮ್ಮ ಸರ್ಕಾರ CWRC, CWMAಗೆ ಸೂಕ್ತ ಮಾಹಿತಿ ನೀಡಿಲ್ಲ. ಎಸಿ ವರ್ಚುವಲ್ನಲ್ಲಿ ಕುಳಿತು ಸಭೆಯಲ್ಲಿ ಭಾಗಿಯಾಗುತ್ತಾರೆ. ತಮಿಳುನಾಡು ಅಧಿಕಾರಿಗಳು ನೇರವಾಗಿ ಸಭೆಯಲ್ಲಿ ಭಾಗಿಯಾಗಿದ್ದಾರೆ. ಸರ್ಕಾರ ಸೂಕ್ತ ದಾಖಲೆ, ಮಾಹಿತಿ ನೀಡುವಲ್ಲಿ ವಿಫಲವಾಗಿದೆ ಎಂದು ವಾಗ್ದಾಳಿ ಮಾಡಿದ್ದಾರೆ.
ನೀರು ಬಿಟ್ಟರೇ ನೋಡಿ ನಮ್ಮ ನಡೆ ಏನಿರುತ್ತದೆ. ನೀರು ಇದ್ದಾಗ ಡಬಲ್ ಬಿಟ್ಟಿದ್ದೇವೆ. ತಮಿಳುನಾಡಿನವರು ಎರಡು ಬೆಳೆ ಬೆಳೆಯುತ್ತಾರೆ. ಕಾವೇರಿ ಪರಿಸ್ಥಿತಿ ಬಗ್ಗೆ ಅಮಿತ್ ಶಾ ಬಳಿ ಚರ್ಚೆ ಮಾಡಿದ್ದೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಕಾವೇರಿ ವಿವಾದ: ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧಾರ – ಬೊಮ್ಮಾಯಿ
ಕಾವೇರಿ ಪ್ರಾಧಿಕಾರ ಕೋರ್ಟ್ ನಿಂದನೆ ಆಗುತ್ತದೆ ಎಂದು ಎಷ್ಟು ದಿನ ಸರ್ಕಾರ ನಡೆಸುತ್ತೀರಿ. ನಿಜಕ್ಕೂ ಕರವೇ, ರೈತ ಸಂಘಗಳು ಉತ್ತರ ಕರ್ನಾಟಕ ಭಾಗದಲ್ಲಿ ಹೋರಾಟ ಮಾಡುತ್ತಿದ್ದಾರೆ. ಮೂರು ಜನ ನಿವೃತ್ತ ಸುಪ್ರಿಂ ಕೋರ್ಟ್ನ ಮುಖ್ಯ ನ್ಯಾಯಧೀಶರು ಇದ್ದಾರೆ. ಆರು ಜನ ಆಡ್ವಕೇಟ್ ಜನರಲ್ ಇದ್ದಾರೆ. ಅವರ ಜೊತೆ ಮೀಟಿಂಗ್ ಮಾಡಿ ಚರ್ಚೆ ಮಾಡಿ. ಯಾವುದೇ ಕಾರಣಕ್ಕೂ ನೀರು ಬಿಡಬಾರದು. ನೀರು ಬಿಟ್ಟರೇ ಯಾವುದೇ ನ್ಯಾಯಂಗ ನಿಂದನೆಯಲ್ಲ ಎಂದು ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ವಸೂಲಿ ಮಾಡಲು ಹೊರಟಿದ್ದೀರಿ ಅದನ್ನ ಮುಂದಕ್ಕೆ ಹಾಕಿ. ಸ್ಕಾಯರ್ ಫೀಟ್ಗೆ ವಸೂಲಿ ಮಾಡಲು ಹೊರಟಿದ್ದಾರೆ. ಸ್ಟಾಲೀನ್ ಅವರೇ ನಿಮ್ಮ ಮಂತ್ರಿಗಳನ್ನ ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಿ. ಸೋನಿಯಾ ಗಾಂಧಿ ಅವರನ್ನ ಮೆಚ್ಚಿಸಲು ಅಲ್ಲ ನೀವು ಇರುವುದು. ನೀವು ತೆಗೆದುಕೊಳ್ಳುವ ನಿರ್ಧಾರದಲ್ಲಿ ನಿಮ್ಮ ಜೊತೆ ಇರುತ್ತೇವೆ ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.