ರಾಜ್ಯದಲ್ಲಿ ದಲಿತರು ಸಿಎಂ ಆಗೋದನ್ನು ತಪ್ಪಿಸಿದ್ದು ನಾನಲ್ಲ: ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ

ದಲಿತರು ಸಿಎಂ ಆಗುವುದನ್ನು ತಪ್ಪಿಸಿದವರೇ ಈಗ ಮತ್ತೆ ಸಿಎಂ ಆಗಬೇಕು ಎಂದು ಹೇಳಿಕೊಳ್ಳುತ್ತಿದ್ದಾರೆ. 130 ಸೀಟಿನಲ್ಲಿ ಮುಖ್ಯಮಂತ್ರಿಯಾಗಿ 78ಕ್ಕೆ ಬಂದರಲ್ಲ, ಅವರು ದಲಿತ ಸಿಎಂ ಆಗೋದನ್ನು ತಪ್ಪಿಸಿದ್ದು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ಬಾಣ ಬಿಟ್ಟಿದ್ದಾರೆ.

ರಾಜ್ಯದಲ್ಲಿ ದಲಿತರು ಸಿಎಂ ಆಗೋದನ್ನು ತಪ್ಪಿಸಿದ್ದು ನಾನಲ್ಲ: ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ
ಎಚ್​.ಡಿ.ಕುಮಾರಸ್ವಾಮಿ
Follow us
TV9 Web
| Updated By: guruganesh bhat

Updated on:Jun 29, 2021 | 6:58 PM

ಮಂಡ್ಯ: ರಾಜ್ಯದಲ್ಲಿ ದಲಿತರು ಮುಖ್ಯಮಂತ್ರಿ ಆಗುವುದನ್ನು ನಾನು ತಪ್ಪಿಸಿರಲಿಲ್ಲ. ಸ್ವಾತಂತ್ರ್ಯ ಬಂದ ಬಳಿಕ 60 ವರ್ಷ ದಲಿತರನ್ನು ಸಿಎಂ ಮಾಡಬೇಕು ಎಂದು ಈವರೆಗೆ ಕಾಂಗ್ರೆಸ್​ನವರಿಗೆ ಗೊತ್ತಿರಲಿಲ್ವ? ದಲಿತರು ಸಿಎಂ ಆಗುವುದನ್ನು ತಪ್ಪಿಸಿದವರೇ ಈಗ ಮತ್ತೆ ಸಿಎಂ ಆಗಬೇಕು ಎಂದು ಹೇಳಿಕೊಳ್ಳುತ್ತಿದ್ದಾರೆ. 130 ಸೀಟಿನಲ್ಲಿ ಮುಖ್ಯಮಂತ್ರಿಯಾಗಿ 78ಕ್ಕೆ ಬಂದರಲ್ಲ, ಅವರು ದಲಿತ ಸಿಎಂ ಆಗೋದನ್ನು ತಪ್ಪಿಸಿದ್ದು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ಬಾಣ ಬಿಟ್ಟಿದ್ದಾರೆ.

ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ಎಚ್.ಡಿ.ಕುಮಾರಸ್ವಾಮಿ, ಸದ್ಯ ವಿಪಕ್ಷ ನಾಯಕರೂ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ಎಲ್ಲೂ ಉಲ್ಲೇಖಿಸದೇ ಬಾಣ ಹೂಡಿದ್ದಾರೆ. ದಲಿತರನ್ನ ಸಿಎಂ ಮಾಡಬೇಕೆಂದು ಕಾಂಗ್ರೆಸ್‌ಗೆ ಗೊತ್ತಿರಲಿಲ್ವಾ? 60 ವರ್ಷಗಳ ಕಾಲ ರಾಜ್ಯ ಆಳುವ ವೇಳೆ ಗೊತ್ತಾಗಿರಲಿಲ್ವಾ? ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.

ಈ ಜೀವ ಇರುವವರೆಗೂ ಮಂಡ್ಯಕ್ಕೆ ಬರ್ತೀನಿ.. ಮನ್ಮುಲ್​ನ ಹಾಲಿಗೆ ನೀರು ಬೆರೆಸಿದ​ ಹಗರಣ ಮುಚ್ಚಿಹಾಕಲು ಸಿಎಂ ಯಡಿಯೂರಪ್ಪ ಅವರ ಜತೆ ಚರ್ಚೆ ಮಾತನಾಡಿದ್ದಾರೆನ್ನುವ ವಿಚಾರವಾಗಿಯೂ ಪ್ರತಿಕ್ರಿಯೆ ನೀಡಿದ ಅವರು, ನಾನು ಮತ್ತು ದೇವೇಗೌಡರು ಸಿಎಂ ಜತೆ ಚರ್ಚಿಸಿದ್ದೇವೆ. ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಎಚ್.ಡಿ.ಕುಮಾರಸ್ವಾಮಿ ಮಾತನಾಡಿದ ನೀವು ತನಿಖೆ ಯಾವುದಾದ್ರು ಮಾಡಿಕೊಳ್ಳಿ ಆದ್ರೆ ಆಡಳಿತ ಮಂಡಳಿ ಸೂಪರ್ ಸೀಡ್ ಮಾಡೋದು ಬೇಡ ಎಂದು ಮಾತನಾಡಿದ್ದೇವೆ. ನನ್ನನ್ನು ಬಡ್ಡಿ ಮಗ ಎಂದು ಕರೆದಿದ್ದಾರಲ್ಲ. ಆತ ನಾನು ಮತ್ತು ದೇವೇಗೌಡರು ಕೊಟ್ಟಿರುವ ಅಸಲನ್ನೇ ಹಿಂತಿರುಗಿಸಿಲ್ಲ. ಇವರಿಗೆ ಮಾನ ಮರ್ಯಾದೆ ಇದ್ರೆ ಹಗರಣದ ಬಗೆಗೆ ತನಿಖೆ ನಡೆಸೋ ಬಗೆಗೆ ಮಾತನಾಡಲಿ. ಇವರ ಅಪ್ಪಣೆ ತಗೊಂಡು ನಾನು ಮಂಡ್ಯಗೆ ಬರಬೇಕಿಲ್ಲ. ನನ್ನ ಜನ ಬಡವರಿದ್ದಾರೆ. ನನಗೆ ಗೌರವ ಕೊಟ್ಟಿರುವ ಲಕ್ಷಾಂತರ ಜನ ಇಲ್ಲಿದ್ದಾರೆ. ಈ ಜೀವ ಇರುವವರೆಗೂ ಮಂಡ್ಯ ಜಿಲ್ಲೆಗೆ ಬರ್ತಿನಿ‌.ಮಾತನಾಡುವಾಗ ಎಚ್ಚರಿಕೆ ವಹಿಸಿ ಮಾತನಾಡಲಿ ಎಂದು ಹರಿಹಾಯ್ದಿದ್ದಾರೆ.

ಇದನ್ನೂ ಓದಿ: 

ಮಂಡ್ಯದಲ್ಲಿ ಹಾಲಿಗೆ ನೀರು ಬೆರೆಸಿ ವಂಚನೆ 100 ಕೋಟಿಯ ದೊಡ್ಡ ಹಗರಣ: ಮಾಜಿ ಸಚಿವ ಚಲುವರಾಯಸ್ವಾಮಿ

ಮಂಡ್ಯದಲ್ಲಿನ ಹಾಲಿಗೆ ನೀರು ಬೆರೆಸಿ ವಂಚನೆ ಪ್ರಕರಣ ಸಿಐಡಿ ತನಿಖೆಗೆ : ಸಿಎಂ ಯಡಿಯೂರಪ್ಪ ಘೋಷಣೆ

(Former CM HD Kumaraswamy says I am not the only one who has avoided the CM of Dalits in the state)

Published On - 6:06 pm, Tue, 29 June 21