ಶಿವರಾಮೇಗೌಡ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್: ಅವಾಚ್ಯ ಶಬ್ದಗಳಿಂದ ನಿಂದನೆ
ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸಂಸದ ಶಿವರಾಮೇಗೌಡ ವಿರುದ್ಧ 420 ಶಿವರಾಮೇಗೌಡ ಎಂದು ಪೋಸ್ಟ್ ಮಾಡಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದವರ ವಿರುದ್ಧ ಎಲ್.ಆರ್ ಶಿವರಾಮೇಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆಡಿಯೋ ವೈರಲ್ ಆಗಿದೆ.
ಮಂಡ್ಯ: ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ಪಕ್ಷಾಂತರ ಜೋರಾಗಿಯೇ ನಡೆಯುತ್ತಿದೆ. ಮೂರು ಪಕ್ಷದಲ್ಲಿನ ನಾಯಕರು ತಮ್ಮ ಪಕ್ಷವನ್ನು ತೊರೆದು ಬೇರೆ ಬೇರೆ ಪಕ್ಷಗಳತ್ತ ಮುಖ ಮಾಡುತ್ತಿದ್ದಾರೆ. ಇತ್ತೀಚಿಗೆ ಪ್ಷೇತರ ಅಭ್ಯರ್ಥಿ ಸಂಸದೆ ಸುಮಲತಾ (Sumlatha Ambareesh) ಬಿಜೆಪಿಗೆ ಬೆಂಬಲ ಘೋಷಣೆ ಬೆನ್ನಲ್ಲೇ ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡ(LR Shivarame Gowda) ಅವರು ನಿನ್ನೆ (ಮಾ.20) ಬಿಜೆಪಿ ಪಕ್ಷಕ್ಕೆ (BJP Karnataka) ಬೆಂಬಲ ಘೋಷಿಸಿದ್ದರು. ಈ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ನಾಗಮಂಗಲ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶಿವರಾಮೇಗೌಡ ವಿರುದ್ಧ 420 ಶಿವರಾಮೇಗೌಡ ಎಂದು ಪೋಸ್ಟ್ ಮಾಡಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದವರ ವಿರುದ್ಧ ಎಲ್.ಆರ್ ಶಿವರಾಮೇಗೌಡ ಆಕ್ರೋಶ ವ್ಯಕ್ತಪಡಿಸಿದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆಡಿಯೋ ವೈರಲ್ ಆಗಿದೆ.
ಇದನ್ನೂ ಓದಿ: ಬಿಜೆಪಿ ಪಕ್ಷಕ್ಕೆ ಬೆಂಬಲ ಘೋಷಿಸಿದ ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡ, ಶೀಘ್ರದಲ್ಲೇ ಬಿಜೆಪಿ ಸೇರ್ಪಡೆ
ನಾಗಮಂಗಲ ಕ್ಷೇತ್ರದ ಮೋಹನ್ ಎಂಬವರು 420 ಶಿವರಾಮೇಗೌಡ ಎಂದು ಪೋಸ್ಟ್ ಮಾಡಿದ್ದು, ಇವರಿಗೆ ಕರೆ ಮಾಡಿ ಶಿವರಾಮೇಗೌಡ ಕೆಟ್ಟದಾಗಿ ಪೋಸ್ಟ್ ಯಾಕೆ ಮಾಡಿದ್ದೀಯಾ ಎಂದು ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ. ಆಗ ವ್ಯಕ್ತಿ ನಾನು ಪೋಸ್ಟ್ ಮಾಡಿಲ್ಲ, ಬೇರೆ ಯಾರೋ ಮಾಡಿರಬೇಕು ಎಂದಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಶಿವರಾಮೇಗೌಡ ನಿನ್ನ ವಿರುದ್ಧ ದೂರು ನೀಡುವುದಾಗಿ ಕೂಡ ಹೇಳಿದ್ದಾರೆ.
ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿದ ಎಲ್ಆರ್ ಶಿವರಾಮೇಗೌಡ
ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡ ಅವರು ನಿನ್ನೆ (ಮಾ.20) ಬಿಜೆಪಿಗೆ ಬೆಂಬಲ ಘೋಷಿಸಿದ್ದರು. ಬೆಂಗಳೂರಿನ ನಾಗಮಂಗಲ ನಿವಾಸಿಗಳ ಸಮಾವೇಶದಲ್ಲಿ ಸಚಿವ ಮುನಿರತ್ನ ಸಮ್ಮುಖದಲ್ಲಿ ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದ್ದರು. ಶೀಘ್ರದಲ್ಲೇ ಅಧಿಕೃತವಾಗಿ ಶಿವರಾಮೇಗೌಡ ಬಿಜೆಪಿ ಸೇರ್ಪಡೆ ಆಗಲಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ