ಮಂಡ್ಯದಲ್ಲಿ ಮತ್ತೊಂದು ಭೀಕರ ಅಪಘಾತ, ಕಾರಿನಲ್ಲಿದ್ದ ನಾಲ್ವರು ದುರ್ಮರಣ

Mandya News: ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆ ಎದುರು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

ಮಂಡ್ಯದಲ್ಲಿ ಮತ್ತೊಂದು ಭೀಕರ ಅಪಘಾತ, ಕಾರಿನಲ್ಲಿದ್ದ ನಾಲ್ವರು ದುರ್ಮರಣ
ಬಸ್​ಗೆ ಕಾರು ಡಿಕ್ಕಿ
Follow us
ಪ್ರಶಾಂತ್​ ಬಿ.
| Updated By: ರಮೇಶ್ ಬಿ. ಜವಳಗೇರಾ

Updated on:Sep 27, 2023 | 9:55 AM

ಮಂಡ್ಯ, (ಸೆಪ್ಟೆಂಬರ್ 27): ಮಂಡ್ಯ (Mandya)ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ಭೀಕರ ಅಪಘಾತ (Road Accident) ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ರಸ್ತೆ ಬದಿ ನಿಂತಿದ್ದ ಕೆಎಸ್​ಆರ್​ಟಿಸಿ ಬಸ್​​​ಗೆ (KSRTC Bus) ಹಾಸನ ಕಡೆಯಿಂದ ಬಂದ ಮಾರುತಿ ಸ್ವಿಫ್ಟ್ ಕಾರು (Car ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಕಾರಿನಲ್ಲಿದ್ದ ಓರ್ವ ಮಹಿಳೆ, ಮೂವರು ಪುರುಷರು ಸೇರಿ ನಾಲ್ವರ ಸಾವನ್ನಪ್ಪಿದ್ದಾರೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಬೆಳ್ಳೂರು ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆ ಎದುರು ಮುಂಭಾಗ ರಸ್ತೆ ಬದಿ ನಿಂತಿದ್ದ KSRTC ಬಸ್​ ಹಿಂಬದಿಗೆ KA-02 MM 1802 ನಂಬರಿನ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂದಿನ ಅರ್ಧ ಭಾಗ ಬಸ್​ನೊಳಗೆ ಹೊಕ್ಕಿದೆ. ಸ್ಥಳಕ್ಕೆ ಬೆಳ್ಳೂರು ಪೊಲೀಸರ ಭೇಟಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಅಪಘಾತದಲ್ಲಿ ಮೃತಪಟ್ಟವರು ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ತುಮಕೂರು ಬಳಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು, ಕಾರು ನಜ್ಜುಗುಜ್ಜು

ಬೈಕ್​ಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸವಾರರ ದುರ್ಮರಣ

ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಮಂಗಳವಾಡ ಗ್ರಾಮದಲ್ಲಿ ಬೈಕ್​ಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೋಟಬಂಡೆ ಗ್ರಾಮದ ಈಶ್ವರಪ್ಪ(36), ನಾಗರಾಜು(42) ಮೃತ ದುರ್ದೈವಿಗಳು. ಘಟನೆಯಲ್ಲಿ ಚಿಕ್ಕತಿಮ್ಮನಹಟ್ಟಿ‌ ಗ್ರಾಮದ ದರ್ಶನ್(28) ಎಂಬಾತನಿಗೆ ಗಾಯಗಳಾಗಿವೆ. ಗೌರಸಂದ್ರ ಮಾರಮ್ಮ ಜಾತ್ರೆ ಮುಗಿಸಿ ಹಿಂದಿರುಗುವಾಗ ಅಪಘಾತ ಸಂಭವಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:42 am, Wed, 27 September 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್