AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ದೂರಿನ ಜಾಮಿಯಾ ಮಸೀದಿ ಬಳಿ ಗಣೇಶ ವಿಸರ್ಜನೆ ಮೆರವಣಿಗೆ: ಪಟಾಕಿ ಸಿಡಿಸಿ, ಕುಣಿದ ಕಾರ್ಯಕರ್ತರು!

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಬಿಗಿ ಪೊಲೀಸ್ ಭದ್ರತೆಯ ನಡುವೆ ಜಾಮಿಯಾ ಮಸೀದಿ ಮುಂಭಾಗ ಗಣೇಶ ವಿಸರ್ಜನೆ ಮೆರವಣಿಗೆ ಶಾಂತಿಯುತವಾಗಿ ಸಾಗಿದೆ. ಸಣ್ಣಪುಟ್ಟ ಗೊಂದಲಗಳ ನಡುವೆಯೂ ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿ ಹತೋಟಿಗೆ ಬಂದಿದ್ದು, ಯುವಕರು ಪಟಾಕಿ ಸಿಡಿಸಿ ವಂದೇ ಮಾತರಂ ಹಾಡಿಗೆ ಹೆಜ್ಜೆ ಹಾಕಿದರು.

ಮದ್ದೂರಿನ ಜಾಮಿಯಾ ಮಸೀದಿ ಬಳಿ ಗಣೇಶ ವಿಸರ್ಜನೆ ಮೆರವಣಿಗೆ: ಪಟಾಕಿ ಸಿಡಿಸಿ, ಕುಣಿದ ಕಾರ್ಯಕರ್ತರು!
ಮದ್ದೂರಿನ ಜಾಮಿಯಾ ಮಸೀದಿ ಬಳಿ ಗಣೇಶ ವಿಸರ್ಜನೆ ಮೆರವಣಿಗೆ
ಪ್ರಶಾಂತ್​ ಬಿ.
| Edited By: |

Updated on:Sep 16, 2026 | 4:06 PM

Share

ಮುಖ್ಯಾಂಶಗಳು

  • ಮದ್ದೂರಿನ ಜಾಮಿಯಾ ಮಸೀದಿ ಬಳಿ ಶಾಂತಿಯುತವಾಗಿ ಸಾಗಿದ ಗಣೇಶ ಮೆರವಣಿಗೆ.
  • ಪೊಲೀಸರ ಮನವೊಲಿಕೆ ನಡುವೆಯೂ ಮಸೀದಿ ಎದುರು ಪಟಾಕಿ ಸಿಡಿಸಿದ ಯುವಕರು.
  • ಕಳೆದ ವರ್ಷದ ಕಲ್ಲುತೂರಾಟ ಹಿನ್ನೆಲೆ ಮಸೀದಿ ಬಳಿ ಬಿಗಿ ಬಂದೋಬಸ್ತ್.

ಮಂಡ್ಯ, ಸೆಪ್ಟೆಂಬರ್ 16: ಜಿಲ್ಲೆಯ ಮದ್ದೂರಿನಲ್ಲಿ ಬುಧವಾರ ನಡೆದ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯ ವೇಳೆ ಜಾಮಿಯಾ ಮಸೀದಿ ಬಳಿ ಬಿಗುವಿನ ವಾತಾವರಣ ನಿರ್ಮಾಣವಾಗಿ, ಕೆಲಕಾಲ ಪೊಲೀಸರು ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರ ನಡುವೆ ವಾಗ್ವಾದ ಮತ್ತು ಹೈಡ್ರಾಮಾ ನಡೆಯಿತು. ಆದಾಗ್ಯೂ, ಪೊಲೀಸರ ವಿರೋಧದ ನಡುವೆಯೂ ಯುವಕರು ಮಸೀದಿ ಮುಂಭಾಗದಲ್ಲೇ ಪಟಾಕಿ ಸಿಡಿಸಿ, ವಂದೇ ಮಾತರಂ ಹಾಡಿಗೆ ಕುಣಿದು ಕುಪ್ಪಳಿಸಿ ಮುಂದೆ ಸಾಗಿದರು.

ಕಾರ್ಯಕರ್ತರ ಮನವೊಲಿಸುವಲ್ಲಿ ಯಶಸ್ವಿಯಾದ ಎಸ್ಪಿ ಶೋಭಾರಾಣಿ

ಮೆರವಣಿಗೆಯು ಮಸೀದಿ ಮುಂಭಾಗಕ್ಕೆ ಆಗಮಿಸುತ್ತಿದ್ದಂತೆ, ಯುವಕರು ಪಟಾಕಿ ಸಿಡಿಸಲು ಮುಂದಾದರು. ಭದ್ರತಾ ದೃಷ್ಟಿಯಿಂದ ಪೊಲೀಸರು ಪಟಾಕಿಗಳನ್ನು ವಶಕ್ಕೆ ಪಡೆಯಲು ಪ್ರಯತ್ನಿಸಿದಾಗ ಆಕ್ರೋಶಗೊಂಡ ಕಾರ್ಯಕರ್ತರು, ರಸ್ತೆಯಲ್ಲೇ ಕುಳಿತು ‘ವಂದೇ ಮಾತರಂ’ ಹಾಗೂ ಜೈಕಾರಗಳ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಸ್ಥಳದಲ್ಲಿದ್ದ ಮಂಡ್ಯ ಎಸ್ಪಿ ಶೋಭಾರಾಣಿ ಅವರು ತಕ್ಷಣವೇ ಮಧ್ಯಪ್ರವೇಶಿಸಿ, ರಸ್ತೆಯಲ್ಲಿ ಕುಳಿತಿದ್ದ ಕಾರ್ಯಕರ್ತರ ಮನವೊಲಿಸುವಲ್ಲಿ ಯಶಸ್ವಿಯಾದರು.

ಶಾಂತಿಯುತವಾಗಿ ಕೊನೆಗೊಂಡ ಮೆರವಣಿಗೆ

ಸಣ್ಣಪುಟ್ಟ ಗೊಂದಲ ಹಾಗೂ ಜಟಾಪಟಿಗಳನ್ನು ಹೊರತುಪಡಿಸಿ, ಜಾಮಿಯಾ ಮಸೀದಿ ಮುಂಭಾಗ ಗಣೇಶನ ಮೆರವಣಿಗೆಯನ್ನು ಪೊಲೀಸರು ಸಂಪೂರ್ಣ ಶಾಂತಿಯುತವಾಗಿ ನಡೆಸಿಕೊಟ್ಟರು. ಮಸೀದಿ ಬಳಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಭದ್ರತೆ ವಹಿಸಲಾಗಿತ್ತು. ಎಲ್ಲಾ ಗಣೇಶನ ಮೂರ್ತಿಗಳನ್ನು ಸುರಕ್ಷಿತವಾಗಿ ಕಳುಹಿಸಿಕೊಟ್ಟ ಬಳಿಕ, ಸ್ಥಳದಲ್ಲಿದ್ದ ಜನರನ್ನು ಪೊಲೀಸರು ತೆರವುಗೊಳಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

LIVE TV

ಕಳೆದ ವರ್ಷ ಏನಾಗಿತ್ತು?

ಕಳೆದ ವರ್ಷ ಮದ್ದೂರಿನ ಜಾಮಿಯಾ ಮಸೀದಿ ಮುಂಭಾಗ ಗಣೇಶ ವಿಸರ್ಜನೆ ಮೆರವಣಿಗೆ ಹಾದುಹೋಗುವಾಗ ಕಲ್ಲುತೂರಾಟ ನಡೆದು ತೀವ್ರ ಕೋಮು ಸಂಘರ್ಷ ಉಂಟಾಗಿತ್ತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಬೇಕಾಗಿ ಬಂದಿತ್ತು. ಈ ಸೂಕ್ಷ್ಮ ಹಿನ್ನೆಲೆಯನ್ನು ಪರಿಗಣಿಸಿ, ಈ ಬಾರಿಯ ಮೆರವಣಿಗೆಯ ವೇಳೆ ಮಸೀದಿ ಸುತ್ತಮುತ್ತ 2 ಡಿಎಆರ್ ವಾಹನಗಳು ಸೇರಿದಂತೆ ನೂರಾರು ಪೊಲೀಸ್ ಸಿಬ್ಬಂದಿಯನ್ನು ಮುಂಜಾಗ್ರತಾ ಕ್ರಮವಾಗಿ ನಿಯೋಜಿಸಲಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:03 pm, Wed, 16 September 26

Follow Us
ಪ್ರಶಾಂತ್​ ಬಿ.
ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ