AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಮಂಡ್ಯ ಕೋರ್ಟ್

ಜಿಲ್ಲೆಯಲ್ಲಿ ಚಿರತೆ ದಾಳಿ ಮುಂದುವರೆದಿದ್ದು, ಮದ್ದೂರು ತಾಲೂಕಿನ ಕಬ್ಬಾರೆ ಗ್ರಾಮದಲ್ಲಿ ಚಿರತೆ ನಾಯಿಯನ್ನ ಕೊಂದು ತಿಂದಿರುವಂತಹ ಘಟನೆ ನಡೆದಿದೆ. ತಡರಾತ್ರಿ ಕಬ್ಬಾರೆ ಗ್ರಾಮಕ್ಕೆ ನುಗ್ಗಿದ ಚಿರತೆ ನಾಯಿ ಮೇಲೆ ದಾಳಿ ನಡೆಸಿದೆ.

ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಮಂಡ್ಯ ಕೋರ್ಟ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 16, 2022 | 6:54 AM

Share

ಮಂಡ್ಯ: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 80 ಸಾವಿರ ದಂಡ ವಿಧಿಸಿ ಮಂಡ್ಯ ಎಡಿಜೆ ವಿಶೇಷ ನ್ಯಾಯಾಲಯದ ಆದೇಶ ಹೊರಡಿಸಿದೆ. ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ 03 ಜುಲೈ 2020ರ ರಾತ್ರಿ 10 ಗಂಟೆಗೆ ಕೃತ್ಯ ನಡೆದಿತ್ತು. ಅಶೋಕ್ ಶಿಕ್ಷೆಗೆ ಒಳಪಟ್ಟ ಅಪರಾಧಿ. ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲಾಗಿತ್ತು. ಮಠವೊಂದರಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಅಪರಾಧಿ ಅಶೋಕ್, ಅಪ್ಪ-ಅಮ್ಮ ಇಲ್ಲದೆ ಮಾವನ ಆಶ್ರಯದಲ್ಲಿದ್ದ ನೊಂದ ಬಾಲಕಿ ಇದ್ದಳು. ಮಠವೊಂದರ ವಸತಿ ಗೃಹದಲ್ಲಿ ಬಾಲಕಿ ವಾಸವಿದ್ದಳು. ದಂಡ ಕಟ್ಟಲು ಸಾಧ್ಯವಾಗದಿದ್ದರೆ ಹೆಚ್ಚುವರಿ 4 ವರ್ಷ ಕಠಿಣ ಶಿಕ್ಷೆ ವಿಧಿಸಿ ಮಂಡ್ಯ ಕೋರ್ಟ್ ಆದೇಶ ಹೊರಡಿಸಿದೆ.

ಇದನ್ನೂ ಓದಿ: Nutmeg: ಜಾಕಾಯಿಗೆ ಇದೆ ಹತ್ತಾರು ಹೆಸರು, ಜೊತೆಗೆ ಹತ್ತಾರು ಆರೋಗ್ಯಕಾರಿ ಪ್ರಯೋಜನಗಳೂ ಇವೆ: ಅವು ಯಾವುವು ತಿಳಿಯೋಣ

ಗ್ರಾಮಕ್ಕೆ ನುಗ್ಗಿದ ಚಿರತೆ: ನಾಯಿ ಮೇಲೆ ದಾಳಿ:

ಮಂಡ್ಯ: ಜಿಲ್ಲೆಯಲ್ಲಿ ಚಿರತೆ ದಾಳಿ ಮುಂದುವರೆದಿದ್ದು, ಮದ್ದೂರು ತಾಲೂಕಿನ ಕಬ್ಬಾರೆ ಗ್ರಾಮದಲ್ಲಿ ಚಿರತೆ ನಾಯಿಯನ್ನ ಕೊಂದು ತಿಂದಿರುವಂತಹ ಘಟನೆ ನಡೆದಿದೆ. ತಡರಾತ್ರಿ ಕಬ್ಬಾರೆ ಗ್ರಾಮಕ್ಕೆ ನುಗ್ಗಿದ ಚಿರತೆ ನಾಯಿ ಮೇಲೆ ದಾಳಿ ನಡೆಸಿದೆ. ಚಿರತೆ ದಾಳಿಯಿಂದ ಕಬ್ಬಾರೆ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಬೆಳಗ್ಗೆ ಜಮೀನಿಗೆ ಹೋಗಲು ಆಚೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಗ್ರಾಮದಲ್ಲಿ ಬೋನ್ ಇಟ್ಟು ಚಿರತೆಯನ್ನ ಆದಷ್ಟು ಬೇಗ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್​ ಸವಾರ ಸಾವು

ತುಮಕೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್​ ಸವಾರ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಕೊರಟಗೆರೆ ತಾಲೂಕಿನ ಜೋನಿಗರಹಳ್ಳಿ ಬಳಿ ನಡೆದಿದೆ. ಬೈಕ್ ಸವಾರ ಅಲೀಂ ಪಾಷ ಸ್ಥಳದಲ್ಲೇ ಸಾವನ್ನಪ್ಪಿದ ವ್ಯಕ್ತಿ. ಕೊರಟಗೆರೆಯಿಂದ ತೋವಿನಕೆರೆಯತ್ತ ಬರುವಾಗ ಘಟನೆ ನಡೆದಿದೆ. ಗ್ರಾಮದಲ್ಲಿ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿದ್ದು ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!