ಮಂಡ್ಯ ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ; ‘ಗೋ ಬ್ಯಾಕ್​ ಆರ್​.ಅಶೋಕ್’​ ಎಂಬ ಭಿತ್ತಿಪತ್ರ ಅಂಟಿಸಿ ಆಕ್ರೋಶ

ಮಂಡ್ಯದ ವಿವಿ ರಸ್ತೆ, ಸುಭಾಷ್​​ ರಸ್ತೆ ಗೋಡೆ ಮೇಲೆ ‘ಗೋ ಬ್ಯಾಕ್​ ಆರ್​.ಅಶೋಕ್’​ ಎಂಬ ಭಿತ್ತಿಪತ್ರ ಅಂಟಿಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಮಂಡ್ಯ ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ; ‘ಗೋ ಬ್ಯಾಕ್​ ಆರ್​.ಅಶೋಕ್’​ ಎಂಬ ಭಿತ್ತಿಪತ್ರ ಅಂಟಿಸಿ ಆಕ್ರೋಶ
‘ಗೋ ಬ್ಯಾಕ್​ ಆರ್​.ಅಶೋಕ್’​ ಭಿತ್ತಿಪತ್ರ
Follow us
TV9 Web
| Updated By: ಆಯೇಷಾ ಬಾನು

Updated on:Jan 26, 2023 | 11:50 AM

ಮಂಡ್ಯ: ಮಂಡ್ಯ ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಮಾಡಿದ್ದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಮಂಡ್ಯದ ವಿವಿ ರಸ್ತೆ, ಸುಭಾಷ್​​ ರಸ್ತೆ ಗೋಡೆ ಮೇಲೆ ‘ಗೋ ಬ್ಯಾಕ್​ ಆರ್​.ಅಶೋಕ್’​ ಎಂಬ ಭಿತ್ತಿಪತ್ರ ಅಂಟಿಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಗೋಪಾಲಯ್ಯರನ್ನ ದಿಡೀರ್ ಬದಲಾವಣೆ ಮಾಡಿದ್ದಕ್ಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಾಗ್ಲೆ ಬಹಿರಂಗವಾಗಿಯೇ ಕೆಲ ಬಿಜೆಪಿ ನಾಯಕರು ಅಸಮಧಾನ ವ್ಯಕ್ತಪಡಿಸಿದ್ದಾರೆ. ಸಚಿವ ಆರ್​.ಅಶೋಕ್​ ಹೊಂದಾಣಿಕೆ ರಾಜಕಾರಣ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ: ಧಾರವಾಡ ಹಿಂದಿ‌ ಪ್ರಚಾರ ಸಭೆ : ಹಿಂದಿನ ಆಡಳಿತ ಮಂಡಳಿ ಅಕ್ರಮ, ಕೋಟಿ ಕೋಟಿ ನುಂಗಿದವರಿಗೆ ಬೆಂಗಳೂರು ಸಿಬಿಐನಿಂದ ಶಾಕ್

ಇನ್ನು ಉಸ್ತುವಾರಿ ಸಚಿವರಾಗಿ ಆರ್​.ಅಶೋಕ್ ನೇಮಿಸಿದ್ದಕ್ಕೆ ಆರ್​​.ಅಶೋಕ್​ ವಿರುದ್ಧ ಪರೋಕ್ಷವಾಗಿ ಡಾ.ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಸದೃಢವಾಗಿದೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಉತ್ತಮ ಕೆಲಸ ಮಾಡ್ತಿದ್ರು. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಬೇಕಿರಲಿಲ್ಲ. ಅಶೋಕ್ ವಿರುದ್ಧ ಹೊಂದಾಣಿಕೆ ರಾಜಕಾರಣ ಮಾಡಿದ ಆರೋಪವಿದೆ. ಆದರೆ ಜಿಲ್ಲೆಯಲ್ಲಿ ಹೊಂದಾಣಿಕೆ ರಾಜಕೀಯ ಮಾಡುವುದು ಸರಿಯಲ್ಲ. ಹೊಂದಾಣಿಕೆ ರಾಜಕಾರಣ ಮಾಡಬಾರದೆಂದು ಅಮಿತ್ ಶಾ ತಿಳಿಸಿದ್ದಾರೆ. ಅಮಿತ್ ಶಾ ಮಂಡ್ಯಕ್ಕೆ ಭೇಟಿ ನೀಡಿದಾಗ ಈ ಬಗ್ಗೆ ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಬಿಜೆಪಿ ಮುಖಂಡ ಡಾ.ಸಿದ್ದರಾಮಯ್ಯ ಅಸಮಾಧಾನ ಹೊರ ಹಾಕಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:50 am, Thu, 26 January 23