ಮಂಡ್ಯ ಗೆಲ್ಲಲು ಸಂಧಾನ ಸೂತ್ರಕ್ಕೆ ಮೊರೆ ಹೋದ ದಳಪತಿಗಳು; ಸಮನ್ವಯತೆ ಸಾಧಿಸಲು ಸರ್ಕಸ್

ಮಂಡ್ಯ ಲೋಕಸಭಾ ಚುನಾವಣೆ ಅಖಾಡ ರಂಗೇರಿದೆ. ಮೈತ್ರಿ ಟಿಕೆಟ್ ಜೆಡಿಎಸ್ ಪಾಲಾಗಿದ್ದು ಹೆಚ್​ಡಿ ಕುಮಾರಸ್ವಾಮಿ ಅಖಾಡಕ್ಕೆ ಇಳಿಯುತ್ತಿದ್ದಾರೆ. ಸುಮಲತಾ ರಾಜಕೀಯ ನಡೆ ಇನ್ನೂ ಸ್ಪಷ್ಟವಾಗಿಲ್ಲ. ಸದ್ಯ ದಳಪತಿಗಳು ಮಂಡ್ಯ ಗೆಲ್ಲಲು ಸಂಧಾನ ಸೂತ್ರಕ್ಕೆ ಮೊರೆ ಹೋಗಿದ್ದಾರೆ. ಸಂಸದೆ ಸುಮಲತಾಗೆ ಸಮನ್ವಯತೆ ಸಾಧಿಸಲು ಜೆಡಿಎಸ್ ನಾಯಕರು ಮುಂದಾಗಿದ್ದಾರೆ.

ಮಂಡ್ಯ ಗೆಲ್ಲಲು ಸಂಧಾನ ಸೂತ್ರಕ್ಕೆ ಮೊರೆ ಹೋದ ದಳಪತಿಗಳು; ಸಮನ್ವಯತೆ ಸಾಧಿಸಲು ಸರ್ಕಸ್
ಸುಮಲತಾ, ಕುಮಾರಸ್ವಾಮಿ
Follow us
ಪ್ರಶಾಂತ್​ ಬಿ.
| Updated By: ಆಯೇಷಾ ಬಾನು

Updated on: Mar 24, 2024 | 8:33 AM

ಮಂಡ್ಯ, ಮಾರ್ಚ್​.24: ಲೋಕಸಮರಕ್ಕೆ (Lok Sabha Election) ಈಗಾಗಲೇ ಮಹೂರ್ತ ಫಿಕ್ಸ್ ಆಗಿದೆ. ಈ ನಡುವೆ ಸಕ್ಕರಿನಗರಿ ಮಂಡ್ಯದಲ್ಲಿ (Mandya) ಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಮೈತ್ರಿ ಟಿಕೆಟ್ ಜೆಡಿಎಸ್ ಗೆ ಫಿಕ್ಸ್ ಆಗಿದೆ. ಮೈತ್ರಿ ಅಭ್ಯರ್ಥಿಯಾಗಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅಖಾಡಕ್ಕೆ ಧುಮುಕುವುದು ಬಹುತೇಕ ಕನ್ಫರ್ಮ್ ಆಗಿದೆ. ಇನ್ನು ಮೈತ್ರಿ ಟಿಕೆಟ್ ಜೆಡಿಎಸ್​ಗೆ ಎಂದು ಬಿಜೆಪಿ ಸ್ವಷ್ಟ ಪಡಿಸಿದೆ. ಹಾಗಾದ್ರೆ ಸುಮಲತಾ (Sumalatha Ambareesh) ನಡೆ ಏನು ಎಂಬುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಮತ್ತೊಂದೆಡೆ ದಳಪತಿಗಳು ಮಂಡ್ಯ ಗೆಲ್ಲಲು ಸಂಧಾನ ಸೂತ್ರಕ್ಕೆ ಮೊರೆ ಹೋಗಿದ್ದಾರೆ.

ಮಂಡ್ಯ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಮಂಡ್ಯದಿಂದ ಸ್ಪರ್ಧೆ ಮಾಡಲು ಹೆಚ್​ಡಿ ಕುಮಾರಸ್ವಾಮಿ ಒಪ್ಪಿದ್ದಾರೆ. ಆದರೆ ಮಂಡ್ಯದಿಂದ ಕುಮಾರಸ್ವಾಮಿ ಸ್ವರ್ಧೆ ಮಾಡುವುದಕ್ಕೆ ರಾಮನಗರ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಸಾಕಷ್ಟು ವಿರೋಧ ವ್ಯಕ್ತಪಡಿಸುತ್ತಿದ್ದು, ಕುಮಾರಸ್ವಾಮಿ ಚನ್ನಪಟ್ಟಣದಲ್ಲಿಯೇ ಇರಲಿ, ನಿಖಿಲ್ ಮಂಡ್ಯದಿಂದ ಸ್ವರ್ಧೆ ಮಾಡುವಂತೆ ಒತ್ತಾಯ ಮಾಡುತ್ತಿದ್ದಾರೆ. ಹೀಗಾಗಿ ಹೆಚ್​ಡಿಕೆ ಅಡ್ಡಕತ್ತರಿಯಲ್ಲಿ ಸಿಲುಕಿದ್ದು, ಇಬ್ಬರಲ್ಲಿ ಯಾರು ಸ್ವರ್ಧೆ ಮಾಡುತ್ತಾರೆ ಎಂಬುವುದು ಸಾಕಷ್ಟು ಕೂತುಹಲ ಮೂಡಿಸಿದೆ.

ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಬದಲಾದ ಜಾತಿ ವೋಟ್ ಬ್ಯಾಂಕ್; ‘ಕೈ’ ಸುಡಲಿದೆಯಾ ಜಾತಿ ಗಣತಿ?

ಮಂಡ್ಯ ಗೆಲ್ಲಲು ಸಂಧಾನ ಸೂತ್ರ

ಬಿಜೆಪಿ ಹೈಕಮಾಂಡ್ ಮಂಡ್ಯ, ಹಾಸನ, ಕೋಲಾರ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟು ಕೊಟ್ಟಿದೆ. ಜೆಡಿಎಸ್ ಪ್ರಾಬಲ್ಯವಿರುವ ಈ ಮೂರೂ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನೇ ನಿಲ್ಲಿಸಲು ಹಸಿರು ನಿಶಾನೆ ತೋರಿಸಿದೆ. ವಿಪರ್ಯಾಸವೆಂದರೆ ಈವರೆಗೂ ಬಿಜೆಪಿ ಹೈಕಮಾಂಡ್ ಜೊತೆ ಸಂಪರ್ಕದಲ್ಲಿದ್ದ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಗೆ ಇದರಿಂದಾಗಿ ಬಿಗ್ ಶಾಕ್ ಆಗಿದೆ. ಸಂಸದೆ ಸುಮಲತಾ ಬಿಜೆಪಿ ಟಿಕೆಟ್ ನನಗೇ ಸಿಗುತ್ತದೆ. ಕಮಲದ ಚಿಹ್ನೆ ಉಳಿಸುವುದೇ ನನ್ನ ಗುರಿ, ನಾನೇ ಅಭ್ಯರ್ಥಿ ಅಂತ ಹೇಳಿದ್ರು. ಅಲ್ಲದೆ, ಅವರ ಅಭಿಮಾನಿಗಳೂ ಕೂಡ ಮಂಡ್ಯದಿಂದ ಸುಮಲತಾ ಸ್ಪರ್ಧೆ ಖಚಿತ ಅಂತಾನೂ ಹೇಳಿದ್ರು. ಆದರೆ ಈಗ ಬಿಜೆಪಿ ಹೈಕಮಾಂಡ್ ಮೂರು ಕ್ಷೇತ್ರಗಳನ್ನು ಜೆಡಿಎಸ್ ಗೆ ಕೊಟ್ಟಿರೋದು ಸುಮಲತಾಗೆ ನುಂಗಲಾರದ ತುತ್ತಾಗಿದೆ. ಇತ್ತೀಚೆಗೆ ಮಂಡ್ಯದಲ್ಲಿ ಕಾರ್ಯಕರ್ತರ ಸಭೆ ನಡೆದಾಗ ಮಾಜಿ ಸಿಎಂ ಕುಮಾರಸ್ವಾಮಿ ಅವರು ಸುಮಲತಾ ಅವರು ನನ್ನ ಅಕ್ಕ ಇದ್ದಾಗೆ ಅಂತೇಳೋ ಮೂಲಕ ಸುಮಲತಾರನ್ನ ಓಲೈಸಿಕೊಳ್ಳಲು ಮುಂದಾಗಿದ್ದರು.

ಸದ್ಯ ಶೀಘ್ರದಲ್ಲೇ ಸುಮಲತಾ ಭೇಟಿ ಮಾಡಲು ಮಂಡ್ಯ ಮಾಜಿ ಹಾಲಿ ಶಾಸಕರು ಮುಂದಾಗಿದ್ದಾರೆ. ಸುಮಲತಾ ಭೇಟಿ ಮೂಲಕ ಒಗ್ಗಟ್ಟಿನ ಪ್ರದರ್ಶನಕ್ಕೆ ತಯಾರಿ ನಡೆಸಿದ್ದಾರೆ. ಸಂಸದೆ ಸುಮಲತಾರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ನಡೆಸಲು ಮಂಡ್ಯ ಜೆಡಿಎಸ್ ನಾಯಕರು ತಯಾರಿ ನಡೆಸಿದ್ದಾರೆ. ಮಂಡ್ಯದಲ್ಲಿ ಅಂಬರೀಶ್ ವರ್ಚಸ್ಸು ಕೂಡ ಇನ್ನೂ ಇದೆ. ಸುಮಲತಾ ಮತ್ತು ಅಂಬರೀಶ್ ಬೆಂಬಲಿತ ಅಭಿಮಾನಿಗಳ ಮತಗಳು ಕೂಡ ಮಂಡ್ಯದಲ್ಲಿ ಒಂದಷ್ಟು ಬದಲಾವಣೆ ಮಾಡುತ್ತವೆ. ಹೀಗಾಗಿ ಸುಮಲತಾ ಜೊತೆ ಸಮರ ಇಟ್ಟುಕೊಂಡರೆ ಅದರ ಲಾಭವನ್ನ ಕಾಂಗ್ರೆಸ್ ಪಡೆದುಕೊಳ್ಳುತ್ತದೆ. ಇದರಿಂದ ಕುಮಾರಸ್ವಾಮಿ ಗೆಲುವಿನ ಹಾದಿ ಕಷ್ಟ ಆಗುತ್ತದೆ. ಅದ್ದರಿಂದ ಸುಮಲತಾರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಒಟ್ಟಾಗಿ ಹೋಗಲು ದಳಪತಿಗಳು ಪ್ಲಾನ್ ಮಾಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ