ಜೆಡಿಎಸ್​ ಗೇಮ್​ ಚೇಂಜ್​, ಮಂಡ್ಯದಿಂದ ಮತ್ತೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಫಿಕ್ಸ್!

ಲೋಕಸಭಾ ಚುನಾವಣೆಗಾಗಿ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕದ 20 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗಿದೆ. ಬಾಕಿ ಇರುವ 8 ಕ್ಷೇತ್ರಗಳಲ್ಲಿ 3 ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡಲಿದ್ದು, ಇನ್ನು 5 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಫೈನಲ್ ಮಾಡಬೇಕಿದೆ. ಇನ್ನು ಜೆಡಿಎಸ್​ಗೆ ಬಿಟ್ಟು ಕೊಟ್ಟಿರುವ ಮೂರು ಕ್ಷೇತ್ರಗಳಲ್ಲಿ ಮಂಡ್ಯ ಸಹ ಒಂದು. ಆದರೆ, ಮಂಡ್ಯದಲ್ಲಿ ಜೆಡಿಎಸ್​​ನಿಂದ ಯಾರು ಸ್ಪರ್ಧೆ ಮಾಡುತ್ತಾರೆ ಎನ್ನುವ ಕುತೂಹಲಕ ಮನೆ ಮಾಡಿದ್ದು, ಕುಮಾರಸ್ವಾಮಿ ಮತ್ತೆ ಪುತ್ರ ನಿಖಿಲ್ ಕುಮಾರಸ್ವಾಮಿಯನ್ನೇ ಕಣಕ್ಕಿಳಿಸಲು ತೀರ್ಮಾನಿಸಿದ್ದಾರೆ.

ಜೆಡಿಎಸ್​ ಗೇಮ್​ ಚೇಂಜ್​, ಮಂಡ್ಯದಿಂದ ಮತ್ತೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಫಿಕ್ಸ್!
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Mar 15, 2024 | 5:35 PM

ಮಂಡ್ಯ, (ಮಾರ್ಚ್ 15): ಈ ಬಾರಿ ಲೋಕಸಭಾ ಚುನಾವಣೆಯಲ್ಲಿ(Loksabha Elections 2024) ಜೆಡಿಎಸ್​, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಕ್ಷೇತ್ರವನ್ನು( Mandya Loksabha constituency) ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಹೀಗಾಗಿ ಹಾಲಿ ಸಂಸದೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸುಮಲಯಾ ಅಂಬರೀಶ್​ಗೆ ಭಾರೀ ನಿರಾಸೆಯಾಗಿದೆ. ಇನ್ನು ಜೆಡಿಎಸ್​ನಿಂದು ಮಂಡ್ಯದಲ್ಲಿ ಯಾರು ಸ್ಪರ್ಧೆ ಮಾಡುತ್ತಾರೆ ಎನ್ನುವ ಹಲವು ದಿನಗಳ ಕುತೂಹಲಕ್ಕೆ ಇದೀಗ ತೆರೆ ಬಿದ್ದಿದೆ. ಈ ಬಾರಿ ಮತ್ತೆ ಮಂಡ್ಯ(Mandya) ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ(Nikhil Kumaraswamy) ಸ್ಪರ್ಧಿಸುವುದು ಖಚಿತ ಎನ್ನಲಾಗಿದ್ದು, ಮಾರ್ಚ್ 25ರಂದು ಅಧಿಕೃತವಾಗಿ ಘೋಷಣೆಯಾಗಲಿದೆ. ಹೌದು…ನಿಖಿಲ್ ಕಣಕ್ಕಿಳಿಯುವ ಬಗ್ಗೆ ಪರೋಕ್ಷವಾಗಿ ಎಚ್​​ಡಿ ಕುಮಾರಸ್ವಾಮಿ(HD Kumaraswamy) ಖಚಿತಪಡಿಸಿದ್ದಾರೆ.

ಅಭ್ಯರ್ಥಿ ಆಯ್ಕೆ ಸಂಬಂಧ ಇಂದು (ಮಾರ್ಚ್ 15) ಮಂಡ್ಯದಲ್ಲಿ ಕುಮಾರಸ್ವಾಮಿ, ಜೆಡಿಎಸ್ ನಾಯರು, ಮುಖಂಡರ ಜೊತೆ ಸಭೆ ಮಾಡಿದ್ದು, ಸಭೆಯಲ್ಲಿ ಎಲ್ಲಾ ನಾಯಕರು ಕುಮಾರಸ್ವಾಮಿ ಇಲ್ಲ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಈ ವೇಳೆ ಮಾತನಾಡಿರುವ ಕುಮಾರಸ್ವಾಮಿ, ​ನಿಮಗೆ ನಿಖಿಲ್​ನನ್ನು ಒಪ್ಪಿಸಲು ಮುಂದಾಗುತ್ತೇನೆ. ನಿಮ್ಮ ಆಸೆಗೆ ನಾವು ಭಂಗ ತರಲ್ಲ. ಪುತ್ರ ನಿಖಿಲ್ ಕುಮಾರಸ್ವಾಮಿಗೂ ಒಂದು ಮಾತು ಹೇಳುತ್ತೇನೆ. ನಿಮ್ಮ ಭಾವನೆಗಳಿಗೆ ಯಾವುದೇ ಕಾರಣಕ್ಕೂ ನಿರಾಸೆಯಾಗಲ್ಲ. ನಿಮ್ಮ ಆಸೆಯ ಪ್ರಕಾರ ಅದನ್ನು ನೆರವೇರಿಸಿಕೊಳ್ಳುತ್ತೇನೆ. ಮಾರ್ಚ್ 21ಕ್ಕೆ ನನಗೆ ಆಪರೇಷನ್ ಇದೆ. ಆದ್ದರಿಂದ ಮಾರ್ಚ್ 25ರಂದು ಮಂಡ್ಯಕ್ಕೆ ಬಂದು ಅಭ್ಯರ್ಥಿ ಘೋಷಿಸುತ್ತೇನೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಪರೋಕ್ಷವಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನೇ ಮಂಡ್ಯದಿಂದ ಕಣಕ್ಕಿಳಿಸುತ್ತೇನೆ ಎಂದು ಹೇಳಿದರು. ಇದರೊಂದಿಗೆ ಮಂಡ್ಯ ಜೆಡಿಎಸ್​ ಅಭ್ಯರ್ಥಿ ಯಾರು ಎನ್ನುವ ಪ್ರಶ್ನೆಗಳಿಗೆ ಇದೀಗ ಉತ್ತರ ಸಿಕ್ಕಂತಾಗಿದೆ.

ಇದನ್ನೂ ಓದಿ: ಮಾ 21ಕ್ಕೆ ಆಪರೇಷನ್ ಇದೆ, ನನಗೆ 84 ವರ್ಷ ಆಯಸ್ಸು ಎಂದು ಜ್ಯೋತಿಷಿಗಳು ಹೇಳಿದ್ದಾರೆ: ಕುಮಾರಸ್ವಾಮಿ

ಈ ಹಿಂದೆ ನಿಖಿಲ್‌ ಕುಮಾರಸ್ವಾಮಿ ಅವರು ಈ ಬಾರಿಯ ಚುನಾವಣೆಗೆ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದರು. ಆದರೆ ಅಭಿಮಾನಿಗಳು, ನಾಯಕರು ನಿಖಿಲ್‌ ಸ್ಪರ್ಧೆ ಮಾಡಬೇಕೆಂದು ಒಲವು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಕುಮಾರಸ್ವಾಮಿ, ಪುತ್ರನನ್ನು ಕಣಕ್ಕಿಳಿಸುವ ತೀರ್ಮಾನ ಮಾಡಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದ್ದು, ಮಾರ್ಚ್ 25ರಂದು ಘೋಷಣೆ ಮಾಡಲಿದ್ದಾರೆ.

ನಿಖಿಲ್- ಕುಮಾರಸ್ವಾಮಿ ಸ್ಪರ್ಧೆಗೆ ಒತ್ತಡ

ಈ ಬಾರಿ ಮಂಡ್ಯದಿಂದ ಕುಮಾರಸ್ವಾಮಿ ಅಥವಾ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಬೇಕು ಎಂದು ಜಿಲ್ಲೆಯ ಜೆಡಿಎಸ್​ ನಾಯಕರು ಪಟ್ಟು ಹಿಡಿದಿದ್ದಾರೆ. ಒಂದು ವೇಳೆ ಕುಮಾರಸ್ವಾಮಿ ಸ್ಪರ್ಧಿಸದಿದ್ದರೆ, ಅವರ ಮಗ ನಿಖಿಲ್​ ಕುಮಾರಸ್ವಾಮಿಯವರನ್ನಾದರೂ ಮಂಡ್ಯದಿಂದ ನಿಲ್ಲಿಸಬೇಕೆಂದು ಕಾರ್ಯಕರ್ತರು ಸಭೆಯಲ್ಲಿ ಒತ್ತಾಯಿಸಿದರು. ನಿಖಿಲ್ ಹಾಗೂ ಕುಮಾರಸ್ವಾಮಿ ಎಷ್ಟೇ ಮನವಿ ಮಾಡಿದರೂ ಕಾರ್ಯಕರ್ತರು ಮಾತ್ರ ಇಬ್ಬರಲ್ಲಿ ಒಬ್ಬರಾದರೂ ಸ್ಪರ್ಧಿಸಿ ಎಂದು ಪಟ್ಟು ಹಿಡಿದರು. ಇದಕ್ಕೆ ಮಾಜಿ ಸಚಿವರಾದ ಡಿಸಿ ತಮ್ಮಣ್ಣ ಹಾಗೂ ಪುಟ್ಟರಾಜು ಕೂಡ ಕಾರ್ಯಕರ್ತರ ಒತ್ತಾಯಕ್ಕೆ ಧ್ವನಿಗೂಡಿಸಿದರು. ನೀವು ಅಥವಾ ನಿಮ್ಮ ಮಗ ನಿಖಿಲ್​ರನ್ನ ನಿಲ್ಲಿಸಿ, ನಾವು ಗೆಲ್ಲಿಸಿಕೊಂಡು ಬರುತ್ತೇವೆ. ನಾಮಪತ್ರ ಸಲ್ಲಿಸಿ ಹೋಗಿ, ಉಳಿದಿದ್ದನ್ನು ನಾವು ನೋಡಿಕೊಳ್ಳುತ್ತೇವೆ ಎಂದಿದ್ದಾರೆ.

ಇನ್ನು ಈ ವೇಳೆ ಮಾತನಾಡಿರುವ ನಿಖಿಲ್ ಕುಮಾರಸ್ವಾಮಿ, ಕುಮಾರಣ್ಣಗೆ ಇದೇ ತಿಂಗಳು ಮಾರ್ಚ್ 21 ರಂದು ಸರ್ಜರಿ ನಿಗದಿಯಾಗಿದೆ. ಸರ್ಜರಿ ಬಳಿಕ ಕುಮಾರಣ್ಣ ಹೆಚ್ಚು ಓಡಾಡಲು ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧೆ ಮಾಡುವುದು ಎಂದು ಸ್ಪಷ್ಟಪಡಿಸಿದರು.

ಮಂಡ್ಯ ಕ್ಷೇತ್ರದಲ್ಲಿ ಓಡಾಡಿದ್ದವು ಹಲವರ ಹೆಸರುಗಳು

ಮಂಡ್ಯ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಯಾರು-ಯಾರು ಎಂದು​ ಹಲವು ದಿನಗಳಿಂದ ಬಾರೀ ಚರ್ಚೆಯಾಗುತ್ತಲೇ ಇತ್ತು. ನಿಖಿಲ್ ಕುಮಾರಸ್ವಾಮಿ ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಹೇಳಿದ ಬಳಿಕವಂತೂ ಅಭ್ಯರ್ಥಿ ಯಾರಂದು ಕುತೂಹಲಕ್ಕೆ ಕಾರಣವಾಗಿತ್ತು. ಖುದ್ದು ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಾರೆ ಎನ್ನುವ ಸುದ್ದಿ ಹರಿದಾಡಿದ್ದರೆ, ಇನ್ನು ಪುಟ್ಟರಾಜು ಕಣಕ್ಕಿಳಿಯುತ್ತಾರೆ ಎನ್ನುವ ಮಾತುಗಳು ಕೇಳಿಬಂದಿದ್ದವು. ಕೊನೆಗೆ ಡಿಸಿ ತಮ್ಮಣ್ಣ ಅವರು ಮಂಡ್ಯದ ಮೈತ್ರಿ ಅಭ್ಯರ್ಥಿಯಾಗಬಹುದು ಎನ್ನುವ ಸುದ್ದಿ ಹರಿದಾಡಿದ್ದವು. ಇದೀಗ ಅಂತಿಮವಾಗಿ ಮಂಡ್ಯದಿಂದ ನಿಖಿಲ್ ಸ್ಪರ್ಧೆಯನ್ನು ಕುಮಾರಸ್ವಾಮಿ ಖಚಿತಪಡಿಸಿದ್ದು, ಮತ್ತೆ ಮಂಡ್ಯ ರಾಜಕಾರಣ ರಂಗೇರಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ