2 ಕಡೆ ಸ್ಪರ್ಧಿಸುವಂತೆ ಜೆಡಿಎಸ್ ಮುಖಂಡರ ಒತ್ತಡಕ್ಕೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಿಷ್ಟು

ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ(HD Kumarasway)ಗೆ 2 ಕಡೆ ಸ್ಪರ್ಧಿಸುವಂತೆ ಮಂಡ್ಯ(Mandya) ಜೆಡಿಎಸ್ ಮುಖಂಡರು ಒತ್ತಾಯಿಸಿದ್ದು, ಮಂಡ್ಯದಿಂದ ಸ್ಪರ್ಧೆ ಮಾಡಿದ್ರೆ ಜಿಲ್ಲೆಗೆ ದೊಡ್ಡ ಶಕ್ತಿ ಬರುತ್ತದೆ ಎನ್ನುವ ಮೂಲಕ ಮನವಿ ಮಾಡಿದ್ದಾರೆ.

2 ಕಡೆ ಸ್ಪರ್ಧಿಸುವಂತೆ ಜೆಡಿಎಸ್ ಮುಖಂಡರ ಒತ್ತಡಕ್ಕೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಿಷ್ಟು
ಹೆಚ್​ಡಿ ಕುಮಾರಸ್ವಾಮಿ
Follow us
ಕಿರಣ್ ಹನುಮಂತ್​ ಮಾದಾರ್
|

Updated on:Apr 19, 2023 | 10:45 AM

ಬೆಂಗಳೂರು: ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ(HD Kumarasway)ಗೆ 2 ಕಡೆ ಸ್ಪರ್ಧಿಸುವಂತೆ ಮಂಡ್ಯ(Mandya) ಜೆಡಿಎಸ್ ಮುಖಂಡರು ಒತ್ತಾಯಿಸಿದ್ದಾರೆ. ಹೌದು ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಮನವಿ ಮಾಡಿದ್ದು, ‘ಮಂಡ್ಯದಿಂದ ಸ್ಪರ್ಧೆ ಮಾಡಿದ್ರೆ ಜಿಲ್ಲೆಗೆ ದೊಡ್ಡ ಶಕ್ತಿ ಬರುತ್ತದೆ. ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲೂ ಗೆಲ್ಲಬಹುದು. ‘ನಾವು ಬೇಕಾದರೇ ಹಾಲಿ ಶಾಸಕರನ್ನ ಮನವೊಲಿಕೆ ಮಾಡುತ್ತವೆ ಎನ್ನುವ ಮೂಲಕ ಮುಖಂಡರು ಬೇಡಿಕೆ ಇಟ್ಟಿದ್ದಾರೆ.

ಈ ವೇಳೆ ಇದಕ್ಕೆ ಉತ್ತರಿಸಿದ ಹೆಚ್​.ಡಿ ಕುಮಾರಸ್ವಾಮಿ ಅವರು ‘ರಾಮನಗರ, ಮಂಡ್ಯ ಜಿಲ್ಲೆಯನ್ನ ನಾನು ಬಿಡುವುದಿಲ್ಲ. ಆದರೆ ಈ ಬಾರಿ ನಾನು ಚನ್ನಪಟ್ಟಣದಿಂದ ಮಾತ್ರ ಸ್ಪರ್ಧೆ ಮಾಡುತ್ತೇನೆ. ಹಾಲಿ ಶಾಸಕರೇ ಮಂಡ್ಯ ಕ್ಷೇತ್ರದ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ. ಸದ್ಯಕ್ಕೆ ನಾನು ಅನಿವಾರ್ಯ ಅಲ್ಲ ಎಂದಿದ್ದಾರೆ.

ಇದನ್ನೂ ಓದಿ:Karnataka Assembly Polls: ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುವ ಘೋಷಣೆ ಮಾಡಿದ ಆಯನೂರು ಮಂಜುನಾಥ್

ಈ ಹಿಂದೆಯೇ ಸುದ್ದಿಯಲಿತ್ತು ಹೆಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ವಿಚಾರ

ಹೌದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎನ್ನುವ ಸುದ್ದಿ ದಟ್ಟವಾಗಿದ್ದು. ಚನ್ನಪಟ್ಟಣದ ಜೊತೆಗೆ ಎರಡನೇ ಕ್ಷೇತ್ರವಾಗಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸ್ಥಳೀಯ ನಾಯಕರೇ ಒತ್ತಾಯಿಸುತ್ತಿದ್ದಾರೆ ಎಂದು ತಿಳಿದುಬಂದಿತ್ತು. ಈ ಬಗ್ಗೆ ತಿಂಗಳ ಹಿಂದೆಯೇ ಚರ್ಚೆಯಾಗಿತ್ತು. ಮಂಡ್ಯದಲ್ಲಿ ಕುಮಾರಸ್ವಾಮಿ ಸ್ಪರ್ಧಿಸಿದರೆ, ಅವರ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಸಂಸದೆ ಸುಮಲತಾ ಅಂಬರೀಶ್​ ಕಣಕ್ಕಿಳಿಯುತ್ತಾರೆ ಎನ್ನುವ ಚರ್ಚೆಗಳು ನಡೆದಿದ್ದವು. ಇದೀಗ ಮತ್ತೆ ಈ ಸುದ್ದಿ ಮುನ್ನೆಲೆಗೆ ಬಂದಿದೆ. ಇದಕ್ಕೆ ಪುಷ್ಠಿ ನಿಡುವಂತೆ ಮಂಡ್ಯಕ್ಕೆ ಜೆಡಿಎಸ್ ಅಭ್ಯರ್ಥಿಯನ್ನಾಗಿ ಹಾಲಿ ಶಾಸಕ ಎಂ. ಶ್ರೀನಿವಾಸ್​ ಅವರನ್ನು ಘೋಷಣೆ ಮಾಡಲಾಗಿದ್ದರೂ, ಇನ್ನೂ ಬಿ ಪಾರ್ಮ್​ ನೀಡಿಲ್ಲ.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:43 am, Wed, 19 April 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ