ಬ್ರಾಹ್ಮಣ ಸಮುದಾಯದವರು ಸಿಎಂ ಆಗಬಾರದಾ? ಹೆಚ್ಡಿ ಕುಮಾರಸ್ವಾಮಿ ಹೇಳಿಕೆಗೆ ಪೇಜಾವರ ಶ್ರೀ ತಿರುಗೇಟು
ಯಾಕೆ ಬ್ರಾಹ್ಮಣ ಸಮುದಾಯದವರು ಸಿಎಂ ಆಗಬಾರದಾ. ಬ್ರಾಹ್ಮಣರು ಭಾರತದ ಪ್ರಜೆಗಳು ಅಲ್ಲವೇ. ರಾಜ್ಯದಲ್ಲಿ ಬ್ರಾಹ್ಮಣ ಸಮುದಾಯದ ಎಷ್ಟು ಶಾಸಕರು ಇದ್ದಾರೆ ಎಂದು ಮಂಡ್ಯದಲ್ಲಿ ಪೇಜಾವರಶ್ರೀ ಸಾಲು ಸಾಲು ಪ್ರಶ್ನೆಗಳನ್ನು ಮಾಡಿದ್ದಾರೆ.
ಮಂಡ್ಯ: ಹಿಂದಿನಿಂದಲೂ ಬ್ರಾಹ್ಮಣರ ವಿರುದ್ಧವಾಗಿ ಹೇಳಿಕೆಗಳು ನೀಡಲಾಗ್ತಿದೆ. ಪ್ರತಿ ಚುನಾವಣೆ ಸಂದರ್ಭದಲ್ಲೂ ಬ್ರಾಹ್ಮಣರ ಬಗ್ಗೆ ಹೇಳಿಕೆ ನೀಡ್ತಾರೆ. ಬ್ರಾಹ್ಮಣರ ಸಮುದಾಯ (Brahmin community) ದಲ್ಲಿ ಯಾರೂ ಧ್ವನಿ ಎತ್ತಿ ಮಾತಾಡಲ್ಲ. ಬ್ರಾಹ್ಮಣರು ಅಲ್ಪಸಂಖ್ಯಾತರು, ಏನು ಮಾತಾಡಿದ್ರೂ ನಡೆಯುತ್ತೆ ಅಂತ ಭಾವನೆ. ಒಂದು ವೇಳೆ ಬ್ರಾಹ್ಮಣರು ಸಿಎಂ ಆಗುವುದಾದರೆ ಆಗಲಿ ಎಂದು ಪೇಜಾವರಶ್ರೀ (pejawar sri) ಹೇಳಿದರು. ಯಾಕೆ ಬ್ರಾಹ್ಮಣ ಸಮುದಾಯದವರು ಸಿಎಂ ಆಗಬಾರದಾ? ಬ್ರಾಹ್ಮಣರು ಭಾರತದ ಪ್ರಜೆಗಳು ಅಲ್ಲವೇ? ರಾಜ್ಯದಲ್ಲಿ ಬ್ರಾಹ್ಮಣ ಸಮುದಾಯದ ಎಷ್ಟು ಶಾಸಕರು ಇದ್ದಾರೆ? ಸಮುದಾಯದ ಎಷ್ಟು ಜನರಿಗೆ ಟಿಕೆಟ್ ನೀಡಿದ್ದಾರೆ ಎಂದು ಸಾಲು ಸಾಲು ಪ್ರಶ್ನೆಗಳನ್ನಿಟ್ಟರು. ಮಾತನಾಡುವವರು ಏನು ಬೇಕಾದರೂ ಮಾತನಾಡುತ್ತಾರೆ. ಹಿನ್ನೆಲೆ ಅಥವಾ ಪುರಾವೆ ಇಟ್ಟುಕೊಂಡು ಮಾತನಾಡಬೇಕು ಎಂದು ಕಿಡಿಕಾರಿದರು.
ಒಂದು ಧರ್ಮವನ್ನ ದೂಷಿಸುವುದು ಸರಿಯಲ್ಲ
ಬ್ರಾಹ್ಮಣರಿಂದಲೇ ಗಾಂಧಿ ಹತ್ಯೆ ಎಂಬ ವಿಚಾರವಾಗಿ ಅವರು ಪ್ರತಿಕ್ರಿಯಿಸಿದ್ದು, ಒಬ್ಬ ವ್ಯಕ್ತಿ ಮಾಡಿದ ತಪ್ಪಿಗೆ ಇಡಿ ಸಮಾಜವನ್ನ ದೂಷಿಸುವುದಾದರೆ ಇತರೆ ಸಮಾಜದಲ್ಲಿ ನಡೆದ ವಿಚಾರವನ್ನ ಸಾಮೂಹಿಕರಣ ಮಾಡ್ತಿಲ್ಲ. ಬ್ರಾಹ್ಮಣ ಸಮಾಜವನ್ನ ದೂರು ಬೇಕು ಎಂದು ಯಾವುದಾದರೂ ಒಂದು ನೆಪ ಮಾಡಿ ದೂರ್ತಾರೆ. ಪ್ರಜಾಪ್ರಭುತ್ವ ಸಮಾಜದಲ್ಲಿ ಯಾರಿಗೂ ಅನ್ಯಾಯವಾಗಬಾರದು. ಇವತ್ತು ಯಾವುದೋ ಸಮಾಜ, ಧರ್ಮದ ಪರವಾಗಿ ಸರ್ಕಾರ ನಡೆಯೋದಾದ್ರೆ. ಅನ್ಯಾಯವಾದಾಗ ಒಂದು ಧರ್ಮದ ವಿರುದ್ದ ಮತ್ತೊಂದು ಧರ್ಮ ಪುಟಿದೇಳುವುದು ಸಹಜ. ಪ್ರಜಾಪ್ರಭುತ್ವ ಸಮಾಜದಲ್ಲಿ ಈ ರೀತಿ ಒಂದು ಧರ್ಮವನ್ನ ದೂಷಿಸುವುದು ಸರಿಯಲ್ಲ. ಯಾವ ಧರ್ಮದವ್ರಿಗೂ ಅನ್ಯಾಯ ಆಗಬಾರದು ಎಂದು ಪೇಜಾವರಶ್ರೀ ಹೇಳಿದರು.
ಇದನ್ನೂ ಓದಿ: ಕುಮಾರಸ್ವಾಮಿ ಕೂಡಲೇ ಕ್ಷಮೆ ಕೇಳುವಂತೆ ಆಗ್ರಹಿಸಿದ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ
ನಾನು ಎಂದಿಗೂ ಬ್ರಾಹ್ಮಣ ಸಮುದಾಯದ ವಿರೋಧಿಯಲ್ಲ: ಹೆಚ್.ಡಿ.ಕುಮಾರಸ್ವಾಮಿ
ಇನ್ನು ಈ ಕುರಿತಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ನಾನು ಎಂದಿಗೂ ಬ್ರಾಹ್ಮಣ ಸಮುದಾಯದ ವಿರೋಧಿಯಲ್ಲ. ಸಿಎಂ ಆಗಿದ್ದಾಗ ಬ್ರಾಹ್ಮಣ ಸಮಾಜಕ್ಕೆ ಬೆಲೆಬಾಳುವ ಜಾಗ ಕೊಟ್ಟೆ ಎಂದು ಬ್ರಾಹ್ಮಣ ಸಿಎಂ ಆರೋಪಕ್ಕೆ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಿದರು. ನಾನು ಸಿಎಂ ಆಗಿದ್ದಾಗಲೇ ಬ್ರಾಹ್ಮಣ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ, 25 ಕೋಟಿ ಹಣ ನೀಡಿದ್ದೆ. ಬ್ರಾಹ್ಮಣ ಸಿಎಂ ಬಗ್ಗೆ ಹೇಳಿಕೆಯನ್ನ ತಪ್ಪಾಗಿ ಅರ್ಥೈಸಲಾಗುತ್ತಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಿನ್ನೆಲೆ ಬಗ್ಗೆ ನಾನು ಹೇಳಿದ್ದೇನೆ ಎಂದು ಹೇಳಿದರು.
ಇದನ್ನೂ ಓದಿ: ಕುಟುಂಬದಲ್ಲಿ ಹೊತ್ತಿಕೊಂಡ ಟಿಕೆಟ್ ಕಿಡಿ ಹಾರಿಸಲೆಂದೇ ‘ಬ್ರಾಹ್ಮಣ ಸಿಎಂ’ ಬಾಂಬ್ ಸಿಡಿಸಿದ್ರಾ ಕುಮಾರಸ್ವಾಮಿ?
ನೂರಕ್ಕೆ ನೂರರಷ್ಟು ಬಿಜೆಪಿಯವರಿಗೆ ಸೋಲಿನ ಭೀತಿ ಶುರುವಾಗಿದೆ: ಜ್ವಲ್ ರೇವಣ್ಣ
ಪ್ರಲ್ಹಾದ್ ಜೋಶಿ ಸಿಎಂ ಮಾಡಲು RSS ಹುನ್ನಾರ ಎಂಬ ಹೇಳಿಕೆ ವಿಚಾರವಾಗಿ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಪ್ರತಿಕ್ರಿಯೆ ನೀಡಿದ್ದು, JDS ಪಂಚರತ್ನ ರಥಯಾತ್ರೆ ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗುತ್ತಿದೆ. ಇದನ್ನು ಸಹಿಸಲಾಗದೆ ಕಳಂಕ ತರಲು ಜೋಶಿ ಮಾತಾಡಿರಬಹುದು. ಹಾಗಾಗಿ ಪ್ರಲ್ಹಾದ್ ಜೋಶಿ ಹೇಳಿಕೆ ಬಗ್ಗೆ ನಾವು ತಲೆಕೆಡಿಸಿಕೊಳ್ಳಲ್ಲ. ಬಿಜೆಪಿ ಯಾವ ರೀತಿ ಕುಸಿದಿದೆ ಎಂದು ಚಿಂತನೆ ಮಾಡಿದರೆ ಸೂಕ್ತ. ರಾಜ್ಯದಲ್ಲಿ ಕಳೆದ 4 ವರ್ಷಗಳಲ್ಲಿ ಬಿಜೆಪಿ ಸರ್ಕಾರ ಏನೂ ಮಾಡಿಲ್ಲ ಎಂದರು.
ಪ್ರಲ್ಹಾದ್ ಜೋಶಿಯವರು ಒಂದು ಬೆರಳು ನಮ್ಮ ಕಡೆ ತೋರಿಸಿದ್ರೆ, ಉಳಿದ ನಾಲ್ಕು ಬೆರಳು ಅವರ ಕಡೆ ತೋರಿಸುತ್ತೆ. ನೂರಕ್ಕೆ ನೂರರಷ್ಟು ಬಿಜೆಪಿಯವರಿಗೆ ಸೋಲಿನ ಭೀತಿ ಶುರುವಾಗಿದೆ. RSS ಸಮೀಕ್ಷೆ ಪ್ರಕಾರವೇ ಬಿಜೆಪಿಗೆ 65 ಸ್ಥಾನ ಬರುವ ಮಾಹಿತಿ ಇದೆ. ಹಾಗಾಗಿ ಈಗ ಯಾವ ಮಟ್ಟಕ್ಕೆ ಇಳಿದಿದ್ದಾರೆಂದು ಗೊತ್ತಾಗುತ್ತಿದೆ. ಈ ಬಾರಿ ಬಿಜೆಪಿಗೆ ಜನರು ಪಾಠ ಕಲಿಸುತ್ತಾರೆ ಎಂದು ಹೇಳಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲ ಇಲ್ಲಿ ಕ್ಲಿಕ್ ಮಾಡಿ.
Published On - 2:46 pm, Mon, 6 February 23