ಕೇಂದ್ರ ಸಂಪುಟ ದರ್ಜೆ ಸಚಿವರಾದ ಮಂಡ್ಯದ ಮೊದಲ ಸಂಸದ ಕುಮಾರಸ್ವಾಮಿ; ಇಂಡಿಯಾ ರಾಜಕಾರಣದಲ್ಲಿ ಮಂಡ್ಯ ಪ್ರಭಾವದ ಇತಿಹಾಸ ಇಲ್ಲಿದೆ

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಗೆದ್ದು ಕೇಂದ್ರದಲ್ಲಿ ಸಚಿವರಾದವರಿದ್ದಾರೆ. ಎಸ್​ಎಂ ಕೃಷ್ಣ, ಅಂಬರೀಷ್ ಕೇಂದ್ರ ಸಚಿವರಾಗಿದ್ದರು. ಆದರೆ, ಮಂಡ್ಯದಿಂದ ಸಂಸದರಾಗಿ ಕೇಂದ್ರದ ಸಂಪುಟ ದರ್ಜೆ ಸಚಿವ ಸ್ಥಾನ ಪಡೆದ ದಾಖಲೆ ಹೆಚ್​ಡಿ ಕುಮಾರಸ್ವಾಮಿ ಪಾಲಾಗಿದೆ. ಇಂಡಿಯಾ ರಾಜಕಾರಣದಲ್ಲಿ ಮಂಡ್ಯ ಪ್ರಭಾವದ ಇತಿಹಾಸದ ಇಣುಕು ನೋಟ ಇಲ್ಲಿದೆ.

ಕೇಂದ್ರ ಸಂಪುಟ ದರ್ಜೆ ಸಚಿವರಾದ ಮಂಡ್ಯದ ಮೊದಲ ಸಂಸದ ಕುಮಾರಸ್ವಾಮಿ; ಇಂಡಿಯಾ ರಾಜಕಾರಣದಲ್ಲಿ ಮಂಡ್ಯ ಪ್ರಭಾವದ ಇತಿಹಾಸ ಇಲ್ಲಿದೆ
ಹೆಚ್​ಡಿ ಕುಮಾರಸ್ವಾಮಿ
Follow us
| Updated By: ಗಣಪತಿ ಶರ್ಮ

Updated on: Jun 10, 2024 | 4:11 PM

ಮಂಡ್ಯ, ಜೂನ್ 10: ರಾಜಕೀಯ ವಲಯದಲ್ಲಿ ಮಂಡ್ಯ (Mandya) ಎಂದರೆ ಇಂಡಿಯಾ ಎಂಬ ಮಾತು ಇದೆ. ಇಂತಹ ಮಂಡ್ಯದಿಂದ ಗೆದ್ದು ಸಂಸತ್‌ಗೆ ಹೋದವರ ಪೈಕಿ ಕೇಂದ್ರದ ಅಧಿಕಾರದ ಗದ್ದುಗೆ ಹಿಡಿದವರು ಇಬ್ಬರೇ. ಅವರೆಂದರೆ, ಎಸ್ಎಂ ಕೃಷ್ಣ (SM Krishna) ಹಾಗೂ ಅಂಬರೀಷ್ (Ambareesh). ಆದರೆ, ಅವರಿಬ್ಬರೂ ರಾಜ್ಯ ಖಾತೆ ಸಚಿವರಾಗಿದ್ದವರು. ಇದೀಗ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಪ್ರಧಾನಿ ನರೇಂದ್ರ ಮೋದಿ ಕ್ಯಾಬಿನೆಟ್​​​ನಲ್ಲಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆ ಮೂಲಕ ಮಂಡ್ಯದಿಂದ ಆಯ್ಕೆಯಾದವರ ಪೈಕಿ ಕೇಂದ್ರ ಸಂಪುಟ ದರ್ಜೆ ಸಚಿವರಾದ ಮೊದಲ ಸಂಸದ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದಿಂದ 1952ರಿಂದ ಇಲ್ಲಿಯವರೆಗೆ 14 ಮಂದಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಈ ಪೈಕಿ ಕೇಂದ್ರದ ಮಂತ್ರಿಗಳಾಗಿದ್ದವರು ಕೇವಲ ಇಬ್ಬರೇ. 1980ರಲ್ಲಿ ಮಂಡ್ಯದಿಂದ ಎಸ್ಎಂ ಕೃಷ್ಣ ಕೇಂದ್ರ ಕೈಗಾರಿಕಾ ಹಾಗೂ ಹಣಕಾಸು ರಾಜ್ಯ ಖಾತೆಯ ರಾಜ್ಯ ಸಚಿವರಾಗಿದ್ದರು. ಇದಾದ ಬಳಿಕ 1998ರಲ್ಲಿ ಮಂಡ್ಯದಿಂದ ಎಂಪಿಯಾದ ಅಂಬರೀಶ್ ಕೇಂದ್ರ ಮಾಹಿತಿ ಮತ್ತು ಪ್ರಸಾರ ರಾಜ್ಯ ಖಾತೆಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಈ ಇಬ್ಬರನ್ನು ಬಿಟ್ಟರೆ ಮಂಡ್ಯದಿಂದ ಗೆದ್ದ ಯಾವೊಬ್ಬ ಸಂಸದರೂ ಕೇಂದ್ರದಲ್ಲಿ ಹುದ್ದೆ ಪಡೆಯುವಲ್ಲಿ ವಿಫಲರಾಗಿದ್ದಾರೆ. ಇದೀಗ ಮಂಡ್ಯದಿಂದ ಅಭೂತಪೂರ್ವ ಗೆಲುವು ಸಾಧಿಸಿರುವ ಹೆಚ್​​ಡಿ ಕುಮಾರಸ್ವಾಮಿಗೆ ಮೋದಿ ಸಚಿವ ಸಂಪುಟದಲ್ಲಿ ಸ್ಥಾನ ದೊರೆತಿದೆ.

ಈಗಾಗಲೇ ಹೆಚ್‌ಡಿ ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೀಗ ಯಾವ ಖಾತೆ ದೊರೆಯಲಿದೆ ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ಕುಮಾರಸ್ವಾಮಿ ಕೃಷಿ ಖಾತೆಯ ನೀರಿಕ್ಷೆಯಲ್ಲಿ ಇದ್ದಾರೆ.

ಕುಮಾರಸ್ವಾಮಿ ಮುಂದಿವೆ ಹಲವು ಸವಾಲು

ಹೆಚ್​ಡಿ ಕುಮಾರಸ್ವಾಮಿ ಕೇಂದ್ರ ಸಂಪುಟ ದರ್ಜೆಯ ಸಚಿವರಾಗಿದ್ದು, ಅವರ ಮುಂದೆ ಹಲವು ಸವಾಲುಗಳು ಇವೆ. ಕಾವೇರಿ ವಿವಾದ ಬಗೆಹರಿಸಲು ಮೇಕೆದಾಟು ಯೋಜನೆಯನ್ನು ಆರಂಭಿಸುವುದಾಗಿ ಕುಮಾರಸ್ವಾಮಿ ಚುನಾವಣಾ ಪ್ರಚಾರದ ವೇಳೆ ಹೇಳಿದ್ದಾರೆ. ಮಂಡ್ಯ ಜಿಲ್ಲೆ ಕೃಷಿ ಪ್ರಧಾನ ಜಿಲ್ಲೆಯಾದ್ದರಿಂದ ಕೃಷಿ ಅಭಿವೃದ್ಧಿಯ ನಿರೀಕ್ಷೆ ಇದೆ. ಹೀಗೆ ಹತ್ತು ಹಲವು ನಿರೀಕ್ಷೆಗಳನ್ನು ಮಂಡ್ಯ ಜನರು ಕುಮಾರಸ್ವಾಮಿ ಮೇಲೆ ಹೊಂದಿದ್ದಾರೆ.

ಇದನ್ನೂ ಓದಿ: ಹಲವು ಏಳು-ಬೀಳುಗಳ ನಡುವೆಯೂ ಮಂಡ್ಯ ಗೆದ್ದು ಮೋದಿ ಸರ್ಕಾರದಲ್ಲಿ ಮಂತ್ರಿಯಾದ ಕುಮಾರಸ್ವಾಮಿ

ಒಟ್ಟಿನಲ್ಲಿ ಕೇಂದ್ರದಲ್ಲಿ ಸಂಪುಟ ದರ್ಜೆಯ ಸಚಿವರಾದ ಮಂಡ್ಯದ ಮೊದಲ ಸಂಸದ ಎಂಬ ದಾಖಲೆಗೆ ಕುಮಾರಸ್ವಾಮಿ ಪಾತ್ರರಾಗಿದ್ದಾರೆ. ಇದೀಗ ಮಂಡ್ಯದಲ್ಲಿ ತಮ್ಮ ಮೇಲೆ ಇರುವ ಜವಾಬ್ದಾರಿಯನ್ನು ಹೇಗೆ ನಿಭಾಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟುವ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್