AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮೀಣ ಮಕ್ಕಳಿಗಾಗಿ ಕೇಂದ್ರದ ಗಿಫ್ಟ್: ಮಂಡ್ಯದಲ್ಲಿ ತಲೆಯೆತ್ತಲಿದೆ ಅತಿ ದೊಡ್ಡ ಸ್ಫೋರ್ಟ್ಸ್​ ಕಾಂಪ್ಲೆಕ್ಸ್​

ಮಂಡ್ಯದ ವಿಸಿ ಫಾರಂನಲ್ಲಿ ಖೇಲೋ ಇಂಡಿಯಾ ಯೋಜನೆಯಡಿ 14 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಕ್ರೀಡಾ ಸಂಕೀರ್ಣ ನಿರ್ಮಾಣವಾಗಲಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮಾರ್ಚ್ 14ರಂದು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಗ್ರಾಮೀಣ ಪ್ರದೇಶದ ಮಕ್ಕಳಿಗೆ ಕ್ರೀಡೆಯಲ್ಲಿ ಉತ್ತಮ ಅವಕಾಶ ಹಾಗೂ ಸೌಲಭ್ಯಗಳನ್ನು ಒದಗಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಇದು ಮಂಡ್ಯದ ಕ್ರೀಡಾ ಮೂಲಸೌಕರ್ಯಕ್ಕೆ ದೊಡ್ಡ ಉತ್ತೇಜನ ನೀಡಲಿದೆ.

ಗ್ರಾಮೀಣ ಮಕ್ಕಳಿಗಾಗಿ ಕೇಂದ್ರದ ಗಿಫ್ಟ್: ಮಂಡ್ಯದಲ್ಲಿ ತಲೆಯೆತ್ತಲಿದೆ ಅತಿ ದೊಡ್ಡ ಸ್ಫೋರ್ಟ್ಸ್​ ಕಾಂಪ್ಲೆಕ್ಸ್​
ಗ್ರಾಮೀಣ ಮಕ್ಕಳಿಗಾಗಿ ಕೇಂದ್ರದ ಗಿಫ್ಟ್: ಮಂಡ್ಯದಲ್ಲಿ ತಲೆಯೆತ್ತಲಿದೆ ದೊಡ್ಡ ಸ್ಫೋರ್ಟ್ಸ್​ ಕಾಂಪ್ಲೆಕ್ಸ್​
ದಿಲೀಪ್​, ಚೌಡಹಳ್ಳಿ
| Edited By: |

Updated on: Mar 07, 2026 | 12:47 PM

Share

ಮಂಡ್ಯ, ಮಾರ್ಚ್​ 07: ಖೇಲೋ ಇಂಡಿಯಾ (Khelo India)ಯೋಜನೆಯಡಿ ಮಂಡ್ಯದಲ್ಲಿ ಕ್ರೀಡಾ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ಸ್ಪೋರ್ಟ್ಸ್ ಕಾಂಪ್ಲೆಕ್ಸ್ (Mandya Sports Complex) ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಮಂಡ್ಯದ ವಿಸಿ ಫಾರಂನಲ್ಲಿ ಮಾತನಾಡಿದ ಅವರು, ಸುಮಾರು 14 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣವಾಗಲಿದೆ ಎಂದು ಹೇಳಿದ್ದಾರೆ.

ಸಂಪೂರ್ಣ ಅಭಿವೃದ್ಧಿಗಾಗಿ 5 ಎಕರೆಗೆ ವಿಸ್ತರಣೆ

ವಿಸಿ ಫಾರಂನ ಸುಮಾರು 1.5 ಎಕರೆ ಜಾಗದಲ್ಲಿ ಪ್ರಥಮ ಹಂತದಲ್ಲಿ ಕಾಂಪ್ಲೆಕ್ಸ್ ನಿರ್ಮಿಸಲು ನಿರ್ಧರಿಸಲಾಗಿದ್ದು, ಮಾರ್ಚ್ 14ರಂದು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಗ್ರಾಮೀಣ ಪ್ರದೇಶದ ಮಕ್ಕಳಿಗೆ ಕ್ರೀಡೆಯಲ್ಲಿ ಹೆಚ್ಚಿನ ಅವಕಾಶಗಳು ದೊರೆಯಬೇಕು ಎಂಬ ಉದ್ದೇಶದಿಂದ ಈ ಯೋಜನೆ ಕೈಗೊಳ್ಳಲಾಗಿದೆ ಎಂದಿದ್ದಾರೆ. ಇದೇ ವೇಳೆ ಮುಂದಿನ ದಿನಗಳಲ್ಲಿ ಈ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಅನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ಯೋಜನೆಯೂ ಇದೆ ಎಂದು ಹೇಳಿದರು. ಸಂಪೂರ್ಣ ಅಭಿವೃದ್ಧಿಗಾಗಿ ಸುಮಾರು 5 ಎಕರೆ ಜಾಗ ಅಗತ್ಯವಿದ್ದು, ಮುಂದಿನ ಹಂತದಲ್ಲಿ ಅದನ್ನು ವಿಸ್ತರಿಸುವ ಉದ್ದೇಶ ಹೊಂದಿದ್ದೇವೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಮಂಡ್ಯದಲ್ಲಿ ಸೂಕ್ತ ಜಾಗದ ಕೊರತೆ ಇರುವ ಕಾರಣ ವಿಸಿ ಫಾರಂ ಪ್ರದೇಶದಲ್ಲಿ ಈ ಯೋಜನೆಯನ್ನು ಆರಂಭಿಸಲಾಗುತ್ತಿದೆ. ಹೆಚ್ಚುವರಿ ಅಭಿವೃದ್ಧಿಗಾಗಿ ಮತ್ತಷ್ಟು ಜಾಗ ಒದಗಿಸಲಾಗುತ್ತದೆ ಎಂಬ ನಿರೀಕ್ಷೆ ಇದೆ. ಇದಕ್ಕಾಗಿ ಹಲವು ಬಾರಿ ಭೂಮಿ ನೀಡುವಂತೆ ಮನವಿ ಮಾಡಿದ್ದೇನೆ ಎಂದು ಹೆಚ್​ಡಿಕೆ ಹೇಳಿದ್ದಾರೆ. ಈ ಯೋಜನೆಗೆ ಯಾವುದೇ ರೀತಿಯ ರಾಜಕೀಯ ಸಂಬಂಧ ಇಲ್ಲ. ಗ್ರಾಮೀಣ ಮಕ್ಕಳಿಗೆ ಕ್ರೀಡೆಯಲ್ಲಿ ಪ್ರೋತ್ಸಾಹ ನೀಡುವುದು ಹಾಗೂ ಉತ್ತಮ ಸೌಲಭ್ಯಗಳನ್ನು ಒದಗಿಸುವುದೇ ಇದರ ಮುಖ್ಯ ಉದ್ದೇಶ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ