AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ.ಕೆ.ಹಳ್ಳಿ ಯಂತ್ರಾಗಾರ ಜಲಾವೃತ: ಬೆಂಗಳೂರು ನಗರಕ್ಕೆ ಕಾವೇರಿ ನೀರು ಸರಬರಾಜಿಗೆ ತೊಂದರೆ

ಯಂತ್ರಾಗಾರಕ್ಕೆ ಹಾನಿಯಾದ ವಿಚಾರ ತಿಳಿದ ತಕ್ಷಣ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುರ್ತು ಪ್ರವಾಸ ಕೈಗೊಂಡಿದ್ದು, ಟಿ.ಕೆ.ಹಳ್ಳಿಗೆ ಧಾವಿಸುತ್ತಿದ್ದಾರೆ.

ಟಿ.ಕೆ.ಹಳ್ಳಿ ಯಂತ್ರಾಗಾರ ಜಲಾವೃತ: ಬೆಂಗಳೂರು ನಗರಕ್ಕೆ ಕಾವೇರಿ ನೀರು ಸರಬರಾಜಿಗೆ ತೊಂದರೆ
ಮಂಡ್ಯ ಜಿಲ್ಲೆ ಟಿ.ಕೆ.ಹಳ್ಳಿಯಲ್ಲಿರುವ ಕಾವೇರಿ ನೀರು ಸರಬರಾಜು ಕೇಂದ್ರ ಜಲಾವೃತಗೊಂಡಿದೆ.Image Credit source: Tv9Kannada
TV9 Web
| Edited By: |

Updated on:Sep 05, 2022 | 11:20 AM

Share

ಮಂಡ್ಯ: ಜಿಲ್ಲೆಯ ಹಲಗೂರಿನಲ್ಲಿ ಧಾರಾಕಾರ ಮಳೆ ಸುರಿದಿರುವ ಹಿನ್ನೆಲೆಯಲ್ಲಿ (Rain in Mandya) ಮಳವಳ್ಳಿ ತಾಲ್ಲೂಕು ಟಿ.ಕೆ.ಹಳ್ಳಿಯಲ್ಲಿರುವ ಕಾವೇರಿ ನೀರಿನ ಜಲರೇಚಕ ಯಂತ್ರಾಗಾರ (ಪಂಪ್​ಸ್ಟೇಷನ್) ಜಲಾವೃತಗೊಂಡಿದ್ದು, ಬೆಂಗಳೂರಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ಏರುಪೇರಾಗಿದೆ. ಇಲ್ಲಿಂದಲೇ ಬೆಂಗಳೂರಿಗೆ ಕುಡಿಯುವ ನೀರು ಸರಬರಾಜು ಆಗುತ್ತಿತ್ತು. ಯಂತ್ರಾಗಾರಕ್ಕೆ ಹಾನಿಯಾದ ವಿಚಾರ ತಿಳಿದ ತಕ್ಷಣ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುರ್ತು ಪ್ರವಾಸ ಕೈಗೊಂಡಿದ್ದು, ಟಿ.ಕೆ.ಹಳ್ಳಿಗೆ ಧಾವಿಸುತ್ತಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಇಂದು (ಸೆ 5, ಸೋಮವಾರ) ಮಧ್ಯಾಹ್ನ ಮಂಡ್ಯಕ್ಕೆ ತೆರಳಲಿದ್ದು, ಟಿಕೆ ಹಳ್ಳಿಯಲ್ಲಿರುವ ಬೆಂಗಳೂರು ನೀರು ಸರಬರಾಜು ಮಂಡಳಿಯ ಘಟಕಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ. ಮಳೆ ನೀರು ನುಗ್ಗಿ ಯಂತ್ರೋಪಕರಣಗಳು ಮುಳುಗಡೆಯಾಗಿರುವ ಕಾರಣ ಬೆಂಗಳೂರಿಗೆ ನೀರು ಸರಬರಾಜು ಬಂದ್ ಆಗುವ ಸಾಧ್ಯತೆಯಿದೆ. ವಿಧಾನಸೌಧ ಹಾಗೂ ಜ್ಞಾನಜ್ಯೋತಿ ಸಭಾಂಗಣದಲ್ಲಿ ಕೆಲ ಅಧಿಕೃತ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿರುವ ಮುಖ್ಯಮಂತ್ರಿ ಅಲ್ಲಿಂದ ನೇರವಾಗಿ ಮಂಡ್ಯಕ್ಕೆ ತೆರಳಲಿದ್ದಾರೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಜಾಲತಾಣದ ಪ್ರಕಾರ ಬೆಂಗಳೂರಿಗೆ ಕಾವೇರಿಯಿಂದ ಪ್ರಸ್ತುತ ಪ್ರತಿದಿನ 1,450 ದಶಲಕ್ಷ ಲೀಟರ್ ನೀರು ಸರಬರಾಜಾಗುತ್ತಿದೆ. 57 ನೆಲಮಟ್ಟದ ಜಲಾಶಯಗಳು ಹಾಗೂ 39 ಓವರ್​ಹೆಡ್​ ಟ್ಯಾಂಕ್​ಗಳು ಇವೆ. ಒಂದು ದಿನಕ್ಕೆ ಸರಾಸರಿ 10.15 ಲಕ್ಷ ಮನೆಗಳಿಗೆ ನೀರು ಸರಬರಾಜಾಗುತ್ತಿದೆ.

ಬೆಂಗಳೂರಿಗೆ ನೀರು ಪೂರೈಕೆ ಸಮಸ್ಯೆ: ಮುಖ್ಯಮಂತ್ರಿ ಪ್ರತಿಕ್ರಿಯೆ

ಮಂಡ್ಯದಲ್ಲಿ ಧಾರಾಕಾರ ಮಳೆಯಿಂದ ಟಿ.ಕೆ.ಹಳ್ಳಿ ಘಟಕದಲ್ಲಿ ತೊಂದರೆ ಆಗಿದೆ. ಟಿ.ಕೆ.ಹಳ್ಳಿ ಕುಡಿಯುವ ನೀರಿನ ಘಟಕಕ್ಕೆ ನಾನು ಭೇಟಿ ನೀಡುತ್ತೇನೆ. ಈಗಾಗಲೇ BWSSB ಸಿಬ್ಬಂದಿ ಮತ್ತು ಎಂಜಿನಿಯರ್​ಗಳು ಅಲ್ಲಿಗೆ ಹೋಗಿದ್ದಾರೆ. ಇಂದು ಸಂಜೆಯೊಳಗೆ ಎಲ್ಲಾ ಸಮಸ್ಯೆ ಬಗೆಹರಿಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನ ಮಹದೇವವಪುರ, ಬೊಮ್ಮನಹಳ್ಳಿಯಲ್ಲಿ ಹೆಚ್ಚು ಮಳೆ ಆಗಿದೆ. ಬಿಬಿಎಂಪಿ ಕಮಿಷನರ್​ ಜತೆಗೂ ಮಾತನಾಡಿದ್ದೇನೆ. ಎರಡು ಎಸ್​ಡಿಆರ್​ಎಫ್​ ತಂಡವನ್ನು ಸ್ಥಳಕ್ಕೆ ಕಳಿಸಲು ಸೂಚಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: Bangalore Rain: ಬೆಂಗಳೂರಿನಲ್ಲಿ ರಾತ್ರಿ ಸುರಿದ ಭಾರಿ ಮಳೆ: ಭಾಗಶಃ ಐಟಿ-ಬಿಟಿ ಕಂಪನಿಗಳಿಗೆ ರಜೆ ಘೋಷಣೆ

Published On - 11:20 am, Mon, 5 September 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?