ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಯಡವಟ್ಟು, ಬೆಂಗಳೂರು-ಮೈಸೂರು ಹೆದ್ದಾರಿ ಸರ್ವಿಸ್ ರಸ್ತೆಗಳಲ್ಲಿನ ಅಪಘಾತಗಳು ಹೆಚ್ಚಳ

ಶ್ರೀರಂಗಪಟ್ಟಣ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಯಡವಿಟ್ಟಿನಿಂದಾಗಿ ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆಗಳಲ್ಲಿನ ಅಪಘಾತಗಳು ಸಂಭವಿಸುತ್ತಿವೆ. ಒಂದು ಕಡೆ ಸರ್ವಿಸ್ ರಸ್ತೆಯಲ್ಲಿ ಅವೈಜ್ಞಾನಿಕ ಹಂಪ್​ಗಳ ನಿರ್ಮಾಣ ಮತ್ತೊಂದು ಕಡೆ ಹಂಪ್​ಗಳನ್ನು ನಿರ್ಮಾಣ ಮಾಡದೇ ಇರುವುದೇ ಅಪಘಾತಗಳಿಗೆ ಕಾರಣವಾಗುತ್ತಿದೆ.

ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಯಡವಟ್ಟು, ಬೆಂಗಳೂರು-ಮೈಸೂರು ಹೆದ್ದಾರಿ ಸರ್ವಿಸ್ ರಸ್ತೆಗಳಲ್ಲಿನ ಅಪಘಾತಗಳು ಹೆಚ್ಚಳ
ಬೆಂಗಳೂರು-ಮೈಸೂರು ಹೆದ್ದಾರಿ ಸರ್ವಿಸ್ ರಸ್ತೆಗಳಲ್ಲಿನ ಅಪಘಾತಗಳು ಹೆಚ್ಚಳ
Follow us
ಪ್ರಶಾಂತ್​ ಬಿ.
| Updated By: ಸಾಧು ಶ್ರೀನಾಥ್​

Updated on: Dec 06, 2023 | 12:33 PM

ಅಧಿಕಾರಿಗಳ ಯಡವಟ್ಟಿನಿಂದಾಗಿ ಸರ್ವೀಸ್ ರಸ್ತೆಗಳಲ್ಲಿ ದಿನದಿಂದ ದಿನಕ್ಕೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅಂಡರ್ ಪಾಸ್ ಗಳ ಬಳಿ ಸರ್ವಿಸ್ ರಸ್ತೆಯಲ್ಲಿ ಹಂಪ್​ಗಳು ಹಾಗೂ ಬ್ಯಾರಿಕೇಡ್ ನಿರ್ಮಾಣ ಮಾಡದೇ ಇರುವ ಹಿನ್ನೆಲೆ ಭೀಕರ ಅಪಘಾತಗಳು ಸಂಭವಿಸುತ್ತಿವೆ. ಎರಡು ದಿನಗಳಲ್ಲಿ ಸರ್ವಿಸ್ ರಸ್ತೆಯಲ್ಲಿ (Bangalore-Mysuru Highway service roads ) ನಡೆದ ಭೀಕರ ಅಪಘಾತ (Accident) ಎಂತವರ ಎದೆ ಜಲ್ ಎನಿಸುತ್ತದೆ. ಈ ದೃಶ್ಯ ಕೂಡ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಹೌದು ಆ ಎರಡು ದೃಶ್ಯಗಳನ್ನ ನೋಡಿದ್ರೆ ಎದೆ ಜಲ್ ಅನಿಸುತ್ತಿದೆ. ಒಂದೇ ಸ್ಥಳದಲ್ಲೇ ಎರಡು ಭೀಕರ ಅಪಘಾತಗಳು ನಡೆದಿದ್ದವು. ಅದು ಎಂತಹವರಿಗೂ ನಡುಕ ಹುಟ್ಟಿಸುತ್ತದೆ. ಒಂದು ದೃಶ್ಯದಲ್ಲಿ ಭೀಕರ ಅಪಘಾತ ಜಸ್ಟ್ ಮಿಸ್ ಆಗಿ ಕೆಎಸ್ ಆರ್ ಟಿಸಿ ಬಸ್ ನಲ್ಲಿದ್ದ ಪ್ರಯಾಣಿಕರು ಬಚಾವ್ ಆಗಿದ್ರೆ, ಮತ್ತೊಂದು ದೃಶ್ಯದಲ್ಲಿ ಒಬ್ಬ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿ ಮತ್ತೊಬ್ಬ ಬೈಕ್ ಸವಾರನಿಗೆ ಕೆ ಎಸ್ ಆರ್ ಟಿಸಿ ಬಸ್ ಗುದ್ದೆ ಬಿಡುತ್ತದೆ.

ಅಂದಹಾಗೆ ಈ ರೀತಿಯ ಭೀಕರ ಅಪಘಾತಗಳು ಸಂಭವಿಸಿದ್ದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಟಿಎಂ ಹೊಸೂರು ಗ್ರಾಮದ ಬಳಿ. ಹೌದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಯಡವಿಟ್ಟಿನಿಂದಾಗಿ ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆಗಳಲ್ಲಿನ ಅಪಘಾತಗಳು ಸಂಭವಿಸುತ್ತಿವೆ. ಒಂದು ಕಡೆ ಸರ್ವಿಸ್ ರಸ್ತೆಯಲ್ಲಿ ಅವೈಜ್ಞಾನಿಕ ಹಂಪ್​ಗಳ ನಿರ್ಮಾಣ ಮತ್ತೊಂದು ಕಡೆ ಹಂಪ್​ಗಳನ್ನು ನಿರ್ಮಾಣ ಮಾಡದೇ ಇರುವುದೇ ಅಪಘಾತಗಳಿಗೆ ಕಾರಣವಾಗುತ್ತಿದೆ.

ಅದರಲ್ಲೂ ಸರ್ವಿಸ್ ರಸ್ತೆಗಳಲ್ಲಿ ಅಂಡರ್ ಪಾಸ್ ಗಳ ಬಳಿ ಹಂಪ್​ಗಳು ಅಥವಾ ಬ್ಯಾರಿಕೇಡ್ ಗಳು ನಿರ್ಮಾಣ ಮಾಡಿಲ್ಲ. ಹೀಗಾಗಿಯೇ ವೇಗವಾಗಿ ಬರುವ ವಾಹನಗಳು ಅಂಡರ್ ಪಾಸ್ ನಲ್ಲಿ ಬರುವ ವಾಹನಗಳಿಗೆ ಗುದ್ದುತ್ತಿವೆ. ಈ ರೀತಿಯ ಹಲವು ಅಪಘಾತಗಳು ಕಳೆದ ಹಲವು ದಿನಗಳಿಂದ ಸಂಭವಿಸುತ್ತಿವೆ. ಹೀಗಾಗಿ ಸ್ಥಳೀಯರಿಗೂ ಕೂಡ ಆತಂಕ ಎದುರಾಗಿದೆ.

ಅಂದಹಾಗೆ ನೂತನ ದಶಪಥ ಹೆದ್ದಾರಿ ನಿರ್ಮಾಣ ಮಾಡಿದ ನಂತರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ದುಬಾರಿ ಟೋಲ್ ಸಂಗ್ರಹ ಕೂಡ ಮಾಡುತ್ತಿವೆ. ಅಲ್ಲದೆ ಬೈಕ್, ಆಟೋ, ಟ್ರಾಕ್ಟರ್ ಗಳಿಗೆ ನಿಷೇಧ ಹೇರಿದೆ. ಹೀಗಾಗಿ ಬಹುತೇಕ ವಾಹನಗಳು ಸರ್ವೀಸ್ ರಸ್ತೆಯಲ್ಲಿ ಸಂಚರಿಸುತ್ತಿವೆ. ಮತ್ತೊಂದು ಕಡೆ ಹೆದ್ದಾರಿಯಲ್ಲಿ ಟೋಲ್ ದರ ಹೆಚ್ಚಳ ಎಂದು ಕಾರು, ಬಸ್ ಗಳು ಕೂಡ ಸರ್ವಿಸ್ ರಸ್ತೆಯಲ್ಲಿ ಸಂಚಾರ ಮಾಡುತ್ತಿವೆ.

ಇದನ್ನೂ ಓದಿ: ಹಲವಾರು ವರ್ಷಗಳಿಂದ ಟಾರ್ ಕಾಣದ ಸರ್ವೀಸ್ ರಸ್ತೆ; ಬಾಯ್ತೆರೆದು ಕುಳಿತ ಗುಂಡಿಗಳು, ಜೀವ ಪಣಕ್ಕಿಟ್ಟು ಸಂಚಾರ

ಈ ಹಿಂದೆ ಬೇಕಾಬಿಟ್ಟಿಯಾಗಿ ಅವೈಜ್ಞಾನಿಕವಾಗಿ ಹಂಪ್​ಗಳ ನಿರ್ಮಾಣ ಮಾಡಲಾಗಿತ್ತು. ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬಹುತೇಕ ಹಮ್ಸ್ ಗಳನ್ನ ತೆಗೆಯಲಾಗಿದೆ. ಆದರೆ ವೈಜ್ಞಾನಿಕ ಹಮ್ಸ್ ಗಳನ್ನ ಗ್ರಾಮೀಣ ಪ್ರದೇಶ, ಅಂಡರ್ ಪಾಸ್ ಗಳ ಬಳಿ ನಿರ್ಮಾಣ ಮಾಡದೇ ಇರುವುದರಿಂದ ಸರ್ವಿಸ್ ರಸ್ತೆಯಲ್ಲಿ ವೇಗವಾಗಿ ವಾಹನಗಳ ಸಂಚಾರ ಕೂಡ ಇದ್ದು, ಅಪಘಾತಗಳಿಗೆ ಕಾರಣವಾಗಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರೋ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ, ಕಳೆದ ಆರು ತಿಂಗಳಿಂದ ಸಾಕಷ್ಟು ಸುಧಾರಣೆ ಮಾಡಿದ್ದೇವೆ. ಈ ಬಗ್ಗೆ ಕೂಡ ಕ್ರಮವಹಿಸಲಾಗುತ್ತದೆ ಎಂದಿದ್ದಾರೆ.

ಒಟ್ಟಾರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಯಡವಟ್ಟು ಸಾಕಷ್ಟು ಅಪಘಾತಗಳಿಗೆ ಕಾರಣವಾಗುತ್ತಿದೆ. ಇನ್ನಾದ್ರು ಸಂಬಂಧಪಟ್ಟವರು ಮುಗ್ದ ಜೀವಗಳ ಬಲಿ ಪಡೆಯುವ ಮೊದಲು ಸೂಕ್ತ ಕ್ರಮವಹಿಸಬೇಕಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ