ಜಾಮಿಯಾ ಮಸೀದಿಯಲ್ಲಿ ಆಂಜನೇಯನ ಪೂಜೆಗೆ ಅವಕಾಶ ನೀಡುವಂತೆ ಹಿಂದೂ ಕಾರ್ಯಕರ್ತರಿಂದ ಮಂಡ್ಯ ಜಿಲ್ಲಾಧಿಕಾರಿಗೆ ದೂರು

ಜಾಮಿಯಾ ಮಸೀದಿಯಲ್ಲಿ ಆಂಜನೇಯನ ಪೂಜೆಗೆ ಅವಕಾಶ ನೀಡುವಂತೆ ಹಿಂದೂ ಕಾರ್ಯಕರ್ತರು ಮಂಡ್ಯ ಜಿಲ್ಲಾಧಿಕಾರಿ ಅವರಿಗೆ ದೂರು ನೀಡಿದ್ದಾರೆ.

ಜಾಮಿಯಾ ಮಸೀದಿಯಲ್ಲಿ ಆಂಜನೇಯನ ಪೂಜೆಗೆ ಅವಕಾಶ ನೀಡುವಂತೆ ಹಿಂದೂ ಕಾರ್ಯಕರ್ತರಿಂದ ಮಂಡ್ಯ ಜಿಲ್ಲಾಧಿಕಾರಿಗೆ ದೂರು
ಜಾಮಿಯಾ ಮಸೀದಿ ಶ್ರೀಲಂಗ ಪಟ್ಟಣ
Follow us
TV9 Web
| Updated By: ವಿವೇಕ ಬಿರಾದಾರ

Updated on:May 14, 2022 | 9:54 AM

ಮಂಡ್ಯ: ಜಿಲ್ಲೆಯ ಶ್ರೀರಂಗ ಪಟ್ಟಣದ (Shriranga Pattana) ಜಾಮಿಯಾ ಮಸೀದಿ (Jamiya Mosque) ವಿವಾದ ಮತ್ತೆ ಮುನ್ನಲೆಗೆ ಬಂದಿದೆ. ಜಾಮಿಯಾ ಮಸೀದಿಯಲ್ಲಿ ಆಂಜನೇಯನ ಪೂಜೆಗೆ ಅವಕಾಶ ನೀಡುವಂತೆ ಹಿಂದೂ ಕಾರ್ಯಕರ್ತರು ಮಂಡ್ಯ ಜಿಲ್ಲಾಧಿಕಾರಿ ಅವರಿಗೆ ದೂರು ನೀಡಿದ್ದಾರೆ. ಮೂಡಲ ಬಾಗಿಲು ಆಂಜನೇಯ ದೇವಸ್ಥಾನದ ಮೇಲೆ ಮಸೀದಿ ಮಾಡಲಾಗಿದೆ. ಈ ಬಗ್ಗೆ ಅನೇಕ ಇತಿಹಾಸಕಾರರು ದಾಖಲೆ ಉಲ್ಲೇಖ ಮಾಡಿದ್ದಾರೆ.

ಸ್ವತಃ ಟಿಪ್ಪು ಪರ್ಶಿಯಾದ ಖಲೀಫ್ ಗೆ ಬರೆದ ಪತ್ರದಲ್ಲಿ ಹೇಳಿಕೊಂಡಿದ್ದಾರೆ. ಮಸೀದಿ ಆಂಜನೇಯನ ದೇವಾಲಯವಾಗಿತ್ತು ಎಂಬುದಕ್ಕೆ ಇಂದಿಗೂ ಕುರುಹುಗಳಿದ್ದು, ಕಲ್ಯಾಣಿ ಸೇರಿದಂತೆ ಹಿಂದು ದೇವರುಗಳ ಕೆತ್ತನೆ ಕಾಣುತ್ತಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಪುರಾತತ್ವ ಇಲಾಖೆ ದಾಖಲೆಗಳನ್ನು ಪರಿಶೀಲನೆ ಮಾಡಬೇಕು. ಕಾನೂನು ಬದ್ದವಾಗಿ ಆಂಜನೇಯನ ಪೂಜೆಗೆ ಅವಕಾಶ ನೀಡಬೇಕು. ಆಂಜನೇಯನ ಪೂಜೆಗೆ ಅವಕಾಶ ನೀಡದಿದ್ರೆ ಕಾನೂನು ಹೋರಾಟ ಮಾಡುವುದಾಗಿ ಕರ್ನಾಟಕ ನರೇಂದ್ರ ಮೋದಿ ವಿಚಾರ ಮಂಚ್ ಪದಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಟಿಪ್ಪು ಸುಲ್ತಾನ್ (Tippu Sultan) ಕಾಲದಲ್ಲಿ ಕೋಟೆ ಆಂಜನೇಯ ಸ್ವಾಮಿಯ ದೇವಾಲಯವನ್ನ ಕೆಡವಲಾಗಿತ್ತು. ದೇವಾಲಯವನ್ನ ಕೆಡವಿ ಅಲ್ಲಿ ಮಸೀದಿಯನ್ನ ನಿರ್ಮಾಣ ಮಾಡಲಾಗಿದೆ. ಮಸೀದಿಯ ಓಳಗಡೆ ಹೊಯ್ಸಳರ ಲಾಂಚನಗಳಿವೆ ಕಂಬ ಹಾಗೂ ಕಲ್ಯಾಣಿ ಸಹವಿದೆ. ಪ್ರತಿ ಕಂಬದಲ್ಲಿ ಗಂಡಬೇರುಂಡ ಹಾಗೂ ಸಿಂಹದ ಲಾಂಚನವಿದೆ. ಮೈಸೂರು ಅರಸರ ಆಳ್ವಿಕೆಯ ಹಿಂದಯೇ ಈ ದೇವಾಲಯವನ್ನ ಕಟ್ಟಲಾಗಿತ್ತು. ಟಿಪ್ಪು ಆಳ್ವಿಕೆಯಲ್ಲಿ ಕೋಟೆ ಆಂಜನೇಯ ಸ್ವಾಮಿ ದೇವಾಲಯವನ್ನ ಮಸೀದಿಯನ್ನಾಗಿ ಪರಿವರ್ತಿಸಲಾಗಿದೆ. ಈ ಹಿಂದೆ ಇದು ದೇವಾಲಯವಾಗಿತ್ತು ಅನ್ನೋದಕ್ಕೆ ಸಾಕಷ್ಟು ಸಾಕ್ಷಿಗಳಿವೆ. ಪ್ರತಿ ಕಂಬದ ಮೇಲಿನ ಶಿಲ್ಪ ಕಲೆಗಳು ಇದನ್ನ ಸಾರಿ ಹೇಳುತ್ತೆ. ಹನುಮ ಜಯಂತಿ ದಿನ 6 ಲಕ್ಷ ಮಾಲಾಧಾರಿಗಳು ಜಾಮೀಯಾ ಮಸೀದಿಗೆ ತೆರಳುತ್ತೇವೆ. ಟಿಪ್ಪು ಸುಲ್ತಾನ್ ಆಳ್ವಿಕೆಯಲ್ಲಿ ಶ್ರೀರಂಗ ಪಟ್ಟಣದಲ್ಲಿದ್ದ ನೂರಾರು ದೇವಾಲಯಗಳನ್ನ ಹೊಡೆದು ಹಾಕಲಾಗಿದೆ ಎಂದು ಟಿವಿ9 ಗೆ ರುಷಿ ಕುಮಾರ ಸ್ವಾಮಿ ಹೇಳಿಕೆ ನೀಡಿದ್ದಾರೆ.

1784 ರಲ್ಲಿ ದೇವಾಸ್ಥಾನವನ್ನ ಹೊಡೆದು ಅದರ ಮೇಲೆ ಮಸೀದಿಯ ಗೋಪುರ ನಿರ್ಮಾಣ ಮಾಡಲಾಗಿದೆ. 1784 ಹಿಂದೆ ಅದು ಪ್ರಸಿದ್ದ ಕೋಟೆ ಆಂಜನೇಯ (ಮೂಡಲ ಆಂಜನೇಯ) ಶ್ರೀರಂಗ ಪಟ್ಟದ ರಂಗನಾಥ ಸ್ವಾಮಿಯ ಅಷ್ಟ ದಿಕ್ಕುಗಳಲ್ಲು ಹನುಮನ ದೇವಾಲಯಗಳಿವೆ. ಮುಖ್ಯವಾಗಿದ್ದದ್ದ ಮೂಡಲ ಬಾಗಿಲು ಆರ್ಕ್ಯಲಾಜೀಕಲ್ ಇಲಾಖೆ 1935 ದಾಖಲೆ ಮಾಡುತ್ತೆ. ಪ್ರಾಚೀನ ದೇವಸ್ಥಾನವನ್ನ ಹೊಡೆದು ಟಿಪ್ಪು ಸುಲ್ತಾನ್ ಜಾಮೀಯ ಹೆಸರನ್ನಿಟ್ಟಿದ್ದಾನೆ.

ರಾಜ್ಯದ ಇನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 9:54 am, Sat, 14 May 22

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ