AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ವರ್ಷಗಳಿಂದ ಯುವತಿಗೆ ನಿರಂತರ ಕಿರುಕುಳ, 7 ಮದುವೆ ರದ್ದು! ಹಿಂದೂ ಮುಖಂಡನ ವಿರುದ್ಧ ಮಂಡ್ಯದಲ್ಲಿ ಎಫ್​ಐಆರ್

ಮಂಡ್ಯದಲ್ಲಿ ಯುವತಿಯೊಬ್ಬರು ಹಿಂದೂ ಮುಖಂಡ ಚಿಕ್ಕಬಳ್ಳಿ ಬಾಲಕೃಷ್ಣನಿಂದ ನಾಲ್ಕು ವರ್ಷಗಳಿಂದ ಕಿರುಕುಳಕ್ಕೆ ಒಳಗಾಗಿರುವುದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದು, ಎಫ್​ಐಆರ್ ದಾಖಲಿಸಲಾಗಿದೆ. ಮದುವೆಯಾಗಲು ನಿರಾಕರಿಸಿದ್ದಕ್ಕೆ ಆರೋಪಿ ಚಿಕ್ಕಬಳ್ಳಿ ಬಾಲಕೃಷ್ಣ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಆರೋಪಿಯು ಆಕೆಯ ಮದುವೆಗಳನ್ನು ರದ್ದುಗೊಳಿಸಿದ್ದು, ಆ್ಯಸಿಡ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

4 ವರ್ಷಗಳಿಂದ ಯುವತಿಗೆ ನಿರಂತರ ಕಿರುಕುಳ, 7 ಮದುವೆ ರದ್ದು! ಹಿಂದೂ ಮುಖಂಡನ ವಿರುದ್ಧ ಮಂಡ್ಯದಲ್ಲಿ ಎಫ್​ಐಆರ್
ಆರೋಪಿ ಚಿಕ್ಕಬಳ್ಳಿ ಬಾಲಕೃಷ್ಣ ಹಾಗೂ ಎಫ್​ಐಆರ್ ಪ್ರತಿ
ದಿಲೀಪ್​, ಚೌಡಹಳ್ಳಿ
| Edited By: |

Updated on: Jun 02, 2025 | 9:50 AM

Share

ಮಂಡ್ಯ, ಜೂನ್ 2: ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವತಿಯ ಬೆನ್ನುಬಿದ್ದ ಹಿಂದೂ ಮುಖಂಡನೊಬ್ಬ (Hindu Leader) ನಿರಂತರ ನಾಲ್ಕು ವರ್ಷಗಳಿಂದ ಆಕೆಗೆ ಕಿರುಕುಳ ನೀಡಿದ್ದಾನೆ. ಅಲ್ಲದೆ, ಆಕೆಗೆ ನಿಶ್ಚಯವಾಗುತ್ತಿದ್ದ ಮದುವೆಯನ್ನೆಲ್ಲ ರದ್ದು ಮಾಡಿಸಿದ್ದಲ್ಲದೆ, ಆ್ಯಸಿಡ್ ದಾಳಿ (Acid Attack threat) ಮಾಡುವ ಬೆದರಿಕೆಯೊಡ್ಡಿದ್ದ ಆರೋಪದಲ್ಲಿ ಸದ್ಯ ಆತನ ವಿರುದ್ಧ ಮಂಡ್ಯದ (Mandya) ಕೆರಗೋಡು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತೆ ನೀಡಿದ್ದ ದೂರಿನ ಆಧಾರದಲ್ಲಿ ಹಿಂದೂ ಮುಖಂಡ ಚಿಕ್ಕಬಳ್ಳಿ ಬಾಲಕೃಷ್ಣ ವಿರುದ್ಧ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ.

4 ವರ್ಷಗಳ ಹಿಂದೆ ಸಂತ್ರಸ್ತೆ ಹಾಗೂ ಬಾಲಕೃಷ್ಣಗೆ ಮದುವೆ ನಿಶ್ಚಯವಾಗಿತ್ತು. ಆ ವೇಳೆ, ಸಂತ್ರಸ್ತೆಯು ಬಾಲಕೃಷ್ಣ ಜೊತೆಯಲ್ಲಿ ಫೋಟೋ ತೆಗೆಸಿಕೊಂಡಿದ್ದರು. ಆದರೆ, ಬಾಲಕೃಷ್ಣ ಹಲವು ಸುಳ್ಳುಗಳನ್ನು ಹೇಳಿ ಮದುವೆ ನಿಶ್ಚಯ ಮಾಡಿಕೊಂಡಿದ್ದು ನಂತರ ಸಂತ್ರಸ್ತೆಯ ಅರಿವಿಗೆ ಬಂದಿತ್ತು. ಹೀಗಾಗಿ ಮದುವೆ ನಿರಾಕರಿಸಿದ್ದರು. ಇದು ಬಾಲಕೃಷ್ಣನನ್ನು ಕೆರಳಿಸಿತ್ತು.

ಹಳೇ ಫೋಟೊ ತೋರಿಸಿ ವಿವಾಹ ರದ್ದು ಮಾಡುತ್ತಿದ್ದ ಬಾಲಕೃಷ್ಣ

ಅದಾದ ನಂತರ ಸಂತ್ರಸ್ತೆಗೆ ಬೇರೆ ಮದುವೆ ಪ್ರಸ್ತಾಪಗಳು ಬಂದಿದ್ದವು. ಆದರೆ, ಆರೋಪಿ ಬಾಲಕೃಷ್ಣ ಹಳೇ ಫೋಟೋ ತೋರಿಸಿ ಚಾಡಿ ಹೇಳಿ ವಿವಾಹ ರದ್ದಾಗುವಂತೆ ಮಾಡುತ್ತಿದ್ದ. ಇಷ್ಟೇ ಅಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾನೆಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅಷ್ಟೇ ಅಲ್ಲದೆ, ಆ್ಯಸಿಡ್ ಎರಚುವುದಾಗಿಯೂ, ಕೊಲೆ ಮಾಡುವುದಾಗಿಯೂ ಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ
Image
ಬಿಬಿಎಂಪಿ ಶುಭ ಸುದ್ದಿ: ಬಿ ಖಾತಾ ಬದಲಿಗೆ ಎ ಖಾತಾ ನೀಡುವ ಸುಳಿವು!
Image
ಐತಿಹಾಸಿಕ ಸದಾಶಿವಗಡ ಕೊಟೆಯ ಮೇಲೆ ಜಂಗಲ್ ಲಾಡ್ಜ್ ಕಣ್ಣು: ಸ್ಥಳೀಯರ ವಿರೋಧ
Image
ಗರ್ಭಿಣಿ ಪ್ರೇಯಸಿ ಜತೆ ಸೇರಿ ಪ್ರಿಯಕರನಿಂದ ಕಳ್ಳತನ, ಪೊಲೀಸ್ ಬಲೆಗೆ ಲವರ್ಸ್
Image
ವಿದ್ಯಾರ್ಥಿಗಳು KSRTC ಬಸ್ ಪಾಸ್ ವಿತರಣೆ ಆರಂಭ: ಅರ್ಜಿ ಸಲ್ಲಿಕೆ ಹೇಗೆ?

‘ನೀನು ಬೇರೆಯವರನ್ನು ಮದುವೆಯಾಗಲು ಬಿಡುವುದಿಲ್ಲ. ನಿನ್ನ ಮದುವೆ ಎಲ್ಲೇ ನಿಶ್ಚಯವಾದರೂ ಅಲ್ಲಿಗೆ ಬಂದು ನಿನ್ನ ಮದುವೆ ನಿಲ್ಲಿಸಿ ನಿನ್ನ ಬಗ್ಗೆ ಅಪಪ್ರಚಾರ ಮಾಡಿ ನಿನ್ನನ್ನು ಅಲ್ಲೇ ಕೊಲೆ ಮಾಡುತ್ತೆನೆಂದು ಹೆದರಿಸಿ ಆರೋಪಿಯು ಪ್ರಾಯ ಭಯ ಉಂಟು ಮಾಡಿರುತ್ತಾನೆ. ಸಾರ್ವಜನಿಕ ಸ್ಥಳದಲ್ಲಿ ನನ್ನನ್ನು ಬೈದು ಹಿಯಾಳಿಸಿ ಅವಮಾನ ಮಾಡಿರುತ್ತಾನೆ. ಆಗ ನನ್ನ ದೊಡ್ಡಮ್ಮ ಲಕ್ಷ್ಮಮ್ಮ ಮತ್ತು ಜತೆಗೆ ಬಂದಿದ್ದ ಚಿಕ್ಕಬಳ್ಳಿ ಗ್ರಾಮದ ಸಿಕೆ ಪದ್ಮ ರವರು ಅತನಿಗೆ ಬೈದು ಕಳುಹಿಸಿರುತ್ತಾರೆ’ ಎಂದೂ ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಮಂಡ್ಯ: ಮಿಮ್ಸ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಬಾಲಕಿ ಸಾವು, ವೈದ್ಯರ ನಿರ್ಲಕ್ಷ್ಯ ಆರೋಪ

ಹೀಗಾಗಿ ಬಾಲಕೃಷ್ಣನಿಂದ ರಕ್ಷಣೆ ಕೋರಿ ಹಾಗೂ ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ನೀಡಿದ ದೂರಿನಲ್ಲಿ ಸಂತ್ರಸ್ತೆ ಮನವಿ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ