ಮಂಡ್ಯ: ದೇಶಾದ್ಯಂತ ಇಂದು ಸಡಗರ ಸಂಭ್ರಮದಿಂದ ಗಣೇಶ ಚತುರ್ಥಿಯನ್ನ ಜನ ಆಚರಿಸುತ್ತಿದ್ದಾರೆ. ಮತ್ತೊಂದೆಡೆ ಈದ್ಗಾ ಮೈದಾನದ ವಿವಾದ ಕೋರ್ಟ್ ಮೆಟ್ಟಿಲೇರಿದೆ. ಆದ್ರೆ ಮಂಡ್ಯ ಜಿಲ್ಲೆ ಇಡೀ ದೇಶಕ್ಕೆ ಮಾದರಿಯಾಗಿದೆ. ಹಿಂದೂ ಹಾಗೂ ಮುಸ್ಲಿಮರು ಇಬ್ಬರು ಸೇರಿಕೊಂಡು ಗಣಪತಿ ಪ್ರತಿಷ್ಠಾಪನೆ ಮಾಡುವ ಮೂಲಕ ಸಹೋದರತ್ವಕ್ಕೆ ಕಾರಣವಾಗಿದ್ದಾರೆ.
ಮಂಡ್ಯದ ಬೀಡಿ ಕಾಲೋನಿಯಲ್ಲಿ ಹಿಂದೂ ಮುಸ್ಲೀಮರು ಒಟ್ಟಿಗೆ ಸೇರಿ ವಿಘ್ನವಿನಾಶಕನಿಗೆ ಒಟ್ಟಾಗಿ ಪೂಜೆ ಸಲ್ಲಿಸುವ ಮೂಲಕ ಮಾದರಿಯಾಗಿದ್ದಾರೆ. ಪೂಜೆಯ ಬಳಿಕ ಪ್ರಸಾದ ಹಾಗೂ ನೈವೇದ್ಯವನ್ನ ಪರಸ್ಪರ ತಿನ್ನಿಸಿ ಖುಷಿ ಪಟ್ರು. ಇದೇ ವೇಳೆ ಸ್ಥಳಕ್ಕೆ ಬಂದ ಮಂಡ್ಯ ಎಸ್.ಪಿ ಯತೀಶ್ ವಿಘ್ನವಿನಾಶಕನ ದರ್ಶನ ಪಡೆದು ಪ್ರಸಾದ ತಿಂದು ಸಂತಸ ವ್ಯಕ್ತ ಪಡಿಸಿದ್ರು. ಇದುವರೆಗೂ ಮಂಡ್ಯದಲ್ಲಿ ಕೋಮು ಗಲಭೆಯಾಗಿಲ್ಲ ಎಲ್ಲರು ಅಣ್ಣ ತಮ್ಮರಂತೆ ವಾಸಿಸುತ್ತಿದ್ದಾರೆ ಇವರ ಈ ಸಹಬಾಳ್ವೆ ದೇಶಕ್ಕೆ ಮಾದರಿ ಎಂದು ಹೇಳುವುದರ ಮೂಲಕ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಶುಭಾಶಯವನ್ನ ತಿಳಿಸಿದ್ರು.
ಇಲ್ಲಿ ಅನೇಕ ವರ್ಷಗಳಿಂದ ಮುಸ್ಲಿಂ ಬಾಂಧವರು ಗಣೇಶನ ಪ್ರತಿಷ್ಠಾಪಿಸಿ, ಭಾವೈಕ್ಯತೆಯ ಸಂದೇಶ ನೀಡುತ್ತಿದ್ದಾರೆ
ಗದಗ: ದಿನನಿತ್ಯ ಜಾತಿ ಜಾತಿಗಳ ಹೆಸರಿನಲ್ಲಿ ಗದ್ದಲ, ಗಲಾಟೆಗಳು ನಡೆಯುತ್ತಲೇ ಇರುತ್ತವೆ. ಆದರೆ ಗದಗ ಜಿಲ್ಲೆಯ ಗ್ರಾಮವೊಂದರಲ್ಲಿ ಹಲವು ವರ್ಷಗಳಿಂದ ಮುಸ್ಲಿಂ ಬಾಂಧವರು ಗಣೇಶನ ಪ್ರತಿಷ್ಠಾಪನೆ ಮಾಡುವ ಮೂಲಕ ಭಾವೈಕ್ಯತೆಯ ಸಂದೇಶ ಸಾರುತ್ತಿದ್ದಾರೆ. ಗಣಪತಿ ಪ್ರತಿಷ್ಠಾಪನೆ ಬಳಿಕ ನಿತ್ಯವೂ ಹಿಂದೂ ಮುಸ್ಲಿಂ ಮಹಿಳೆಯರು, ಪುರುಷರು ಒಟ್ಟುಗೂಡಿ ಪೂಜೆ ಮಾಡ್ತಾರೆ. ಆ ಮುಸ್ಲಿಂ ಬಾಂಧವರು ಪೂಜೆ ಮಾಡೋ ಗಣೇಶ್ ಎಲ್ಲಿ ಅಂತಿರಾ.. ಈ ವಿಶೇಷ ವರದಿ ಓದಿ…
ಕಳಸಾಪುರದ ಗಣೇಶೋತ್ಸವ: ರಾಜ್ಯದ ಹಲವೆಡೆ ಈಗ ಕೋಮು ದಳ್ಳುರಿ ಹೊತ್ತಿ ಉರಿಯುತ್ತಿದೆ. ವರ್ಷಗಳಿಂದ ಒಂದಿಲ್ಲೊಂದು ವಿಷಯಕ್ಕೆ ಕೋಮು ಭಾವನೆ ಕೆರಳಿಸುವ ಪ್ರಕರಣಗಳು ನಡೀಯುತ್ತಲೇ ಇವೆ. ಆದ್ರೆ, ಈ ಭಾವೈಕ್ಯತೆಯ ಗಣೇಶ್ ಸ್ಥಪನೆ ಮಾಡಿದ್ದು ಗದಗ ತಾಲೂಕಿನ ಕಳಸಾಪೂರ ಗ್ರಾಮದಲ್ಲಿ ಮಾತ್ರ ಇದಕ್ಕೆಲ್ಲವೂ ಅಪವಾದವಾಗಿದೆ (Kalasapur Ganeshotsav). ಈ ಗ್ರಾಮದಲ್ಲಿ ಹಿಂದೂ-ಮುಸ್ಲಿಂ ಬಾಂಧವರು ಜಂಟಿಯಾಗಿ ಗಣೇಶ ಪ್ರತಿಷ್ಠಾಪನೆ ಮಾಡ್ತಾರೆ. ಸತತ 8 ವರ್ಷದಿಂದ ಅಂಜುಮಾನ್ ಏ -ಇಸ್ಲಾಂ ಹಾಗೂ ಈಶ್ವರ ದೇವಾಲಯ ಕಮಿಟಿಯವರು ಜಂಟಿಯಾಗಿ ಏಕದಂತನನ್ನ ಪೂಜೆ ಮಾಡ್ತಾರೆ. ಒಟ್ಟಿಗೆ ಹಬ್ಬ ಆಚರಿಸೋ ಮೂಲಕ ಭಾವೈಕ್ಯತೆಗೆ ಸಾಕ್ಷಿಯಾಗಿದ್ದಾರೆ.
ಜಾತಿ ಬೇಧ ಮರೆತು ಇಲ್ಲಿ 11 ದಿನಗಳ ಕಾಲ ವಿನಾಯಕನಿಗೆ ಸಾಮೂಹಿಕವಾಗಿ ಪೂಜೆ ಸಲ್ಲಿಸುತ್ತಾರೆ. ಹಿಂದೂ-ಮುಸ್ಲಿಂ ಸಮಾಜದ ಮಹಿಳೆಯರು ಪೂಜೆಯಲ್ಲಿ ಭಾಗಿಯಾಗ್ತಾರೆ. ಇದಕ್ಕೆಲ್ಲಾ ಕಾರಣವಾಗಿರೋ ಅಂಜುಮಾನ್ ಹಾಗೂ ಈಶ್ವರ ದೇವಾಲಯದ ಕಮಿಟಿ ಸದಸ್ಯರು. ಅದರಲ್ಲೂ ದೇವನೊಬ್ಬ ನಾಮ ಹಲವು ಎಂಬ ನಂಬಿಕೆಯಲ್ಲಿ ಇಲ್ಲಿನ ಮುಸ್ಲಿಂ ಬಾಂಧವರು, ಹಿಂದೂಗಳ ಜೊತೆ ಸೇರಿ ವಿಘ್ನನಿವಾರಕನನ್ನ ಪ್ರತಿಷ್ಠಾಪನೆ ಮಾಡಿದ್ದಾರೆ.
Published On - 3:20 pm, Wed, 31 August 22