Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಎರಡು ಕಾರುಗಳ ನಡುವೆ ಭೀಕರ ಅಪಘಾತ: ನಾಲ್ವರ ಸಾವು

ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ‌ ನಾಗಮಂಗಲ ತಾಲೂಕಿನ ಎ.ನಾಗತಿಹಳ್ಳಿ ಬಳಿ ನಡೆದಿದೆ.

ಮಂಡ್ಯ: ಎರಡು ಕಾರುಗಳ ನಡುವೆ ಭೀಕರ ಅಪಘಾತ: ನಾಲ್ವರ ಸಾವು
ನಾಗಮಂಗಲ ತಾಲೂಕಿನ ಎ.ನಾಗತಿಹಳ್ಳಿ ಬಳಿ ರಸ್ತೆ ಅಪಘಾತ
Follow us
TV9 Web
| Updated By: ವಿವೇಕ ಬಿರಾದಾರ

Updated on:Dec 11, 2022 | 10:40 PM

ಮಂಡ್ಯ: ಎರಡು ಕಾರುಗಳ ನಡುವೆ ಅಪಘಾತ (Accident) ಸಂಭವಿಸಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ‌ ನಾಗಮಂಗಲ (Nagmangala) ತಾಲೂಕಿನ ಎ.ನಾಗತಿಹಳ್ಳಿ ಬಳಿ ನಡೆದಿದೆ. ಘಟನೆಯಲ್ಲಿ ಐವರಿಗೆ ಗಾಯಗಳಾಗಿವೆ. ಸದ್ಯ ಗಾಯಾಳುಗಳನ್ನು ಬೆಳ್ಳೂರು ಕ್ರಾಸ್‌ನಲ್ಲಿರುವ BGS ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನಿಂದ ಹಾಸನದ ಕಡೆಗೆ ಹೋಗುತ್ತಿದ್ದ ಇನೋವಾ ಕಾರು ಮತ್ತು ಹಾಸನದಿಂದ ಬೆಂಗಳೂರು ಕಡೆ ಬರುತ್ತಿದ್ದ ಸ್ವಿಫ್ಟ್‌ ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ. ಬಿಂಡಗನವಿಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಗೌರಿಬಿದನೂರಿನಲ್ಲಿ ಕ್ಯಾಂಟರ್​- ಆಟೋ ನಡುವೆ ಭೀಕರ ಅಪಘಾತ: ಮೂವರು ದುರ್ಮರಣ

ಚಿಕ್ಕಬಳ್ಳಾಫುರ: ಕ್ಯಾಂಟರ್​ ಹಾಗೂ ಆಟೋ ನಡುವೆ ಭೀಕರ ಅಪಘಾತ (accident) ಸಂಭವಿಸಿದ್ದು ಮೂವರು ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಗಡಿ ಭಾಗವಾದ ರಂಗನಹಳ್ಳಿ ಗೇಟ್​ ಬಳಿ ನಡೆದಿದೆ. ಕೊರಟಗೆರೆಯ ನಿವಾಸಿಗಳಾದ ಮೀಲಾನಿ(25), ವೃದ್ಧೆ ಜೈರಬಿ(70) ಸ್ಥಳದಲ್ಲೇ ವೃತಪಟ್ಟರೆ, ಆಟೋ‌ ಚಾಲಕ ಕಲಂದರ್ ಗೌರಿಬಿದನೂರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಜೊತೆಗೆ ಅರ್ಪ (5), ಅಸೀತಾ (3) ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಗೌರಿಬಿದನೂರು ತಾಲ್ಲೂಕಿನ ಅಲಕಾಪುರಕ್ಕೆ ಆಗಮಿಸಿ ಕೆಲಸ ಮುಗಿಸಿಕೊಂಡು ವಾಪಸ್ ಕೊರಟಗೆರೆಗೆ ತೆರಳುವ ವೇಳೆ ಅಪಘಾತವಾಗಿದೆ. ಘಟನಾ ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಹಾಗೂ ಗುಡಿಬಂಡೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಲಿಂಗರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ನುಗ್ಗಿದ ಸರ್ಕಾರಿ ಬಸ್

ಹಾವೇರಿ: ಸವಣೂರು ಹೊರವಲಯದ ಮೋತಿ ಕೆರೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ರಸ್ತೆ ಬದಿಗೆ ನುಗ್ಗಿದೆ. ಅದೃಷ್ಟವಶಾತ್ 20ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸವಣೂರು ಪಟ್ಟಣದಿಂದ ಗದಗ ಕಡೆ ಸಾರಿಗೆ ಬಸ್ ಹೊರಟಿತ್ತು. ರಾಜ್ಯ ಹೆದ್ದಾರಿ ಸಂಪೂರ್ಣ ಹಾಳಾಗಿದ್ದರಿಂದ ಅವಘಡ ಸಂಭವಿಸಿದೆ. ಸವಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Crime News: ಉಡುಪಿ ಸಬ್​ಜೈಲಿನಲ್ಲಿ ವಿಚಾರಣಾಧೀನ ಕೈದಿ ನೇಣುಬಿಗಿದುಕೊಂಡು ಆತ್ಮಹತ್ಯೆ

ಮನೆ ಮೇಲಿನ ವಿದ್ಯುತ್ ತಂತಿ ತಗುಲಿ ಯುವಕ ಸಾವು

ರಾಯಚೂರು: ಮನೆ ಮೇಲಿನ ವಿದ್ಯುತ್ ತಂತಿ ತಗುಲಿ ಯುವಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸಾಲಗುಂದ ಗ್ರಾಮದಲ್ಲಿ ನಡೆದಿದೆ. ರಾಜಶೇಖರ (28) ಮೃತ ಯುವಕ. ರಾಜಶೇಖರ್ ಮಳೆ ಹಿನ್ನೆಲೆ ಮನೆ ಬೆಳಕಿಂಡಿ ಮುಚ್ಚಲು ಹೋಗಿದ್ದನು. ಈ ವೇಳೆ ರಾಜಶೇಖರ್​​ಗೆ ಮನೆ ಮೇಲೆ ಹಾದು ಹೋಗಿದ್ದ ವಿದ್ಯುತ್ ತಂತಿ ತಗುಲಿದೆ. ಇದರಿಂದ ಯುವಕ ರಾಜಶೇಖರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸಿಂಧನೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:37 pm, Sun, 11 December 22

ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ