ಮಂಡ್ಯ, ಆಗಸ್ಟ್ 31: ದೇವಸ್ಥಾನದ ಎದುರು ಭಾಗದಲ್ಲಿ ಅಕ್ರಮವಾಗಿ ಮಸೀದಿಗೆ (Mosque) ರಸ್ತೆ ನಿರ್ಮಾಣ ಮಾಡಿದ ಆರೋಪದ ಮೇಲೆ ಹಿಂದೂಪರ ಸಂಘಟನೆಯ (Right-wing Organisation) ಸದಸ್ಯರು ಹಾಗೂ ಕೆಲ ಸ್ಥಳೀಯರು ಗುರುವಾರ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಭಜರಂಗ ಸೇನೆ ಮತ್ತು ಹಾಲಹಳ್ಳಿ ಸ್ಲಂ ಬೋರ್ಡ್‌ನ ಸದಸ್ಯರು ಎಂ ವಿಶ್ವೇಶ್ವರಯ್ಯ ಪ್ರತಿಮೆಯಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಮಂಜುನಾಥ್ ನೇತೃತ್ವದ ಹಿಂದೂಪರ ಸಂಘಟನೆಯವರು, ಮಸೀದಿಗೆ ಭೂಮಿ ಮಂಜೂರು ಮಾಡಿದ ಸ್ಥಳದಲ್ಲಿ ರಸ್ತೆ ನಿರ್ಮಿಸಬೇಕೇ ವಿನಃ ದೇವಸ್ಥಾನದ ಮುಂದೆ ಅಲ್ಲ ಎಂದು ಹೇಳಿದರು.
ಸಾರ್ವಜನಿಕ ಆಸ್ತಿಯಲ್ಲಿ ರಸ್ತೆ ನಿರ್ಮಿಸುವುದು ಸರಿಯಲ್ಲ ಎಂದು ಸಂಘಟನೆ ಆಕ್ಷೇಪ ವ್ಯಕ್ತಪಡಿಸಿದೆ. ಇದು ಯುವಕರ ನಡುವೆ ಘರ್ಷಣೆಗೆ ಕಾರಣವಾಗಬಹುದು. ಜಿಲ್ಲಾಧಿಕಾರಿಯವರು ಮಧ್ಯ ಪ್ರವೇಶಿಸಿ ನಿರ್ಮಾಣ ಹಂತದಲ್ಲಿರುವ ರಸ್ತೆಯನ್ನು ತೆರವುಗೊಳಿಸಬೇಕು ಎಂದು ಪ್ರತಿಭಟನಾ ನಿರತರು ಆಗ್ರಹಿಸಿದ್ದಾರೆ.
ಮಂಡ್ಯದ ಹಾಲಹಳ್ಳಿ ಸ್ಲಂ ಬೋರ್ಡ್ ಬಡವಾಣೆಯಲ್ಲಿರುವ ಕರುಮಾರಿಯಮ್ಮ ದೇವಸ್ಥಾನದ ಎದುರು ಮಸೀದಿ ರಸ್ತೆ ನಿರ್ಮಿಸಲಾಗುತ್ತಿದೆ.
ಇದನ್ನೂ ಓದಿ: ಕಾವೇರಿ ವಿವಾದ: ಕರ್ನಾಟಕ ಸರ್ಕಾರದ ವಿರುದ್ಧ ರೈತರ ಪ್ರತಿಭಟನೆ, ಅರೆಬೆತ್ತಲೆ ಮೆರವಣಿಗೆ; ಚಾಮರಾಜನಗರದಲ್ಲೂ ಹೋರಾಟ
ಮತ್ತೊಂದೆಡೆ, ತಮಿಳುನಾಡಿಗೆ ನೀರು ಬಿಡುತ್ತಿರುವುದರ ವಿರುದ್ಧ ಮಂಡ್ಯದಲ್ಲಿ ವಿವಿಧ ಸಂಘಟನೆಗಳ ಮತ್ತು ರೈತರ ಪ್ರತಿಭಟನೆ ತೀವ್ರಗೊಂಡಿದೆ. ವಾಹನ ಸಂಚಾರ ತಡೆಗೆ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರ ಯತ್ನಿಸಿದ್ದು, ಪೊಲೀಸರು ಅವರನ್ನು ತಡೆದು ಪಕ್ಕಕ್ಕೆ ಕರೆದೊಯ್ದರು. ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಧರಣಿ ವೇಳೆ ಘಟನೆ ನಡೆಯಿತು. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕಾವೇರಿ ಹೋರಾಟ ನಡೆಯುತ್ತಿತ್ತು. ಇದೇ ವೇಳೆ ಏಕಾಏಕಿ ಮೈಸೂರು – ಬೆಂಗಳೂರು ಹೆದ್ದಾರಿಯಲ್ಲಿ ಪ್ರತಿಭಟನಾಕಾರರು ಬಸ್ ತಡೆದಿದ್ದಾರೆ. ತಕ್ಷಣವೇ ಕಾರ್ಯಕರ್ತರನ್ನು ತಡೆದ ಪೊಲೀಸರು ಹೆದ್ದಾರಿ ತಡೆ ಹಾಗೂ ವಾಹನಗಳ ತಡೆಯದಂತೆ ಸೂಚನೆ ನೀಡಿದರು.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ