ಮಂಡ್ಯ: ಗ್ರಾಮದ ಅಪ್ರಾಪ್ತ ಬಾಲಕರಿಂದ ಕಿರುಕುಳ; ನೇಣಿಗೆ ಶರಣಾದ 15ರ ಬಾಲಕಿ

ಮಂಡ್ಯ (mandya) ತಾಲೂಕಿನ ಹನಕೆರೆ ಗ್ರಾಮದಲ್ಲಿ ಅಪ್ರಾಪ್ತ ಬಾಲಕರ ಕಿರುಕುಳಕ್ಕೆ ಮನನೊಂದು ‌15 ವರ್ಷದ ಬಾಲಕಿ ನೇಣಿಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ಮಗಳನ್ನು ಕಳೆದುಕೊಂಡು ಹೆತ್ತವರ ಆಕ್ರಂದನ ಮುಗಿಲುಮುಟ್ಟಿದ್ದು, ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯ: ಗ್ರಾಮದ ಅಪ್ರಾಪ್ತ ಬಾಲಕರಿಂದ ಕಿರುಕುಳ; ನೇಣಿಗೆ ಶರಣಾದ 15ರ ಬಾಲಕಿ
ಮೃತ ಬಾಲಕಿ ಇಂಪನ
Follow us
ಪ್ರಶಾಂತ್​ ಬಿ.
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 01, 2024 | 3:05 PM

ಮಂಡ್ಯ, ಸೆ.01: ಅಪ್ರಾಪ್ತ ಬಾಲಕರಿಂದ ಕಿರುಕುಳ ಹಿನ್ನಲೆ ‌15 ವರ್ಷದ ಬಾಲಕಿ ನೇಣಿಗೆ ಶರಣಾಗಿರುವ ಘಟನೆ ಮಂಡ್ಯ (mandya) ತಾಲೂಕಿನ ಹನಕೆರೆ ಗ್ರಾಮದಲ್ಲಿ ನಡೆದಿದೆ. ಇಂಪನ(15) ಮೃತ ಬಾಲಕಿ. ಬಾಲಕಿಯನ್ನ ಪ್ರೀತಿಸುವ ವಿಚಾರವಾಗಿ ಯುವಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಬಾಲಕಿಗೆ ಪ್ರೀತಿಸುವಂತೆ ಕೂಡ ಬಾಲಕರು ಒತ್ತಾಯ ಮಾಡಿದ್ದಾರೆ. ಇವರ ಮಾತಿನ ಚಕಮಕಿಯ ಆಡಿಯೋ ವೈರಲ್ ಆಗಿದೆ.

ಅಷ್ಟೇ ಅಲ್ಲ, ಅದನ್ನು ಮೃತ ಬಾಲಕಿಯ ತಾಯಿಯ ವಾಟ್ಸಪ್​ಗೂ ಬಾಲಕರು ಕಳುಹಿಸಿದ್ದಾರೆ. ಇದರಿಂದ ಮನನೊಂದು ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆ ನಂತರ ಅಪ್ರಾಪ್ತ ಬಾಲಕರು ಪರಾರಿಯಾಗಿದ್ದು, ಈ ಕುರಿತು ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ ಕಾಣೆಯಾಗಿರುವ ಬಾಲಕರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ:ಪೋಷಕರಿಗೆ ಕ್ಷಮೆ ಕೋರಿ ರೈಲಿಗೆ ಸಿಲುಕಿ ಯುವಕ ಆತ್ಮಹತ್ಯೆ, ದೇಹದ ಅರ್ಧ ಭಾಗಕ್ಕೆ ಹುಡುಕಾಟ

ಸಾಲ ಬಾಧೆ ಹಿನ್ನೆಲೆ ಲಾಡ್ಜ್​ನಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಕೋಲಾರ: ಮಾಲೂರು ತಾಲೂಕಿನ ಚಿಕ್ಕತಿರುಪತಿ ಗ್ರಾಮದ ಆದಿಶೇಷ ಬಾರ್ ಆ್ಯಂಡ್​​ ರೆಸ್ಟೋರೆಂಟ್​ನಲ್ಲಿ ಸಾಲಬಾಧೆಗೆ ಬೇಸತ್ತು ಸಿಬ್ಬಂದಿ ಶ್ರೀರಾಮ್(40) ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇತ್ತೀಚೆಗೆ ಆನ್​ಲೈನ್ ಗ್ಯಾಂಬ್ಲಿಂಗ್​ನಲ್ಲಿ ಹಣ ಕಳೆದುಕೊಂಡು ಸಾಲಕ್ಕೆ ಸಿಲುಕಿದ್ದ ಶ್ರೀರಾಮ್, ಸಾಲಗಾರರ ಕಾಟ ತಾಳಲಾರದೆ ಮನನೊಂದು ನೇಣುಬಿಗಿದುಕೊಂಡು ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಟಿಪ್ಪರ್​ಗೆ ಬೈಕ್​ ಡಿಕ್ಕಿ; ಟೆಕ್ಕಿ ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ: ಗುಡಿಬಂಡೆ ತಾಲೂಕಿನ ಮ್ಯಾಕಲಹಳ್ಳಿ ಬಳಿ ಟಿಪ್ಪರ್​ಗೆ ಬೈಕ್​ ಡಿಕ್ಕಿಯಾಗಿ ಟೆಕ್ಕಿ ಚಿರಾಯು(24) ಸಾವನ್ನಪ್ಪಿದ್ದಾರೆ. ​ಬೆಂಗಳೂರಿನ ಗಾಂಧಿನಗರದ ನಿವಾಸಿಯಾದ ಚಿರಾಯು, ವೀಕೆಂಡ್ ಹಿನ್ನೆಲೆ ಮೋಜು ಮಸ್ತಿಗೆ ಬೈಕ್​ ರೈಡ್ ಬಂದಿದ್ದ. ಇನ್ನು ಗಾಯಗೊಂಡ ಹಿಂಬದಿ ಸವಾರನಿಗೆ ಬೆಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಘಟನೆ ಸಂಬಂಧ ಗುಡಿಬಂಡೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಿದ್ಯುತ್ ತಂತಿ ತಗುಲಿ ವೃದ್ದೆ ಸಾವು

ಶಿವಮೊಗ್ಗ: ವಿದ್ಯುತ್ ತಂತಿ ತಗುಲಿ ವೃದ್ದೆ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಪಾರ್ವತಮ್ಮ (67) ಮೃತ ದುರ್ದೈವಿ. ತೋಟದ ಪಂಪ್ ಸೆಟ್ಟಿನ ವಿದ್ಯುತ್ ವೈಯರ್ ಬೇಲಿಗೆ ಸುತ್ತಿಟ್ಟಿದ್ದ ಪರಿಣಾಮ ಬೇಲಿಗೆ ವಿದ್ಯುತ್ ಪ್ರವಹಿಸಿದೆ. ಈ ವೇಳೆ ಬೇಲಿ ಮುಟ್ಟಿದ ವೃದ್ದೆ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ರಿಪ್ಪನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ