ಮಂಡ್ಯ, ಸೆ.11: ಮಂಡ್ಯದ ನಾಗಮಂಗಲ(Nagamangala)ದ ಬದರಿಕೊಪ್ಪಲಿನಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ಮಾಡಿದ ಆರೋಪ ಕೇಳಿಬಂದಿದ್ದು, ಪೊಲೀಸ್ ಠಾಣೆ ಎದುರು ಗಣಪತಿ ಮೂರ್ತಿ ನಿಲ್ಲಿಸಿ ಹಿಂದೂಗಳು ಪ್ರತಿಭಟನೆ ನಡೆಸಿದ್ದಾರೆ. ಇಂದು ಅದ್ದೂರಿಯಾಗಿ ಗಣೇಶ ಮೂರ್ತಿ ವಿಸರ್ಜನೆ ಮಾಡಲಾಗುತ್ತಿತ್ತು. ನಾಗಮಂಗಲದ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಮೆರವಣಿಗೆ ಬಂದ ವೇಳೆ ಅನ್ಯಕೋಮಿನ ಯುವಕರು ಕಲ್ಲುತೂರಾಟ ನಡೆಸಿದ್ದಾರೆ.
ಈ ವೇಳೆ ಹಿಂದೂ-ಮುಸ್ಲಿಂ ಯುವಕರ ನಡುವೆ ವಾಕ್ಸಮರ, ತಳ್ಳಾಟ ನೂಕಾಟವಾಗಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಹರಸಾಹಸ ನಡೆಸಿದ್ದಾರೆ. ಬಳಿಕ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕಾಗಿ ಆಗ್ರಹಿಸಿ ಪೊಲೀಸ್ ಠಾಣೆ ಎದುರು ಗಣೇಶ ಮೂರ್ತಿ ನಿಲ್ಲಿಸಿ ಹಿಂದೂಗಳು ಪ್ರತಿಭಟನೆ ನಡೆಸಿದ್ದಾರೆ. ಕಳೆದ ವರ್ಷವೂ ಇದೇ ದರ್ಗಾ ಮುಂಭಾಗ ಗಲಾಟೆ ನಡೆದಿತ್ತು. ಮೆರವಣಿಗೆ ವೇಳೆ ದರ್ಗಾ ಮುಂದೆ ತಮಟೆ, ಡೊಳ್ಳು ಬಾರಿಸದಂತೆ ಕಿರಿಕ್ ಆಗಿತ್ತು. ಈ ಬಾರಿ ಕಲ್ಲೆಸೆತ ನಡೆದಿದ್ದು, ನಾಗಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:Video: ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು
ತುಮಕೂರು: ಜಿಲ್ಲೆಯ ಮಧುಗಿರಿ ಪಟ್ಟಣದ ಮೇಕೆಬಂಡೆ ಬಳಿ ಗಣೇಶ ವಿಸರ್ಜನೆ ಬಳಿಕ ಪಟಾಕಿ ಹಚ್ಚಿದ ವಿಚಾರಕ್ಕೆ ಗಲಾಟೆ ನಡೆದಿದ್ದು, ಈ ವೇಳೆ ಮಧು ಎಂಬುವನಿಗೆ ದುಷ್ಕರ್ಮಿಗಳು ಚಾಕು ಇರಿದಿದ್ದಾರೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಗಲಾಟೆ ತೆಗೆದು ಚಾಕು ಇರಿದ ಆರೋಪ ಕೇಳಿಬಂದಿದೆ. ಮಧು ಹೊಟ್ಟೆ ಭಾಗಕ್ಕೆ ಇರಿತದಿಂದ ಗಂಭೀರ ಗಾಯಗೊಂಡಿದ್ದು, ಕೂಡಲೇ ಮಧುಗಿರಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:59 pm, Wed, 11 September 24