ಅಯೋಧ್ಯೆ, ಮಂಡ್ಯದಲ್ಲಿ ಒಂದೇ ದಿನ ರಾಮ ಮಂದಿರ ಉದ್ಘಾಟನೆ; ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ವಿಗ್ರಹವೇ ಪ್ರತಿಷ್ಠಾಪನೆ
ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ಶ್ರೀರಾಮ ಮಂದಿರದಲ್ಲಿ ಜನವರಿ 22 ರಂದು ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಈ ದಿನದಂದೇ ಮಂಡ್ಯ ಜಿಲ್ಲೆಯಲ್ಲಿ ರಾಮ ಮಂದಿರದ ಲೋಕಾರ್ಪಣೆಯಾಗಲಿದೆ. ವಿಶೇಷ ಏನೆಂದರೆ, ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಯಾಗುತ್ತಿರುವ ರಾಮನ ವಿಗ್ರಹ ಹಾಗೂ ಮಂಡ್ಯದಲ್ಲಿ ಪ್ರತಿಷ್ಠಾಪನೆಯಾಗುತ್ತಿರುವ ರಾಮನ ವಿಗ್ರಹವನ್ನು ಕೆತ್ತನೆ ಮಾಡಿದ ಶಿಲ್ಪಿ ಮೈಸೂರಿನ ಅರುಣ್ ಯೋಗಿರಾಜ್.
ಮಂಡ್ಯ, ಜ.18: ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ಶ್ರೀರಾಮ ಮಂದಿರದಲ್ಲಿ (Ayodhya Ram Mandir) ಜನವರಿ 22 ರಂದು ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಈ ದಿನದಂದೇ ಮಂಡ್ಯ (Mandya) ಜಿಲ್ಲೆಯಲ್ಲಿ ರಾಮ ಮಂದಿರದ ಲೋಕಾರ್ಪಣೆಯಾಗಲಿದೆ. ವಿಶೇಷ ಏನೆಂದರೆ, ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಯಾಗುತ್ತಿರುವ ರಾಮನ ವಿಗ್ರಹ ಹಾಗೂ ಮಂಡ್ಯದಲ್ಲಿ ಪ್ರತಿಷ್ಠಾಪನೆಯಾಗುತ್ತಿರುವ ರಾಮನ ವಿಗ್ರಹವನ್ನು ಕೆತ್ತನೆ ಮಾಡಿದ ಶಿಲ್ಪಿ ಮೈಸೂರಿನ ಅರುಣ್ ಯೋಗಿರಾಜ್.
ಮಂಡ್ಯದ ಲೇಬರ್ ಕಾಲೋನಿಯಲ್ಲಿ ರಾಮ ಮಂದಿರವನ್ನು ಜೀರ್ಣೋದ್ಧಾರ ಮಾಡಲಾಗಿದೆ. ಈ ಮಂದಿರದಲ್ಲಿ ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರೇ ಕೆತ್ತನೆ ಮಾಡಿದ್ದು, ಈ ವಿಗ್ರಹದ ಪ್ರತಿಷ್ಠಾಪನೆಗೆ ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ.
ಇದನ್ನೂ ಓದಿ: ಅಯೋಧ್ಯೆಗೆ ರಾಮ ಲಲ್ಲಾ ಮೂರ್ತಿ ಆಗಮನ, ರಾಮ ಹೇಗಿದ್ದಾನೆ ಎಂದು ಚಿತ್ರಗಳಲ್ಲಿ ನೋಡಿ
ರಾಮನ ಮೂರ್ತಿ ಜೊತೆ ಸೀತೆ, ಲಕ್ಷ್ಮಣ ಹಾಗೂ ಹನುಮಂತನ ವಿಗ್ರಹಗಳ ಕೆತ್ತನೆ ಮಾಡಲಾಗಿದ್ದು, ಒಂದು ವರ್ಷದ ಹಿಂದೆಯೇ ಈ ಮೂರ್ತಿಗಳನ್ನ ಕೆತ್ತನೆ ಮಾಡಿದ್ದರು. ಅಯೋಧ್ಯೆಯ ರಾಮಮಂದಿರ ಉದ್ಘಾಟನೆಯಂದೇ ಮಂಡ್ಯದಲ್ಲಿಯೂ ರಾಮನ ಪ್ರತಿಷ್ಠಾಪನೆ ಮಾಡಬೇಕು ಎಂದು ದೇವಾಲಯದ ಟ್ರಸ್ಟ್ ತೀರ್ಮಾನಿಸಿತ್ತು.
ಅದರಂತೆ, ಸೋಮವಾರ ಅದ್ದೂರಿಯಾಗಿ ದೇಗುಲ ಲೋಕಾರ್ಪಣೆಗೆ ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಯ ಪೂಜಾ ಕೈಂಕರ್ಯದಂತೆ ಇಲ್ಲಿಯೂ ದೇಗುಲ ಉದ್ಘಾಟನೆ ಮಾಡಲಾಗುತ್ತಿದೆ. ಲೇಬರ್ ಕಾಲೋನಿ ನಿವಾಸಿಗಳೇ ಟ್ರಸ್ಟ್ ರಚಿಸಿಕೊಂಡು ಈ ರಾಮ ಮಂದಿರವನ್ನು ನಿರ್ಮಿಸಿದ್ದಾರೆ. ದೇವಾಲಯ ಲೋಕಾರ್ಪಣೆ ದಿನ ಹತ್ತಿರವಾಗುತ್ತಿದ್ದಂತೆ ನಿವಾಸಿಗಳಲ್ಲಿ ಸಂಭ್ರಮ ಮನೆ ಮಾಡಿದೆ.
ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಬಗ್ಗೆ ಮತ್ತಷ್ಟು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ