ಬಂಡೆಯನ್ನು ತೆಗೆದುಕೊಂಡು ಹೋಗಿ ಕೆಆರ್‌ಎಸ್ ಗೇಟ್‌ಗೆ ಇಟ್ಟುಬಿಡಿ: ಡಿಕೆ ಶಿವಕುಮಾರ್ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಹಿತರಕ್ಷಣಾ ಸಮಿತಿ ವತಿಯಿಂದ ಪ್ರತಿಭಟನೆಯಲ್ಲಿ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು, ಬಂಡೆಯನ್ನ ತೆಗೆದುಕೊಂಡು ಹೋಗಿ ಕೆಆರ್‌ಎಸ್ ಗೇಟ್‌ಗೆ ಇಟ್ಟುಬಿಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಬಗ್ಗೆ ವ್ಯಂಗ್ಯವಾಡಿದ್ದಾರೆ.
ಮಂಡ್ಯ, ಸೆಪ್ಟೆಂಬರ್ 23: ಕಳೆದ ನಾಲ್ಕೈದು ವರ್ಷ ಉತ್ತಮ ಮಳೆಯಾಗುತ್ತು. ಇದರಿಂದ ರೈತರಿಗೆ ಆತಂಕ ದೂರವಾಗಿತ್ತು. ಇದೀಗ ಮಳೆ ಕೊರತೆಯಿಂದ ರೈತರಿಗೆ ಆತಂಕವಾಗಿದೆ. 125 ವರ್ಷದಿಂದ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಬೆಂಗಳೂರು ಚಿಂತೆ ಬಿಟ್ಟು ಮೊದಲು ನೀರಿನ ಸಮಸ್ಯೆ ಬಗೆಹರಿಸಿ ಎಂದು ಡಿಸಿಎಂ ಡಿಕೆ ಶಿವಕುಮಾರ್ಗೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಟಾಂಗ್ ನೀಡಿದರು. ಈ ವೇಳೆ ಡಿ.ಕೆ.ಶಿವಕುಮಾರ್‌ರನ್ನ ಬಂಡೆ ಅಂತಾರೆ ಎಂದ ಮಹಿಳೆಗೆ ಆ ಬಂಡೆಯನ್ನ ತೆಗೆದುಕೊಂಡು ಹೋಗಿ ಕೆಆರ್‌ಎಸ್ ಗೇಟ್‌ಗೆ ಇಟ್ಟುಬಿಡಿ ಎಂದು ಬಗ್ಗೆ ವ್ಯಂಗ್ಯವಾಡಿದ್ದಾರೆ.
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಹಿತರಕ್ಷಣಾ ಸಮಿತಿ ಪ್ರತಿಭಟನೆ ಸ್ಥಳದಲ್ಲಿ ಮಾತನಾಡಿದ ಅವರು, ನಮಗೆ ತಿಳುವಳಿಕೆ ಇಲ್ಲದ ದಿನದಿಂದಲು ಹೋರಾಟ ಮಾಡುತ್ತಿದೆ. ಈ ವಿವಾದ ಬಗೆ ಹರಿಸಿಲ್ಲ ಅಂತ ಎಲ್ಲಾ ರಾಜಕಾರಣಿಗಳ ಬಗ್ಗೆ ಆಕ್ರೋಶ ಇದೆ ಎಂದರು.
ಇಂದು ಗಂಭೀರ ಪರಿಸ್ಥಿತಿಯಲ್ಲಿ ರೈತರು ಧ್ವನಿ ಎತ್ತಿದ್ದಾರೆ. ಪಕ್ಷ ಬೇದ ಮರೆತು ಎಲ್ಲ ಹೋರಾಟ ಮಾಡುತ್ತಿದ್ದಾರೆ. 30 ಸಾವಿರ ಕೋಟಿ ಬೆಳೆ ನಷ್ಟ ಆಗಿದೆ. ಭತ್ತ, ಕಬ್ಬನ್ನು ಬೆಳೆಯುವ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾವೇರಿ ನಿರ್ವಹಣ ಪ್ರಾಧಿಕಾರದಲ್ಲಿ ವಿಷಯ ಮಂಡನೆ ಮಾಡುವಲ್ಲಿ ನಮ್ಮ ಅಧಿಕಾರಿಗಳು ಲಘುವಾಗಿ ನಡೆದುಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ಜಯ ಸಿಗುವವರೆಗೂ ರೈತರ ಹೋರಾಟಕ್ಕೆ ಬೆಂಬಲ ಇದೆ. ಯಾವುದೇ ನ್ಯಾಯಾಂಗ ನಿಂದನೆ ಆಗಲ್ಲ. ನೀವು ತತಕ್ಷಣ ನೀರು ನಿಲ್ಲಿಸಿ. ನಮ್ಮ ಪ್ರತಿನಿಧಿಗಳು ಸಭೆಗೆ ಹೋಗಲ್ಲ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಮಾತನಾಡುತ್ತಾರೆ.
ಸುಪ್ರೀಂಕೋರ್ಟ್ ತೀರ್ಪಿನಂತೆ ನೀರು ಬಿಡಬೇಕು. ಇಲ್ಲದಿದ್ದರೇ ನ್ಯಾಯಾಂಗ ನಿಂದನೆ ಆಗುತ್ತೆ ಅಂತಾ ರಾಜ್ಯ ಸರ್ಕಾರದವರು ಹೇಳುತ್ತಿದ್ದಾರೆ. ತಮಿಳುನಾಡಿಗೆ ನೀರು ನಿಲ್ಲಿಸಿದ್ದರೆ ನ್ಯಾಯಾಂಗ ನಿಂದನೆ ಆಗಲ್ಲ. ಸುಪ್ರೀಂಗೆ ನೀರು ಬಿಡಲು ಆಗಲ್ಲ ಎಂದು ಮೇಲ್ಮನವಿ ಸಲ್ಲಿಸಿ ಎಂದು 2016 ತೀರ್ಪು ಪ್ರಸ್ತಾಪಿಸಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದರು.
ಪಾಲಿಸಲು ಆಗದ ತೀರ್ಪನ್ನ ಪಾಲಿಸದಿದ್ದರೆ ನ್ಯಾಯಾಂಗ ನಿಂದನೆ ಆಗಲ್ಲ. ಆಂಧ್ರದ ನೀರಾವರಿ ಪ್ರಕರಣ ಸಂಬಂಧ ಆ ನ್ಯಾಯಮೂರ್ತಿ ಉದಮ್ ಮಲ್ಲಿಕ್ ಹೇಳಿದ್ದರು. ಸೆ. 22, 2016 ನ್ಯಾಯಾಲಯ ಅದನ್ನ ಎತ್ತಿಹಿಡಿದಿತ್ತು. ಅದೇ ರೀತಿ ರಾಜ್ಯ ಸರ್ಕಾರ ನೀರು ಬಿಡಲು ಆಗಲ್ಲ ಎಂದು ಮೇಲ್ಮನವಿ ಸಲ್ಲಿಸಲಿ ಎಂದಿದ್ದಾರೆ.
ಕಾವೇರಿ ಹೋರಾಟದಲ್ಲಿ ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ಪ್ರಸ್ತಾಪ
ಕಾವೇರಿ ಹೋರಾಟದಲ್ಲಿ ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ಪ್ರಸ್ತಾಪಿಸಿದ್ದು, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದು ಜನರ ಉಳಿಸಲು. ಸಾರ್ವಜನಿಕರ ಮುಂದೆ ನಾನು ಜಾಗಟೆ ಹೊಡೆಯಲ್ಲ. ಉತ್ತರ ಕರ್ನಾಟಕದಲ್ಲಿಯು ಬಹಳಷ್ಟು ನೀರಾವರಿ ಸಮಸ್ಯೆ ಇದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಕಾವೇರಿ ನದಿ ನೀರು ವಿಚಾರದಲ್ಲಿ ಸರ್ಕಾರ ಆರಂಭದಲ್ಲೇ ಎಡವಿದೆ: ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ
ಮೈಸೂರಿನ ಮಹಾರಾಜರು ಚಿನ್ನ ಅಡವಿಟ್ಟು ಡ್ಯಾಂ ಕಟ್ಟಿದ್ದರು. ಡ್ಯಾಂ ಕಟ್ಟುವುದಕ್ಕೆ ಮದ್ರಾಸ್ ಪ್ರಾಂತ್ಯದವರು ತಕರಾರು ಮಾಡಿದ್ದರು. ಅಂದು ನಿರ್ಣಯವಾಗಿದ್ದು ಇಂದು ಪಾಲನೆಯಾಗುತ್ತಿದೆ. ತಮಿಳುನಾಡಿನವರು ಕೇಳಿದಾಗಲೆಲ್ಲಾ ನೀರುಬಿಟ್ಟುಕೊಂಡು ಬರಲಾಗಿದೆ. ಕಾವೇರಿ ಟ್ರಿಬ್ಯುನಲ್ ರಚನೆಯಾದ ನಂತರ ಮಧ್ಯಂತರ ತೀರ್ಪು ಬಂತು.
ತಮಿಳುನಾಡಿನ ರಾಜಕೀಯ ಒತ್ತಡದಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಮಾಜಿ ಪ್ರಧಾನಿ ಹೆಚ್‌ಡಿಡಿ ಈ ಬಗ್ಗೆ ಸಾಕಷ್ಟು ಹೋರಾಟ ಮಾಡಿದ್ದರು. ಇದಕ್ಕೆ ಸಾಕಷ್ಟು ದಾಖಲೆಗಳು ಇವೆ. ಕೆಲ ಸರ್ಕಾರಗಳು H.D.ದೇವೇಗೌಡರ ಸಲಹೆ ಸ್ವೀಕಾರ ಮಾಡಲಿಲ್ಲ. ಹೀಗಾಗಿ ರಾಜ್ಯದ ಪರ ತೀರ್ಪು ಬರುವುದರಲ್ಲೂ ಹಿನ್ನಡೆಯಾಯಿತು ಎಂದಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:33 pm, Sat, 23 September 23